Ashes 3ನೇ ಟೆಸ್ಟ್: 3ನೇ ಟೆಸ್ಟ್ ಗೆಲುವಿನ ಮೇಲೆ ಇಂಗ್ಲೆಂಡ್ ಚಿತ್ತ: 4ನೇ ದಿನ ಆಸಿಸ್ ವೇಗಿಗಳಿಗೆ ಕಠಿಣ ಸವಾಲು
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಆಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೇಲುಗೈ ಸಾಧಿಸಿದೆ. ಬೌಲಿಂಗ್‌ನಲ್ಲಿ ಆಸಿಸ್ ವಿರುದ್ಧ ಮೇಲುಗೈ ಸಾಧಿಸಿರುವ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಬೇಗನೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಉತ್ತಮ ಆರಂಭ ಪಡೆದುಕೊಂಡಿದ್ದು ಆಸ್ಟ್ರೇಲಿಯಾ ನೀಡಿರುವ 251 ರನ್‌ಗಳ ಗುರಿಯನ್ನು ಬೆನ್ನಟ್ಟುವ ವಿಶ್ವಾಸದಲ್ಲಿದೆ.
ಮೂರನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸಾಧಾರಣ ಮೊತ್ತಕ್ಕೆ ಆಲವಟ್ ಮಾಡುವಲ್ಲಿ ಆಸ್ಟ್ರೇಲಿಯಾ ಯಶಸ್ವಿಯಾಗಿದ್ದು ಪಂದ್ಯದಲ್ಲಿ ಇಂಗ್ಲೆಂಡ್ ಹಿಡಿತ ಸಾಧಿಸುವಂತೆ ಮಾಡಿದೆ. ಟ್ರೆವಿಸ್ ಹೆಡ್ ಮಾತ್ರವೇ ಆಸಿಸ್ ಪರ ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು 112 ಎಸೆತಗಳಲ್ಲಿ 77 ರನ್‌ಗಳನ್ನು ಗಳಿಸಿದ್ದರು. ಉಳಿದಂತೆ ಖವಾಜ 43 ರನ್‌ಗಳಿಸಿದ್ದರು. ಹೀಗಾಘಿ ಆಸ್ಟ್ರೇಲಿಯಾ ತಂಡ 224 ರನ್‌ಗಳನ್ನಷ್ಟೇ ಗಳಿಸಿತ್ತು. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಪಡೆದ ಅಲ್ಪ ಮುನ್ನಡೆಯ ಕಾರಣದಿಂದಾಗಿ 251 ರನ್‌ಗಳ ಗುರಿಯನ್ನು ನಿಗದಿಪಡಿಸಿದೆ ಆಸ್ಟ್ರೇಲಿಯಾ.

Live ಸ್ಕೋರ್ ಹೀಗಿದೆ
ಇನ್ನು ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಮಿಚೆಲ್ ಮಾರ್ಶ್ ಅವರ ಭರ್ಜರಿ ಶತಕದ ನೆರವಿನಿಂದಾಗಿ 262 ರನ್‌ಗಳನ್ನು ಗಳಿಸಿತ್ತು. ಮಾರ್ಶ್ ಮಾತ್ರವೇ ಈ ಇನ್ನಿಂಗ್ಸ್‌ನಲ್ಲಿ ಮಿಂಚಿದ್ದು ಉಳಿದ ಆಟಗಾರರು ಸಂಪೂರ್ಣ ವಿಫಲವಾಗಿದ್ದರು. ಆದರೆ ಮಿಚೆಲ್ ಮಾರ್ಶ್ ವಿಕೆಟ್ ಕಳೆದುಕೊಂಡ ಬಳಿಕ ಹಠಾತ್ ಕುಸಿತ ಕಂಡು ಆಸಿಸ್ ಪಡೆ ನಿರಾಸೆ ಅನುಭವಿಸಿತ್ತು.
ಇನ್ನು ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡದ ಬ್ಯಾಟರ್‌ಗಳು ಕೂಡ ಉತ್ತಮ ಪ್ರದರ್ಶನ ನೀಡಲು ವಿಫಲವಾದರು, ನಾಯಕ ಬೆನ್ ಸ್ಟೋಕ್ಸ್ ಮಾತ್ರವೇ ಏಕಾಂಗಿ ಹೋರಾಟ ನೀಡಿದ್ದು 80 ರನ್‌ಗಳ ಕೊಡುಗೆ ನೀಡಿದ್ದರು. ಇದರ ಪರಿಣಾಮವಾಗಿ ಇಂಗ್ಲೆಂಡ್ ತಂಡ 237 ರನ್‌ಗಳನ್ನು ಗಳಿಸಿ 26 ರನ್‌ಗಳ ಹಿನ್ನಡೆ ಅನುಭವಿಸಿತು.
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್ (ನಾಯಕ), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಆಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್
ಬೆಂಚ್: ಜೋಶ್ ಟಂಗ್, ಜೇಮ್ಸ್ ಆಂಡರ್ಸನ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಜೋಶ್ ಹ್ಯಾಜಲ್‌ವುಡ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್‌ಶಾ, ಜೋಶ್ ಇಂಗ್ಲಿಸ್, ಕ್ಯಾಮರೂನ್ ಗ್ರೀನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications