Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ashes 2023: ಬೆನ್ ಸ್ಟೋಕ್ಸ್ ಅಮೋಘ ಹೋರಾಟ ವ್ಯರ್ಥ: ಲಾರ್ಡ್ಸ್ ಗೆದ್ದ ಆಸ್ಟ್ರೇಲಿಯಾ: 2-0 ಮುನ್ನಡೆ

ಆಶಸ್ ಸರಣಿಯ ಎರಡನೇ ಪಂದ್ಯದಲ್ಲಿಯೂ ಪ್ರವಾಸಿ ಆಸ್ಟ್ರೇಲಿಯಾ ಅಮೋಘ ಗೆಲುವು ಸಾಧಿಸಿದ್ದು ಸರಣಿಯಲ್ಲಿ ಭರ್ಜರಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಲಾರ್ಡ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭದ ದಿನದಿಂದಲೂ ಆಸ್ಟ್ರೇಲಿಯಾ ತನ್ನ ಹಿಡಿತವನ್ನು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಕೊನೆಯ ದಿನದವರೆಗೂ ಈ ಬಿಗಿಹಿಡಿತ ಮುಂದುವರಿದಿತ್ತು. ಆದರೆ ಅಂತಿಮ ದಿನದಾಟದಲ್ಲಿ ಬೆನ್ ಸ್ಟೋಕ್ಸ್ ಆಡಿದ ಅಮೋಘ ಆಟ ಆಸಿಸ್ ತಂಡಕೆ ಸೋಲಿನ ಭೀತಿಯನ್ನುಂಟು ಮಾಡಿದ್ದು ಸುಳ್ಳಲ್ಲ. ಆದರೆ ಸ್ಟೋಕ್ಸ್ ವಿಕೆಟ್ ಪಡೆದ ಬಳಿಕ ಆಸಿಸ್ ತಂಡ ಮೇಲುಗೈ ಸಾಧಿಸಿ ಗೆಲುವು ಘೋಷಿಸಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಗೆಲ್ಲಲು 371 ರನ್‌ಗಳ ಗುರಿ ಪಡೆದುಕೊಂಡ ಇಂಗ್ಲೆಂಡ್ ತಂಡ ಮೊದಲ 45 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿ ಅತ್ಯಂತ ಸಂಕಷ್ಟದಲ್ಲಿತ್ತು. ಈ ಹಂತದಲ್ಲಿ ಬೆನ್ ಡಕೆಟ್‌ಗೆ ಜೊತೆಯಾದ ನಾಯಕ ಬೆನ್ ಸ್ಟೋನ್ಸ್ ಅದ್ಭುತ ಜೊತೆಯಾಟದಲ್ಲಿ ಭಾಗುಯಾದರು. ಬೆನ್ ಡಕೆಟ್ 83 ರನ್‌ಗೆ ಔಟಾದ ಬಳಿಕ ಜಾನಿ ಬೈರ್‌ಸ್ಟೋವ್ ವಿಚಿತ್ರವಾಗಿ ರನೌಟ್‌ ಮೂಲಕ ವಿಕೆಟ್ ಕಳೆದುಕೊಂಡರು. ಈ ಸಂದರ್ಭದಲ್ಲಿ ಇಂಗ್ಲೆಂಡ್ ಸ್ಕೋರ್ 193 ರನ್‌ಗೆ 6 ವಿಕೆಟ್.

Ashes 2023: Ben Stokes heroic performance vain, Australia won Lords test By 43 runs

ಅದಾದ ಬಳಿಕ ಬೆನ್ ಸ್ಟೋಕ್ಸ್ ನೀಡಿದ ಅದ್ಭುತ ಪ್ರದರ್ಶನ ಪಂದ್ಯದ ಗತಿಯನ್ನೇ ಬದಲಿಸಿತು. ಒಂದು ತುದಿಯಲ್ಲಿ ಸ್ಟುವರ್ಟ್ ಬ್ರಾಡ್ ಸ್ಟೋಕ್ಸ್‌ಗೆ ಅದ್ಭುತವಾಗಿ ಸಾಥ್ ನೀಡಿ ಗಮನಸೆಳೆದರು. ಈ ಸಂದರ್ಭದಲ್ಲಿ ಆರ್ಭಟದ ಬ್ಯಾಟಿಂಗ್ ನಡೆಸಿದ ಬೆನ್ ಸ್ಟೋಕ್ಸ್ ಇಂಗ್ಲೆಂಡ್ ಅಭಿಮಾನಿಗಳಲ್ಲಿ ಗೆಲುವಿನ ಭರವಸೆ ಮುಡಿಸಿದರು. ಏಕಾಂಗಿಯಾಗಿ ಬ್ಯಾಟ್ ಬೀಸಿದ ಸ್ಟೋಕ್ಸ್ ಸಿಕ್ಸರ್ ಬೌಂಡಿಗಳ ಸುರಿಮಳೆಗೈದರು. 214 ಎಸೆತಗಳನ್ನು ಎದುರಿಸಿದ ಬೆನ್ ಸ್ಟೋಕ್ಸ್ 155 ರನ್‌ಗಳಿಸಿದ್ದ ಸಂದರ್ಭದಲ್ಲಿ ವಿಕೆಟ್ ಕಳೆದುಕೊಳ್ಳುವ ಮೂಲಕ ಇಂಗ್ಲೆಂಡ್ ಗೆಲುವಿನ ಭರವಸೆ ಅಂತ್ಯವಾಯಿತು.

ಎರಡನೇ ಇನ್ನಿಂಗ್ಸ್‌ ಇಂಗ್ಲೆಂಡ್ ತಂಡ 327 ರನ್‌ಗಳನ್ನು ಗಳಿಸಿ ಆಲೌಟ್ ಆಗುವ ಮೂಲಕ 43 ರನ್‌ಗಳ ಅಂತರದ ಸೋಲು ಅನುಭವಿಸಿದೆ. ಇನ್ನು ಈ ಗೆಲುವು ಆಸ್ಟ್ರೇಲಿಯಾ ತಂಡಕ್ಕೆ ಈ ಸರಣಿಯಲ್ಲಿ ಸತತ ಎರಡನೇ ಗೆಲುವಿವಾಗಿದದು ಐದು ಪಂದ್ಯಗಳ ಈ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಈ ಮೂಲಕ ಸುದೀರ್ಘ ಕಾಲದ ಬಳಿಕ ಇಂಗ್ಲೆಂಡ್ ನೆಲದಲ್ಲಿ ಆಶಸ್ ಗೆಲ್ಲುವ ಸನಿಹದಲ್ಲಿದೆ.

ಇನ್ನು ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಪರವಾಗಿ 110 ರನ್‌ಗಳನ್ನು ಗಳಿಸಿದ್ದು ಹೆಡ್ 77 ರನ್‌ಗಳನ್ನು ಗಳಿಸಿದ್ದರು. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 416 ರನ್‌ಗಳನ್ನು ಗಳಿಸಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ ಬೆನ್ ಡಕೆಟ್ ಅವರ 98 ರನ್, ಹ್ಯಾರಿ ಬ್ರೂಕ್ ಅರ್ಧ ಶತಕದ ಹೊರತಾಗಿಯೂ 325 ರನ್‌ಗಳನ್ನು ಮಾತ್ರವೇ ಗಳಿಸಿತು. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 91 ರನ್‌ಗಳ ಮುನ್ನಡೆ ಪಡೆದುಕೊಂಡಿತು.

ಇತ್ತ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 279 ರನ್‌ಗಳನ್ನು ಮಾತ್ರವೇ ಗಳಿಸಿ ಆಲೌಟ್ ಆದರೂ ಮೊದಲ ಇನ್ನಿಂಗ್ಸ್‌ನಲ್ಲಿ ಅಮೂಲ್ಯ 91 ರನ್‌ಗಳ ಮುನ್ನಡೆ ಪಡೆದುಕೊಂಡಿದ್ದ ಕಾರಣ ಇಂಗ್ಲೆಂಡ್ ಮುಂದೆ ಕಠಿಣ ಗುರಿ ಸಿದ್ಧವಾಗಿತ್ತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ ನಾಲ್ಕನೇ ದಿನದಾಟದ ಅಂತ್ಯದಲ್ಲಿಯೇ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಹಿನ್ನಡೆ ಅನುಭವಿಸಿತ್ತು. ಆದರೆ ಬೆನ್ ಸ್ಟೋಕ್ಸ್ ಆಟ ಪಂದ್ಯಕ್ಕೆ ಹೊಸ ತಿರುವು ನೀಡಿತು.

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಓಲಿ ರಾಬಿನ್ಸನ್, ಜೋಶ್ ಟಂಗ್, ಜೇಮ್ಸ್ ಆಂಡರ್ಸನ್
ಬೆಂಚ್: ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್ಶಾ, ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್

Story first published: Sunday, July 2, 2023, 21:38 [IST]
Other articles published on Jul 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+