Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ashes 2023: ಇಂಗ್ಲೆಂಡ್ ಬೌಲರ್‌ಗಳ ಭರ್ಜರಿ ಕಮ್‌ಬ್ಯಾಕ್: ಕಷ್ಟಪಟ್ಟು ಅತ್ಯಲ್ಪ ಮುನ್ನಡೆ ಪಡೆದ ಆಸಿಸ್

ಆಶಸ್ ಸರಣಿಯ ಕೊನೆಯ ಪಂದ್ಯ ಕೂಡ ತೀವ್ರ ಪೈಪೋಟಿಯಿಂದ ಸಾಗುತ್ತಿದೆ. ಮೊದಲ ದಿನ ಸಂಪೂರ್ಣ ಮೇಲುಗೈ ಸಾಧಿಸಿದ್ದ ಆಸ್ಟ್ರೇಲಿಯಾ ತಂಡದ ವಿರುದ್ಧ ಎರಡನೇ ದಿನದಾಟದಲ್ಲಿ ಇಂಗ್ಲೆಂಡ್ ಬೌಲರ್‌ಗಳು ಅದ್ಭುತವಾಗಿ ತಿರುಗಿಬಿದ್ದಿದ್ದಾರೆ. ಹೀಗಾಗಿ ಉತ್ತಮ ಬ್ಯಾಟಿಂಗ್ ನಡೆಸಿ ದೊಡ್ಡ ಮುನ್ನಡೆ ಪಡೆಯಬೇಕೆಂಬ ಲೆಕ್ಕಾಚಾರದಲ್ಲಿದ್ದ ಆಸ್ಟ್ರೇಲಿಯಾಗೆ ಭಾರೀ ಆಘಾತವುಂಟಾಗಿದೆ.

ಮೊದಲ ದಿನದಾಟದಲ್ಲಿ 283 ರನ್‌ಗಳನ್ನು ಗಳಿಸಿ ಇಂಗ್ಲೆಂಡ್ ಆಲೌಟ್ ಆದ ಬಳಿಕ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಮೊದಲ ದಿನದಾಟ ಅಂತ್ಯವಾಗುವ ವೇಳೆಗೆ 61 ರನ್‌ಗೆ 1 ವಿಕೆಟ್ ಕಳೆದುಕೊಂಡಿತ್ತು. ಇಲ್ಲಿಂದ ಎರಡನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ಮೊದಲ ಹಿನ್ನಡೆಯುಂಟು ಮಾಡಿದ್ದು ಸ್ಟುವರ್ಟ್ ಬ್ರಾಡ್. ಅರ್ಧ ಶತಕದ ಅಂಚಿನಲ್ಲಿದ್ದ ಉಸ್ಮಾನ್ ಖವಾಜ ಅವರನ್ನು 47 ರನ್‌ಗೆ ಎಲ್‌ಬಿಡಬ್ಲ್ಯು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದರು.

Ashes 2023, 5th Test: England bowlers comeback; Ausis 12 runs lead in 1st innings: day 2 Highlights

ಸ್ಟೀವ್ ಸ್ಮಿತ್ ಒಂದು ತುದಿಯಲ್ಲಿ ಗಟ್ಟಿಯಾಗಿ ನೆಲೆಯೂರಿದ್ದರೆ ಮತ್ತೊಂದು ಭಾಗದಲ್ಲಿ ವಿಕೆಟ್‌ಗಳು ಉರುಳುತ್ತಾ ಸಾಗಿತ್ತು. 185 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದಾಗ ಆಸ್ಟ್ರೇಲಿಯಾ ದೊಡ್ಡ ಅಂತರದ ಹಿನ್ನಡೆ ಅನುಭವಿಸುವ ಸೂಚನೆ ಕಾಣಿಸಿತ್ತು. ಆದರೆ ಕೊನೆಯ ಹಂತದಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ 36 ರನ್‌ ಹಾಗೂ ಟಾಡ್ ಮರ್ಫಿ ಸ್ಪೋಟಕ 34 ರನ್‌ಗಳಿಸುವ ಮೂಲಕ ಕಡೆಗೂ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು. ಸ್ಟೀವ್ ಸ್ಮಿತ್ 71 ರನ್‌ಗಳಿಸಿ ಔಟಾಗುವ ಮೂಲಕ ತಂಡದ ಮುನ್ನಡೆಯಲ್ಲಿ ಮಹತ್ವದ ಪಾತ್ರವಹಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ 295 ರನ್‌ಗೆ ಆಲೌಟ್ ಆಗಿದೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಈಗ 12 ರನ್‌ಗಳ ಅಲ್ಪ ಮುನ್ನಡೆ ಪಡೆದ ಕಾರಣ ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತೊಮ್ಮೆ ತೀವ್ರ ಜಿದ್ದಾಜಿದ್ದಿನ ಪ್ರದರ್ಶನ ಏರ್ಪಡುವುದು ನಿಶ್ಚಿತ. ಹೀಗಾಗಿ ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ತಂಡ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್ ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಟಾಡ್ ಮರ್ಫಿ

ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೊನಾಥನ್ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.

Story first published: Friday, July 28, 2023, 23:32 [IST]
Other articles published on Jul 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+