For Quick Alerts
ALLOW NOTIFICATIONS  
For Daily Alerts
 

Ashes 2023: ಇಂಗ್ಲೆಂಡ್ vs ಆಸ್ಟ್ರೇಲಿಯಾ 4ನೇ ಟೆಸ್ಟ್; ಮೊದಲ ದಿನದ ಗೌರವ ಹಂಚಿಕೊಂಡ ಉಭಯ ತಂಡಗಳು

ಬುಧವಾರ, ಜುಲೈ 19ರಂದು ಮ್ಯಾಂಚೆಸ್ಟರ್‌ನಲ್ಲಿ ಆರಂಭವಾಗಿರುವ 2023ರ ಆಶಸ್ ಟೆಸ್ಟ್‌ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಆತಿಥೇಯ ಇಂಗ್ಲೆಂಡ್ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡ ಉತ್ತಮ ಮೊತ್ತ ಕಲೆಹಾಕಿಯೂ ಹೆಚ್ಚಿನ ವಿಕೆಟ್ ಕಳೆದುಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ 83 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 299 ರನ್ ಗಳಿಸಿದೆ. ಹೀಗಾಗಿ ಬೌಲಿಂಗ್‌ನಲ್ಲಿ ಇಂಗ್ಲೆಂಡ್ ಮೇಲುಗೈ ಸಾಧಿಸಿದ್ದರೆ, ಮೊದಲ ದಿನ 300 ಗಡಿ ಸಮೀಪಿಸಿ ಆಸ್ಟ್ರೇಲಿಯಾ ತಂಡವೂ ಉತ್ತಮ ಮೊತ್ತ ಗಳಿಸಿದೆ.

ಡೇವಿಡ್ ವಾರ್ನರ್ ಮತ್ತು ಉಸ್ಮಾನ್ ಖವಾಜಾ ಆಸ್ಟ್ರೇಲಿಯಾದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದರು. ಆದರೆ, ತಂಡದ ಮೊತ್ತ 15 ರನ್‌ಗಳಾಗುವಷ್ಟರಲ್ಲಿ ಖವಾಜಾ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

Ashes 2023

ಡೇವಿಡ್ ವಾರ್ನರ್ 32 ರನ್, ಮಾರ್ನಸ್ ಲ್ಯಾಬುಸ್ಚಾಗ್ನೆ 51 ರನ್, ಸ್ಟೀವನ್ ಸ್ಮಿತ್ 41 ರನ್, ಟ್ರಾವಿಸ್ ಹೆಡ್ 48 ರನ್, ಮಿಚೆಲ್ ಮಾರ್ಷ್ 51 ರನ್, ಕ್ಯಾಮೆರಾನ್ ಗ್ರೀನ್ 16 ರನ್, ಅಲೆಕ್ಸ್ ಕ್ಯಾರಿ 20 ರನ್ ಗಳಿಸಿ ಔಟಾಗಿದ್ದರೆ, ಮಿಚೆಲ್ ಸ್ಟಾರ್ಕ್ 23 ರನ್ ಮತ್ತು ನಾಯಕ ಪ್ಯಾಟ್ ಕಮ್ಮಿನ್ಸ್ 1 ರನ್ ಗಳಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ತಂಡದ ಪರ ಬೌಲಿಂಗ್‌ನಲ್ಲಿ ಕ್ರಿಸ್ ವೋಕ್ಸ್ 19 ಓವರ್‌ಗಳಲ್ಲಿ 52 ರನ್ ನೀಡಿ 4 ವಿಕೆಟ್ ಪಡೆದರೆ, ಸ್ಟುವರ್ಟ್ ಬ್ರಾಡ್ 14 ಓವರ್‌ಗಳಲ್ಲಿ 68 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಮಾರ್ಕ್ ವುಡ್ ಮತ್ತು ಮೊಯಿನ್ ಅಲಿ ತಲಾ ಒಂದೊಂದು ವಿಕೆಟ್ ಪಡೆದರು.

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಆಶಸ್ ಟೆಸ್ಟ್‌ ಪಂದ್ಯದಲ್ಲಿ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಸಮಬಲಗೊಳಿಸಲು ಇಂಗ್ಲೆಂಡ್ ತಂಡ ಎದುರು ನೋಡುತ್ತಿದೆ.

ಆಶಸ್ ಸರಣಿ 4ನೇ ಟೆಸ್ಟ್‌ ಪಂದ್ಯ: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಆಡುವ 11ರ ಬಳಗ

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಜೋಶ್ ಹ್ಯಾಝಲ್‌ವುಡ್.

ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೊನಾಥನ್ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.

Story first published: Wednesday, July 19, 2023, 23:35 [IST]
Other articles published on Jul 19, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+