ದ್ವಿಶತಕದ ಮೂಲಕ 'ಟೆಸ್ಟ್ ಕ್ರಿಕೆಟ್‌ನಲ್ಲಿ ನಾನೇ ಕಿಂಗ್' ಎಂದ ಸ್ಟೀವ್ ಸ್ಮಿತ್!

ಮ್ಯಾನ್ಚೆಸ್ಟರ್, ಸೆಪ್ಟೆಂಬರ್ 6: ಟೆಸ್ಟ್ ಕ್ರಿಕೆಟ್‌ನಲ್ಲಿರುವ ವಿಶ್ವ ದಾಖಲೆಗಳನ್ನು ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಒಂದೊಂದಾಗಿ ಮುರಿಯುತ್ತಾ ಸಾಗುತ್ತಿದ್ದಾರೆ. ಗುರುವಾರ (ಸೆಪ್ಟೆಂಬರ್ 5) ಆಸ್ಟ್ರೇಲಿಯಾ vs ಇಂಗ್ಲೆಂಡ್ 4ನೇ ಆ್ಯಷಸ್ ಟೆಸ್ಟ್‌ನಲ್ಲಿ ಸ್ಮಿತ್ ದ್ವಿಶತಕ ಬಾರಿಸಿ ವಿಶ್ವದ ಗಮನ ಸೆಳೆದರು.
ಮ್ಯಾನ್ಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆದ 4ನೇ ಆ್ಯಷಸ್ ಟೆಸ್ಟ್‌ನ 2ನೇ ದಿನದಾಟ ವೇಳೆ ಆಸ್ಟ್ರೇಲಿಯಾ ಇನ್ನಿಂಗ್ಸ್‌ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ಸ್ಮಿತ್ 211 ರನ್ ಗಳಿಸಿ ಇಂಗ್ಲೆಂಡ್ ನಾಯಕ ಜೋ ರೂಟ್‌ಗೆ ವಿಕೆಟ್ ಒಪ್ಪಿಸಿದ್ದಾರೆ.
ಇಂಗ್ಲೆಂಡ್ vs ಆಸ್ಟ್ರೇಲಿಯಾ, 4ನೇ ಆ್ಯಷಸ್ ಟೆಸ್ಟ್, Live ಸ್ಕೋರ್‌ಕಾರ್ಡ್
ಈ ಪಂದ್ಯದಲ್ಲಿ ಶತಕ ಬಾರಿಸಿದಾಗಲೇ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗದ 26 ಶತಕ ಬಾರಿಸಿದ ಸಾಧನೆಗಾಗಿ ಸ್ಮಿತ್ (121 ಇನ್ನಿಂಗ್ಸ್), ಸಚಿನ್ ತೆಂಡೂಲ್ಕರ್ (136 ಇನ್ನಿಂಗ್ಸ್) ದಾಖಲೆ ಮೀರಿಸಿದ್ದರು. ಈಗ 3ನೇ ಬಾರಿಗೆ ಟೆಸ್ಟ್ ದ್ವಿಶತಕ ಬಾರಿಸಿದ ಕೀರ್ತಿ ಸ್ಟೀವ್ ಅವರದ್ದಾಗಿದೆ. ಟೆಸ್ಟ್ ವೇಗದ 26 ಶತಕ ಸಾಧನೆಯಲ್ಲಿ ಡಾನ್ ಬ್ರಾಡ್‌ಮನ್ (ಆಸೀಸ್) ಬಳಿಕ ಸ್ಮಿತ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಚೆಂಡು ವಿರೂಪ ಪ್ರಕರಣದಲ್ಲಿ ಪಾಲ್ಗೊಂಡು ಕ್ರಿಕೆಟ್ ಆಸ್ಟ್ರೇಲಿಯಾದಿಂದ ಒಂದು ವರ್ಷದ ನಿಷೇಧಕ್ಕೀಡಾಗಿದ್ದ ಸ್ಮಿತ್, ನಿಷೇಧ ಮುಗಿಸಿ ಮೊದಲ ಬಾರಿಗೆ ಆ್ಯಷಸ್ ಟೆಸ್ಟ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಉತ್ತಮ ಪ್ರದರ್ಶನವೂ ನೀಡುತ್ತಿದ್ದಾರೆ. 4ನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಆಸೀಸ್ 126 ಓವರ್‌ಗೆ 497 ರನ್ ಗಳಿಸಿತ್ತು.
ಮೊದಲ ಟೆಸ್ಟ್‌ನಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ್ದ ಸ್ಮಿತ್, 2ನೇ ಟೆಸ್ಟ್ ವೇಳೆ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಬೌನ್ಸರ್‌ನಿಂದ ಗಾಯಗೊಂಡು ತಂಡದಿಂದ ಹೊರ ಬಿದ್ದಿದ್ದರು. 3ನೇ ಟೆಸ್ಟ್‌ನಲ್ಲಿ ಆಡಿರಲಿಲ್ಲ. ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಸ್ಟೀವ್ ಇತ್ತೀಚೆಗೆ ವಿರಾಟ್ ಕೊಹ್ಲಿಯನ್ನು ಮೀರಿಸಿ ನಂ.1 ಸ್ಥಾನಕ್ಕೇರಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications