Eng vs Aus: ಕೊನೆಯ ಟೆಸ್ಟ್‌ನಲ್ಲಿ ಆಸಿಸ್ ಇಂಗ್ಲೆಂಡ್ ಮುಖಾಮುಖಿ: ಪಂದ್ಯದ ಮಾಹಿತಿ
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಗುರುವಾರ ಆರಂಭವಾಗಲಿದೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಎರಡು ತಡಗಳು ಕೂಡ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆಯಲ್ಲಿದ್ದು ಎರಡು ದಶಕದ ಬಳಿಕ ಇಂಗ್ಲೆಂಡ್ ನೆಲದಲ್ಲಿ ಆಶಸ್ ಗೆಲ್ಲುವ ಕನಸು ಕಾಣುತ್ತಿದ್ದರೆ ಇಂಗ್ಲೆಂಡ್ ತಂಡ ಸರಣಿ ಸಮಬಲಗೊಳಿಸುವ ಪ್ರಯತ್ನ ನಡೆಸಲಿದೆ.
ಸರಣಿಯ ಮೊದಲ ಎರಡು ಪಂದ್ಯಗಳನ್ನು ಕಳೆದುಕೊಂಡ ಬಳಿಕ ಇಂಗ್ಲೆಂಡ್ ನಂತರದ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿತ್ತು. ಸರಣಿತ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದ ಬಳಿಕ ನಾಳ್ಕನೇ ಪಂದ್ಯದಲ್ಲಿಯೂ ಬಹುತೇಕ ಗೆಲುವಿನ ಸನಿಹಕ್ಕೆ ಬಂದಿತ್ತು. ಆದರೆ ಮಳೆ ಸರಣಿ ಸಮಬಲಗೊಳಿಸುವ ಅವಕಾಶ ತಪ್ಪಿಸಿತ್ತು. ಆ ಪಂದಗ್ಯ ಡ್ರಾದಲ್ಲಿ ಅಂತ್ಯಕಂಡಿದೆ. ಇದೀಗ ಐದು ಪಂದ್ಯಗಳ ಈ ಸರಣಿ ಅಂತಿಮ ಹಂತವನ್ನು ತಲುಪಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಜುಲೈ 27 ರಂದು ನಡೆಯಲಿದೆ. ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದ್ದು 30 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ನೆಟ್‌ವರ್ಕ್‌ನಲ್ಲಿ ಪಂದ್ಯ ನೇರಪ್ರಸಾರವಾಗಲಿದೆ. ಇನ್ನು ಸೋನಿ ಲಿವ್‌ನಲ್ಲಿ ಪಂದ್ಯ ಲೈವ್ ಸ್ಟ್ರೀಮ್ ಆಗಲಿದೆ
ಪಿಚ್ ಹಾಗೂ ವಾತಾವರಣ
ಸಾಂಪ್ರದಾಯಿಕವಾಗಿ ಇಂಗ್ಲೆಂಡ್‌ನ ಓವಲ್ ಕ್ರೀಡಾಂಗಣ ಅಲ್ಲಿನ ಅತ್ಯುತ್ತಮ ಬ್ಯಾಟಿಂಗ್ ಪಿಚ್‌ಗಳಲ್ಲಿ ಒಂದು. ಇದು ಇಂಗ್ಲೆಂಡ್ ತಂಡಕ್ಕೆ ತಮ್ಮ ಅಲ್ಟ್ರಾ-ಆಕ್ರಮಣಕಾರಿ ಆಟವನ್ನು ಮುಂದುವರಿಸಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಮೈದಾನದಲ್ಲಿ ಆಡಿದ 106 ಟೆಸ್ಟ್ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 39 ಪಂದ್ಯಗಳಲ್ಲಿ ಗೆದ್ದ ಉದಾಹರಣೆಯಿದ್ದು ಮೇಲುಗೈ ಸಾಧಿಸಿದೆ. ಹೀಗಾಗಿ ಮೋಡಕವಿದ ವಾತಾವರಣವಿಲ್ಲವಾದಲ್ಲಿ ಟಾಸ್ ಗೆದ್ದ ನಾಯಕ ಆರಂಭದಲ್ಲಿ ಬ್ಯಾಟಿಂಗ್ ಆಯ್ಕೆ ಮಾಡುವ ಸಾಧ್ಯತೆಯಿದೆ.
ಹವಾಮಾನ: ಇನ್ನು ಈ ಪಂದ್ಯಕ್ಕೂ ಮಳೆಯ ಆತಂಕ ಇದ್ದೇ ಇದೆ. ಅದರಲ್ಲೂ ಮೊದಲನೇ ದಿನ ಮೂರನೇ ದಿನ ಹಾಗೂ ಐದನೇ ದಿನ ಭಾರೀ ಮಳೆಯಾಗುವ ಮುನ್ಸೂಚನೆಯಿದೆ.
ಸಂಭಾವ್ಯ ಆಡುವ ಬಳಗ
ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೊನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಆಸ್ಟ್ರೇಲಿಯಾ ಸಂಭಾವ್ಯ ಆಡುವ ಬಳಗ: ಮಾರ್ಕಸ್ ಹ್ಯಾರಿಸ್/ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್ ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಕ್ಯಾಮೆರಾನ್ ಗ್ರೀನ್/ಟಾಡ್ ಮರ್ಫಿ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications