Ashes 2023: ಆಸ್ಟ್ರೇಲಿಯಾಗೆ ಅಗ್ನಿಪರೀಕ್ಷೆ: Live ಸ್ಕೋರ್
ಆಶಸ್ ಟೆಸ್ಟ್ ಸರಣಿಯ ನಾಲ್ಕನೇ ದಿನದಾಟ ಆರಂಭವಾಗಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಭಾರೀ ಮೇಲುಗೈ ಸಾಧಿಸಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ 395 ರನ್‌ಗಳನ್ನು ಗಳಿಸಿರುವ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾಗೆ ಬೃಹತ್ ಗುರಿಯನ್ನು ನೀಡಿದೆ. ಈ ಬೃಹತ್ ಗುರಿಯನ್ನು ಬೆನ್ನಟ್ಟುವತ್ತ ಚಿತ್ತ ನೆಟ್ಟಿದೆ ಆಸ್ಟ್ರೇಲಿಯಾ.
ಮೊದಲ ಇನ್ನಿಂಗ್ಸ್‌ನಲ್ಲಿ 12 ರನ್‌ಗಳ ಹಿನ್ನಡೆ ಅನುಭವಿಸಿದ ಇಂಗ್ಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಜಾಕ್ ಕ್ರಾವ್ಲೆ, ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ ಭರ್ಜರಿ ಅರ್ಧ ಶತಕಗಳ ಕೊಡುಗೆ ನೀಡುವ ಮೂಲಕ ಮಿಂಚಿದ್ದಾರೆ. ಜೋ ರೂಟ್ ಈ ಪಂದ್ಯದಲ್ಲಿ 91 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡಿದ್ದು ಕ್ರಾವ್ಲೆ 73 ರನ್‌ಗಳನ್ನು ಗಳಿಸಿದ್ದರೆ ಜಾನಿ ಬೈರ್‌ಸ್ಟೊವ್ 78 ರನ್‌ಗಳನ್ನು ಗಳಿಸಿದರು.

ಇದೀಗ ಆಸ್ಟ್ರೇಲಿಯಾ ತಂಡ ಈ ಮೊತ್ತವನ್ನು ಬೆನ್ನಟ್ಟುವ ಸವಾಲು ಪಡೆದುಕೊಂಡಿದೆ. ಉತ್ತಮ ಆರಂಭವನ್ನು ಪಡೆದುಕೊಂಡಿರುವ ಆಸ್ಟ್ರೇಲಿಯಾ ಇಂಗ್ಲೆಂಡ್ ಬೌಲರ್‌ಗಳಿಗೆ ಸವಾಲಾಗಿ ಪರಿಣಮಿಸುವ ಸೂಚನೆ ನೀಡಿದ್ದಾರೆ. ಇಂಗ್ಲೆಂಡ್ ಬೌಲರ್‌ಗಳು ಸಾಧ್ಯವಾದಷ್ಟು ಬೇಗ ಆಸ್ಟ್ರೇಲಿಯಾ ತಂಡವನ್ನು ಆಲ್‌ಔಟ್ ಮಾಡುವತ್ತ ಚಿತ್ತ ನೆಟ್ಟಿದೆ.
Live ಸ್ಕೋರ್ ಹೀಗಿದೆ
ಈ ಸರಣಿಯ ನಾಲ್ಕು ಪಂದ್ಯಗಳು ಈಗಾಗಲೇ ಮುಕ್ತಾಯವಾಗಿದ್ದು ಇದು ಸರಣಿಯ ಕೊನೆಯ ಪಂದ್ಯವಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿ ಮುನ್ನಡೆಯಲ್ಲಿದ್ದರೆ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತು. ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿನ ಸನಿಹದಲ್ಲಿದ್ದರೂ ಗೆಲುವು ಸಾಧ್ಯವಾಗಿರಲಿಲ್ಲ. ಇದೀಗ ಕೊನೆಯ ಪಂದ್ಯ ಇಂಗ್ಲೆಂಡ್ ಪಾಲಿಗೆ ಸರಣಿಯನ್ನು ಸಮಬಲಗೊಳಿಸಲು ಮಹತ್ವದ್ದಾಗಿದೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್ ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಟಾಡ್ ಮರ್ಫಿ
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೊನಾಥನ್ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications