Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ashes 2023: ಇಂಗ್ಲೆಂಡ್ ವಿರುದ್ಧ ಆಡಲು ಖುಷಿ ಎಂದ ಡೇವಿಡ್ ವಾರ್ನರ್

ಆಶಸ್ ಸರಣಿಯ ಮೊದಲ ಪಂದ್ಯ ರೋಚಕವಾಗಿ ಸಾಗುತ್ತಿದೆ. ಕೊನೆಯ ದಿನದಾಟದಲ್ಲಿ ಎರಡು ತಂಡಗಳು ಕುಡ ಗೆಲುವಿಗಾಗಿ ಸರ್ವಪ್ರಯತ್ನ ನಡೆಸುತ್ತಿದೆ. ಕೊನೆಯ ದಿದನಾಟದ ಆರಂಭಕ್ಕೆ ಮಳೆ ಅಡ್ಡಿಯಾದ ಕಾರಣ ತಡವಾಗಿ ಆರಂಭವಾಯಿತು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಪ್ರತಿಕ್ರಿಯೆ ನೀಡಿದ್ದು ಇಂಗ್ಲೆಂಡ್ ತಂಡದ ಹೊಸ ಆಕ್ರಮಣಕಾರಿ ಆಟದ ನಿಲುವಿನಿಂದಾಗಿ ಅದರ ವಿರುದ್ಧ ಆಡುವುದಕ್ಕೆ ಉತ್ಸಾಹ ಹೆಚ್ಚಿದೆ ಎಂದಿದ್ದಾರೆ.

ಇಂಗ್ಲೆಂಡ್ ತಂಡ ಬ್ಯಾಸ್‌ಬಾಲ್ ಮಂತ್ರವನ್ನು ಅಳವಡಿಸಿಕೊಂಡಿದ್ದು ಅವರ ವಿರುದ್ಧ ಆಡಲು ಉತ್ಸಾ ಹ ಹೆಚ್ಚಿಸಿದೆ ಎಂದಿದ್ದಾರೆ. 2021ರಲ್ಲಿ ಆಸ್ಟ್ರೇಲಿಯಾದಲ್ಲಿ ಆಶಸ್ ಸೋಲಿನ ಬಳಿಕ ಇಂಗ್ಲೆಂಡ್ ಬೆನ್ ಸ್ಟೋಕ್ಸ್ ನಾಯಕತ್ವ ಬ್ರೆಂಡನ್ ಮೆಕಲಮ್ ಮಾರ್ಗದರ್ಶನದಲ್ಲಿ ಈ ವಿಧಾನವನ್ನು ಅಳವಡಿಸಿಕೊಂಡ ನಂತರ ಸಾಕಷ್ಟು ಯಶಸ್ಸನ್ನು ಸಾಧಿಸಿದೆ. ಇಂಗ್ಲೆಂಡ್ ತನ್ನ ಕೊನೆಯ 13 ಪಂದ್ಯಗಳಲ್ಲಿ 11 ಪಂದ್ಯದಲ್ಲಿ ಗೆಲುವು ಸಾಧಿಸಿದೆ.

Ashes 2023: David Warner said Englands Bazball mantra exciting to play against them

ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕೂಡ ಬೆನ್ ಸ್ಟೋಕ್ಸ್ ಮೊದಲ ದಿನ 393/8 ರನ್‌ಗಳಿಸಿದಾಗ ಡಿಕ್ಲೇರ್ ಮಾಡಲು ನಿರ್ಧರಿಸಿದ್ದು ಎಲ್ಲರನ್ನು ಆಶ್ಚರ್ಯಚಕಿತಗೊಳಿಸಿತ್ತು. ಇದೇ ಆಕ್ರಮಣಕಾರಿ ವಿಧಾನದ ಮೂಲಕ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾಕ್ಕೆ 281 ರನ್ ಗುರಿಯನ್ನು ನೀಡಿದೆ ಇಂಗ್ಲೆಂಡ್.

ಮೊದಲ ಇನ್ನಿಂಗ್ಸ್‌ನಲ್ಲಿ 7 ರನ್‌ಗಳ ಅಲ್ಪ ಮುನ್ನಡೆ ಪಡೆದುಕೊಂಡಿದ್ದ ಇಂಗ್ಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 273 ರನ್‌ಗಳನ್ನು ಕಲೆಹಾಕಲು ಮಾತ್ರವೇ ಯಶಸ್ವಿಯಾಗಿತ್ತು. ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ ಪರವಾಗಿ ಬ್ಯಾಟಿಂಗ್ ನಡೆಸುವಾಗ ಜೋ ರೂಟ್ ಹ್ಯಾರಿ ಬ್ರೂಕ್ ಮತ್ತು ನಾಯಕ ಬೆನ್ ಸ್ಟೋಕ್ಸ್ ಹೊರತುಪಡಿಸಿದರೆ ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ಹೀಗಾಗಿ 66.2 ಓವರ್‌ಗಳಲ್ಲಿ ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 273 ರನ್‌ಗಳನ್ನು ಮಾತ್ರವೇ ಯಶಸ್ವಿಯಾಯಿತು.

ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಎರಡನೇ ಇನ್ನಿಂಗ್ಸ್‌ನಲ್ಲಿ 281 ರನ್‌ಗಳನ್ನು ಗಳಿಸುವ ಸವಾಲು ನೀಡಿತು. ಈ ಗುರಿಯನ್ನು ಬೆನ್ನ್ಟಲು ಆರಂಭಿಸಿದ ಆಸ್ಟ್ರೇಲಿಯಾ ತಂಡ ಮೊದಲ ವಿಕೆಟ್‌ಗೆ 17.4 ಓವರ್‌ಗಳಲ್ಲಿ 61 ರನ್‌ಗಳ ಜೊತೆಯಾಟ ನೀಡುವ ಉತ್ತಮ ಆರಂಭ ನೀಡಿತು. ಆದರೆ ಈ ಸಂದರ್ಭದಲ್ಲಿ 36 ರನ್‌ಗಳಿಸಿದ್ದ ಡೇವಿಡ್ ವಾರ್ನರ್ ಬಾಬಿನ್ಸನ್‌ಗೆ ವಿಕೆಟ್ ನೀಡಿ ನಿರ್ಗಮಿಸಿದರು.

ನಂತರ ಬಂದ ಮಾರ್ನಸ್ ಲ್ಯಾಬುಶೇನ್ ಹಾಗೂ ಸ್ಟೀವ್ ಸ್ಮಿತ್ ಇಬ್ಬರು ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಸ್ಟುವರ್ಟ್ ಬ್ರಾಡ್ ಈ ಇಬ್ಬರು ಅಪಾಯಕಾರಿ ದಾಂಡಿಗರನ್ನು ಕೂಡ ಔಟ್ ಮಾಡುವ ಮೂಲಕ ಇಂಗ್ಲೆಂಡ್ ತಂಡಕ್ಕೆ ಮೇಲುಗೈ ದೊರೆಯುವಂತೆ ಮಾಡಿದರು. ಈ ಮೂಲಕ ಆಸ್ಟ್ರೇಲಿಯಾ ನಾಲ್ಕನೇ ದಿನದಾಟದ ಅಂತ್ಯದಲ್ಲಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್
ಬೆಂಚ್: ಡೇನಿಯಲ್ ಲಾರೆನ್ಸ್, ಜೋಶ್ ಟಂಗ್, ಮ್ಯಾಥ್ಯೂ ಪಾಟ್ಸ್, ಮಾರ್ಕ್ ವುಡ್, ಕ್ರಿಸ್ ವೋಕ್ಸ್

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಜೋಶ್ ಇಂಗ್ಲಿಸ್, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್

Story first published: Tuesday, June 20, 2023, 20:19 [IST]
Other articles published on Jun 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+