Ashes 2023: ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಆಸೀಸ್ ಆಡುವ 11ರ ಬಳಗ ಪ್ರಕಟ; ಹೇಝಲ್‌ವುಡ್, ಗ್ರೀನ್ ವಾಪಸ್
ಬುಧವಾರ, ಜುಲೈ 19ರಿಂದ ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ 2023ರ ನಾಲ್ಕನೇ ಆಶಸ್ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡದ ಆಡುವ 11ರ ಬಳಗ ಪ್ರಕಟಿಸಲಾಗಿದ್ದು, ಅನುಭವಿ ವೇಗಿ ಜೋಶ್ ಹೇಝಲ್‌ವುಡ್ ಮತ್ತು ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ತಂಡಕ್ಕೆ ವಾಪಸ್ಸಾಗಿದ್ದಾರೆ.
ಈ ಜೋಡಿಯು ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಏಕೈಕ ಸ್ಪೆಷಲಿಸ್ಟ್ ಸ್ಪಿನ್ನರ್ ಟಾಡ್ ಮರ್ಫಿ ಮತ್ತು ಮಧ್ಯಮ ವೇಗಿ ಸ್ಕಾಟ್ ಬೋಲ್ಯಾಂಡ್ ಅವರ ಬದಲಿಗೆ ಸ್ಥಾನ ಪಡೆದಿದ್ದಾರೆ. ಪ್ರವಾಸಿ ಆಸ್ಟ್ರೇಲಿಯಾ ತಂಡ ಎಲ್ಲ ವೇಗದ ದಾಳಿಯೊಂದಿಗೆ ಆಡಲು ನಿರ್ಧರಿಸಿದೆ.
2012ರಲ್ಲಿ ಭಾರತ ವಿರುದ್ಧದ ಪರ್ತ್ ಟೆಸ್ಟ್ ಕೊನೆಯ ನಿದರ್ಶನದಲ್ಲಿ ಆಸ್ಟ್ರೇಲಿಯಾ ತಂಡ ಸ್ಪಿನ್ನರ್ ಇಲ್ಲದೆ ಮೈದಾನಕ್ಕಿಳಿದ ಒಂದು ದಶಕದ ನಂತರ, ಇದೀಗ ಸ್ಪಿನ್ನರ್ ಇಲ್ಲದ ತಂಡವನ್ನು ಕಣಕ್ಕಿಳಿಸಲಿದೆ.

ಮಂಡಿರಜ್ಜು ಗಾಯದಿಂದಾಗಿ ಕ್ಯಾಮೆರಾನ್ ಗ್ರೀನ್ ಹೆಡಿಂಗ್ಲಿ ಪಂದ್ಯದಿಂದ ಹೊರಗುಳಿದಿದ್ದರೆ, ಜೋಶ್ ಹ್ಯಾಝಲ್‌ವುಡ್‌ಗೆ ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ವಿಶ್ರಾಂತಿ ನೀಡಲಾಗಿತ್ತು.
32 ವರ್ಷದ ವೇಗಿ ಜೋಶ್ ಹ್ಯಾಝಲ್‌ವುಡ್ ಗಾಯದಿಂದ ಚೇತರಿಸಿಕೊಂಡು, ಆಶಸ್ ಸರಣಿಯ ಆರಂಭಿಕ ಎರಡು ಪಂದ್ಯಗಳಿಗೆ ಮರಳಿದ್ದರು. ಇದಕ್ಕೂ ಮುನ್ನ ಕಳೆದ ತಿಂಗಳು ಭಾರತ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವನ್ನು ತಪ್ಪಿಸಿಕೊಂಡಿದ್ದರು.
ಆಸ್ಟ್ರೇಲಿಯಾ ಮೂರು ವಿಕೆಟ್‌ಗಳಿಂದ ಸೋತ ಮೂರನೆ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಮತ್ತು ಟಾಡ್ ಮರ್ಫಿ ಜೋಡಿ ಹೆಚ್ಚು ಪ್ರಭಾವ ಬೀರಲಿಲ್ಲ. ವಿಕ್ಟೋರಿಯನ್ ವೇಗಿ ಬೋಲ್ಯಾಂಡ್ ಎರಡೂ ಇನ್ನಿಂಗ್ಸ್‌ಗಳಲ್ಲಿ ವಿಕೆಟ್ ರಹಿತರಾದರೆ, ಆಫ್ ಸ್ಪಿನ್ನರ್ ಮರ್ಫಿ 10 ಓವರ್‌ಗಳಿಗಿಂತ ಕಡಿಮೆ ಬೌಲ್ ಮಾಡಿ ಒಂದು ವಿಕೆಟ್ ಪಡೆದರು.
ಫಾರ್ಮ್‌ನಲ್ಲಿಲ್ಲದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರನ್ನು ಸರಣಿಯ ಅಂತಿಮ ಟೆಸ್ಟ್ ಪಂದ್ಯಕ್ಕೆ ಕೈಬಿಡಬಹುದು ಎಂಬ ಊಹಾಪೋಹ ಇತ್ತು. ಆದರೆ, ಅಗ್ರ ಕ್ರಮಾಂಕವು ನಿರ್ಣಾಯಕವಾಗಿರುತ್ತದೆ ಎಂದು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಖಚಿತಪಡಿಸಿದರು.
ಇನ್ನು ಮೂರನೇ ಟೆಸ್ಟ್ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಶತಕ ಬಾರಿಸಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಆಲ್‌ರೌಂಡರ್ ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಅಮೋಘ 118 ರನ್ ಗಳಿಸಿದರು ಮತ್ತು ಪಂದ್ಯದಲ್ಲಿ ಎರಡು ನಿರ್ಣಾಯಕ ವಿಕೆಟ್‌ಗಳನ್ನು ಪಡೆದರು.
ಇದಕ್ಕೂ ಮುನ್ನ ಇಂಗ್ಲೆಂಡ್ ತಂಡವು ಈಗಾಗಲೇ ತಮ್ಮ ಆಡುವ 11ರ ಬಳಗವನ್ನು ಪ್ರಕಟಿಸಿದೆ. ಗಾಯಗೊಂಡ ಆಲಿ ರಾಬಿನ್ಸನ್ ಬದಲಿಗೆ ಜೇಮ್ಸ್ ಆಂಡರ್ಸನ್ ವಾಪಸ್ಸಾಗಿರುವುದು ಏಕೈಕ ಬದಲಾವಣೆಯಾಗಿದೆ.
ಹೆಡಿಂಗ್ಲಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸೋಲುವ ಮೊದಲು ಎಡ್ಜ್‌ಬಾಸ್ಟನ್ ಮತ್ತು ಲಾರ್ಡ್ಸ್‌ನಲ್ಲಿ ನಡೆದ ಆರಂಭಿಕ ಎರಡು ಟೆಸ್ಟ್‌ಗಳನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.
ಆಶಸ್ ಸರಣಿ 4ನೇ ಟೆಸ್ಟ್ ಪಂದ್ಯ: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಆಡುವ 11ರ ಬಳಗ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಜೋಶ್ ಹ್ಯಾಝಲ್‌ವುಡ್.
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೊನಾಥನ್ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications