Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ashes 2023: ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಮುನ್ನಡೆ ಮೇಲೆ ಆಸಿಸ್ ಚಿತ್ತ: 2ನೇ ದಿನದ Live ಸ್ಕೋರ್

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ಆಶಸ್ ಟೆಸ್ಟ್ ಸರಣಿಯ ಐದನೇ ಹಾಗೂ ಕೊನೆಯ ಪಂದ್ಯ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೊದಲ ದಿನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿರುವ ಆಸ್ಟ್ರೇಲಿಯಾ ಮೊದಲ ದಿನ ಅದ್ಭುತ ಯಶಸ್ಸು ಸಾಧಿಸಿದೆ. ಇಂಗ್ಲೆಂಡ್ ತಂಡ ಎಂದಿನಂತೆ ಬಾಜ್‌ಬಾಲ್ ಮಾದರಿಯಲ್ಲಿ ಆಕ್ರಮಣಕಾರಿಯಾಗಿ ರನ್‌ಗಳಿಸಿದರೂ ಆಸ್ಟ್ರೇಲಿಯಾದ ಬೌಲರ್‌ಗಳಕು ಇಂಗ್ಲೆಂಡ್ ದಾಂಡಿಗರನ್ನು ಔಟ್ ಔಟ್ ಮಾಡುತ್ತಾ ಸಾಗುವಲ್ಲಿ ಯಶಸ್ವಿಯಾದರು.

ಮೊದಲ ದಿನದಲ್ಲಿ ಇಂಗ್ಲೆಂಡ್ ತಂಡ 54.4 ಓವರ್‌ಗಳ ಬ್ಯಾಟಿಂಗ್ ಮಾತ್ರವೇ ನಡೆಸಲು ಸಾಧ್ಯವಾಗಿದ್ದು ಈ ಸಂದರ್ಭದಲ್ಲಿ 283 ರನ್‌ಗಳನ್ನು ಕಲೆಹಾಕಿ ಆಲೌಟ್ ಆಗಿದೆ. ಇಂಗ್ಲೆಂಡ್ ಪರವಾಗಿ ಹ್ಯಾರಿ ಬ್ರೂಕ್ 81 ಎಸೆತಗಳಲ್ಲಿ 85 ರನ್‌ಗಳನ್ನು ಗಳಿಸಿದರು. ಉಳಿದ ಯಾವ ಬ್ಯಾಟರ್‌ ಕೂಡ ಅರ್ಧ ಶತಜ ಬಾರಿಸಲು ಸಾಧ್ಯವಾಗಲಿಲ್ಲ. ಬೆನ್ ಡಕೆಟ್ 41 ರನ್ ಗಳಿಸಿದರು. ಅನುಭವಿ ಆಟಗಾರರಾದ ಜೋ ರೂಟ್, ನಾಯಕ ಬೆನ್ ಸ್ಟೋಕ್ಸ್ ಮತ್ತು ಜಾನಿ ಬೈರ್‌ಸ್ಟೋವ್ ಒಂದಂಕಿಗೆ ಔಟಾಗಿ ನಿರಾಸೆ ಮೂಡಿಸಿದ್ದಾರೆ.

Ashes 2023: Eng vs Aus 5th Test, Australia eye on big lead in 1st innings: day 2 Live score

ಇನ್ನು ನಂತರ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿದ್ದು ಮೊದಲ ದಿನದಾಟದ ಅಂತ್ಯದಲ್ಲಿ 61 ರನ್‌ಗೆ 1 ವಿಕೆಟ್ ಕಳೆದುಕೊಂಡಿತು. 24 ರನ್‌ಗಳಿಸಿ ವಾರ್ನರ್ ಮೊದಲ ದಿನದಾಟದಲ್ಲಿ ವಿಕೆಟ್ ಕಳೆದುಕೊಂಡಿದ್ದು ಉಸ್ಮಾನ್ ಖವಾಜ ಹಾಗೂ ಮಾರ್ನಸ್ ಲ್ಯಾಬುಶೇನ್ ಎರಡನೇ ದಿನ ಆಟವನ್ನು ಆರಂಭಿಸಿದ್ದಾರೆ.

Live ಸ್ಕೋರ್ ಹೀಗಿದೆ

1
55395

ಇನ್ನು ಈ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆಯಲ್ಲಿದ್ದು ಈ ಸರಣಿಯನ್ನು ಗೆದ್ದು 3-1 ಅಂತರದಿಂದ ಸರಣಿ ವಶಕ್ಕೆ ಪಡೆಯುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಇಂಗ್ಲೆಂಡ್ ತಂಡ ಸರಣಿಯನ್ನು ಡ್ರಾ ಮಾಡುವತ್ತ ಚಿತ್ತ ನೆಟ್ಟಿದ್ದು ಮೊದಲ ದಿನ ಹಿನ್ನಡೆ ಅನುಭವಿಸಿದ್ದರೂ ಎರಡನೇ ದಿನ ಕಮ್‌ಬ್ಯಾಕ್ ಮಾಡುವ ಉತ್ಸಾಹದಲ್ಲಿದೆ.

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್ ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಟಾಡ್ ಮರ್ಫಿ

ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೊನಾಥನ್ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.

Story first published: Friday, July 28, 2023, 15:41 [IST]
Other articles published on Jul 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+