Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Arshdeep Singh: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲು ಕನಸು ಕಾಣುತ್ತಿರುವ ಅರ್ಷದೀಪ್ ಸಿಂಗ್

ವಿಶ್ವ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಟಾಪ್ ಕ್ಲಾಸ್ ಬೌಲರ್‌ಗಳು ಮಿಂಚುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ವೇಗದ ಬೌಲರ ಅರ್ಷದೀಪ್ ಸಿಂಗ್ ಕೂಡ ತಮ್ಮ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಭಾರತ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ಟಿ20 ವಿಶ್ವಕಪ್ 2024ರಲ್ಲಿ ಟೀಮ್ ಇಂಡಿಯಾದ ವಿಕೆಟ್ ಟೇಕರ್ ಬೌಲರ್ ಎನಿಸಿಕೊಂಡಿದ್ದ ಅರ್ಷದೀಪ್ ಸಿಂಗ್ ಟೂರ್ನಿಯುದ್ದಕ್ಕೂ ಭರ್ಜರಿ ಪ್ರದರ್ಶನ ನೀಡಿದ್ದರು. ಜೊತೆಗೆ ಟೀಮ್ ಇಂಡಿಯಾ ಚಾಂಪಿಯನ್ ಆಗಲು ಕೂಡ ಪ್ರಮುಖ ಪಾತ್ರವಹಿಸಿದ್ದರು. ಈಗ ಅವರು ಭಾನುವಾರ ಗ್ವಾಲಿಯರ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಕಮಾಲ್ ಮಾಡಿದ್ದಾರೆ. ಈ ಮೂಲಕ ಅವರು ಬಿಸಿಸಿಐ ಆಯ್ಕೆ ಸಮಿತಿ ಗಮನ ಸೆಳೆದಿದ್ದು, ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ಆಡುವ ಕನಸು ಕಾಣುತ್ತಿದ್ದಾರೆ.

Arshdeep Singh Will play Test series against New Zealand

ಟೆಸ್ಟ್ ಕ್ರಿಕೆಟ್ ಆಡ್ತಾರಾ?

ಇಲ್ಲಿವರಗೂ ಅಪಾಯಕಾರಿ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರು ಭಾರತ ಟೆಸ್ಟ್ ತಂಡದಲ್ಲಿ ಆಡುವ ಅವಕಾಶವನ್ನು ಪಡೆದಿಲ್ಲ. ಟೀಮ್ ಇಂಡಿಯಾ ಇದೇ ತಿಂಗಳು ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ನವೆಂಬರ್ 1 ರವರೆಗೆ ನಡೆಯಲಿದೆ. ಇದೀಗ ಅರ್ಷದೀಪ್ ಸಿಂಗ್ ಅವರ ಇತ್ತೀಚಿನ ಪ್ರದರ್ಶನವನ್ನು ನೋಡಿದರೆ, ಅವರು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಮೊದಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆಯಾಗಬಹುದು. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅರ್ಷದೀಪ್ ಸಿಂಗ್ ಉತ್ತಮ ಪ್ರದರ್ಶನ ನೀಡಿದರೆ, ನಂತರ ಅವರನ್ನು ನವೆಂಬರ್ 22 ರಿಂದ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧ ಪ್ರತಿಷ್ಠಿತ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲೂ ಆಡುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತ ತಂಡಕ್ಕೆ ಅರ್ಷದೀಪ್ ಸಿಂಗ್ ಅವರಂತಹ ವೇಗದ ಬೌಲರ್‌ನ ಅವಶ್ಯಕತೆಯಿದೆ. ಅವರ ವೇಗದ ಬೌಲಿಂಗ್ ಕಾಂಗೂರು ನೆಲದ ಬೌನ್ಸಿ ಪಿಚ್‌ಗಳಲ್ಲಿ ಭಾರತಕ್ಕೆ ಲಾಭದಾಯಕವಾಗಿದೆ. ಜೊತೆಗೆ ಕಾಂಗೂರು ಪಡೆಯ ಬ್ಯಾಟರ್‌ಗಳಿಗೆ ಅವರು ಕಾಟ ನೀಡಬಹುದು. ಹೀಗಾಗಿ ಅವರ ಸಾಮರ್ಥ್ಯದ ಮೇಲೆ ಅವಕಾಶ ಸಿಗಬಹುದು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ 2025ರ ಜನವರಿ 7 ರವರೆಗೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಐದುಟೆಸ್ಟ್ ಪಂದ್ಯಗಳು ಕ್ರಮವಾಗಿ ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿವೆ. ಆಸ್ಟ್ರೇಲಿಯಾದಲ್ಲಿ ಭಾರತ ಕಳೆದ ಎರಡು ಸರಣಿಗಳನ್ನು ಗೆದ್ದಿದೆ. 2018-19 ಮತ್ತು 2020-21ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಭಾರತ ಎರಡೂ ಸಂದರ್ಭಗಳಲ್ಲಿ ಕಾಂಗರೂ ತಂಡವನ್ನು 2-1 ಅಂತರಗಳಿಂದ ಸೋಲಿಸಿದೆ.

Story first published: Monday, October 7, 2024, 10:40 [IST]
Other articles published on Oct 7, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+