Ashes 2023: ಖವಾಜ ಆಟಕ್ಕೆ ತಲೆದೂಗಿದ ಇಂಗ್ಲೆಂಡ್ ದಿಗ್ಗಜ ಅಲೆಸ್ಟರ್ ಕುಕ್
ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಅದ್ಭುತ ಫಾರ್ಮ್ ಆಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿಯೂ ಮುಂದುವರಿದಿದೆ. ಖವಾಜ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ಮೂರನೇ ದಿನದಾಟದಲ್ಲಿ ಭರ್ಜರಿ ಅರ್ಧ ಶತಕ ಸಿಡಿಸಿ ಅಜೇಯವಾಗುಳಿದಿದ್ದಾರೆ. ಮತ್ತೊಂದು ದೊಡ್ಡ ಇನ್ನಿಂಗ್ಸ್‌ನ ನಿರೀಕ್ಷೆಯಲ್ಲಿದ್ದಾರೆ ಆಸಿಸ್ ಅಭಿಮಾನಿಗಳು. ಈ ಪಂದ್ಯದಲ್ಲಿ ಖವಾಜ ಪ್ರದರ್ಶಿಸಿದ ಬ್ಯಾಟಿಂಗ್ ಬಗ್ಗೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲೆಸ್ಟರ್ ಕುಕ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ .
"ಜಿಮ್ಮಿ ಆಂಡರ್ಸನ್ ಆಸ್ಟ್ರೇಲಿಯಾಗೆ ಮೇಡನ್ ಓವರ್ ಮೂಲಕ ಸಾಕಷ್ಟು ಸವಾಲು ಹಾಕಿದ್ದಾರೆ. ಇಂಥಾ ಸಂದರ್ಭದಲ್ಲಿ ಆಸ್ಟ್ರೇಲಿಯನ್ ಲೈನ್-ಅಪ್ ಎಲ್ಲೂ ಕದಲುತ್ತಿಲ್ಲ. ಅವರು ಈ ಕಠಿಣ ಅವಧಿಗಳನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದು ಚೇತರಿಸಿಕೊಳ್ಳುತ್ತಾರೆ" ಎಂದು ಅಲೆಸ್ಟರ್ ಕುಕ್ ಬಿಬಿಸಿ ಸ್ಪೋರ್ಟ್ಸ್‌ಗೆ ಮಾತನಾಡುತ್ತಾ ಹೇಳಿಕೆ ನೀಡಿದ್ದಾರೆ.

ಇನ್ನು ಉಸ್ಮಾನ್ ಖವಾಜ ಆಟದ ಬಗ್ಗೆ ವಿಶೇಷ ಮೆಚ್ಚುಗೆಯ ಮಾತುಗಳನ್ನಾಡಿದ ಕುಕ್ ಅವರು ತಮ್ಮ ಆಟವನ್ನು ಸಂಪೂರ್ಣ ನಿಯಂತ್ರಣದಲ್ಲಿದ್ದುಕೊಂಡು ಆಡುತ್ತಿದ್ದಾರೆ ಎಂದಿದ್ದಾರೆ. ಉಸ್ಮಾನ್ ಖವಾಜ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಯೂ ಶತಕ ಮತ್ತು ಅರ್ಧಶತಕ ಬಾರಿಸಿದ್ದು ಇದೀಗ ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿ ಅಜೇಯವಾಗುಳಿದಿದ್ದಾರೆ.
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಆಶಸ್ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೆಯ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 91 ರನ್‌ಗಳ ಮುನ್ನಡೆ ಪಡೆದುಕೊಂಡಿದ್ದ ಆಸ್ಟ್ರೇಲಿಯಾ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಭರ್ಜರಿ ಆಟವನ್ನು ಆರಂಭಿಸಿದೆ.
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಓಲಿ ರಾಬಿನ್ಸನ್, ಜೋಶ್ ಟಂಗ್, ಜೇಮ್ಸ್ ಆಂಡರ್ಸನ್
ಬೆಂಚ್: ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್ಶಾ, ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications