ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆ್ಯಶಸ್ ಸರಣಿ: 4ನೇ ಟೆಸ್ಟ್ ಪಂದ್ಯದಲ್ಲೂ ಹಿಡಿತ ಸಾಧಿಸಿದ ಆಸ್ಟ್ರೇಲಿಯಾಗೆ ಮುನ್ನಡೆ LIVE SCORE

Ashes test

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದು, ನಾಲ್ಕನೇ ದಿನದ ಎರಡನೇ ಸೆಷನ್‌ನಲ್ಲಿ 229ರನ್‌ಗಳ ಮುನ್ನಡೆ ಸಾಧಿಸಿದೆ.

ದ್ವಿತೀಯ ಇನ್ನಿಂಗ್ಸ್‌ನಲ್ಲಿ 107 ರನ್‌ಗೆ 4 ವಿಕೆಟ್ ಕಳೆದುಕೊಂಡಿರುವ ಪ್ಯಾಟ್ ಕಮಿನ್ಸ್ ಪಡೆ 229ರನ್‌ಗಳ ಮನ್ನಡೆ ಪಡೆದಿದೆ. ಮಾರ್ಕಸ್ ಹ್ಯಾರಿಸ್ 27 ರನ್, ಡೇವಿಡ್ ವಾರ್ನರ್ 3, ಮಾರ್ನಸ್ ಲ್ಯಾಬುಶೈನ್ 29, ಸ್ಟೀವನ್ ಸ್ಮಿತ್ 23 ರನ್‌ಗಳಿಗೆ ವಿಕೆಟ್ ಒಪ್ಪಿಸಿದ್ರು.

ಟೀಂ ಇಂಡಿಯಾ ಸೋಲಿಗೆ 3 ಪ್ರಮುಖ ಕಾರಣ ತಿಳಿಸಿದ ಗೌತಮ್ ಗಂಭೀರ್ಟೀಂ ಇಂಡಿಯಾ ಸೋಲಿಗೆ 3 ಪ್ರಮುಖ ಕಾರಣ ತಿಳಿಸಿದ ಗೌತಮ್ ಗಂಭೀರ್

ಆದ್ರೆ ಮೊದಲ ಇನ್ನಿಂಗ್ಸ್‌ನಲ್ಲಿ ಶತಕದ ಸರದಾರ ಉಸ್ಮಾನ್ ಖವಾಜ ಅಜೇಯ 19 ರನ್ ಕಲೆಹಾಕಿ ಬ್ಯಾಟ್ ಬೀಸುತ್ತಿದ್ದು, ಕ್ಯಾಮರನ್ ಗ್ರೀನ್ ಸಾಥ್ ನೀಡಿದ್ದಾರೆ. ಇದಕ್ಕೂ ಮೊದಲು ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ 8 ವಿಕೆಟ್ ನಷ್ಟಕ್ಕೆ 416 ರನ್ ಕಲೆಹಾಕಿ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ 294 ರನ್‌ಗಳಿಗೆ ಆಲೌಟ್ ಆಗುವ ಮೂಲಕ 122ರನ್‌ಗಳ ಹಿನ್ನಡೆ ಅನುಭವಿಸಿತ್ತು. ಇಂಗ್ಲೆಂಡ್ ಪರ 113 ರನ್ ಕಲೆಹಾಕಿದ ಜಾನಿ ಬೈಸ್ಟ್ರೋವ್ ಏಕಾಂಗಿ ಹೋರಾಟ ನಡೆಸಿದ್ರು.

ಎರಡನೇ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡಿದ್ದರೂ ಆಸ್ಟ್ರೇಲಿಯಾ ಉತ್ತಮ ಲೀಡ್ ಪಡೆದಿದ್ದು, ದಿನದ ಕೊನೆಯೊಳಗೆ ಇನ್ನಿಂಗ್ಸ್‌ ಕೊನೆಗೊಳಿಸುವ ಸಾಧ್ಯತೆಯಿದೆ. ಇಂಗ್ಲೆಂಡ್ ಪರ ಮಾರ್ಕ್ ವುಡ್ ಮತ್ತು ಜ್ಯಾಕ್ ಲೀಚ್ ತಲಾ 2 ವಿಕೆಟ್ ಪಡೆದಿದ್ದಾರೆ. ನಾಲ್ಕನೇ ಟೆಸ್ಟ್‌ ಪಂದ್ಯದ ಲೈವ್‌ ಸ್ಕೋರ್ ಈ ಕೆಳಗೆ ಕಾಣಬಹುದು.

1
51146

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಮಾರ್ಕಸ್ ಹ್ಯಾರಿಸ್, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಉಸ್ಮಾನ್ ಖವಾಜಾ, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಝೈ ರಿಚರ್ಡ್ಸನ್, ಮಿಚೆಲ್ ಸ್ವೆಪ್ಸನ್, ಮೈಕೆಲ್ ನೆಸರ್

ಇಂಗ್ಲೆಂಡ್ ತಂಡ ಪ್ಲೇಯಿಂಗ್ XI: ಹಸೀಬ್ ಹಮೀದ್, ಝಾಕ್ ಕ್ರಾಲಿ, ಡೇವಿಡ್ ಮಲನ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮಾರ್ಕ್ ವುಡ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್ ಬೆಂಚ್: ರೋರಿ ಬರ್ನ್ಸ್, ಕ್ರಿಸ್ ವೋಕ್ಸ್, ಡೇನಿಯಲ್ ಲಾರೆನ್ಸ್

Story first published: Saturday, January 8, 2022, 8:58 [IST]
Other articles published on Jan 8, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X