For Quick Alerts
ALLOW NOTIFICATIONS  
For Daily Alerts
 

Ashes 2023: ಮೂರನೇ ದಿನ ಇಂಗ್ಲೆಂಡ್‌ಗೆ ಭಾರೀ ಹಿನ್ನಡೆ: ಆಸಿಸ್ ಬಿಗಿ ಹಿಡಿತದಲ್ಲಿ ಪಂದ್ಯ

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಆಶಸ್ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೆಯ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 91 ರನ್‌ಗಳ ಮುನ್ನಡೆ ಪಡೆದುಕೊಂಡಿದ್ದ ಆಸ್ಟ್ರೇಲಿಯಾ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಭರ್ಜರಿ ಆಟವನ್ನು ಆರಂಭಿಸಿದೆ. ಅನುಭವಿ ಆಟಗಾರ ಉಸ್ಮಾನ್ ಖವಾಜ ಅರ್ಧ ಶತಕ ಸಿಡಿಸಿದ್ದು ಇಂಗ್ಲೆಂಡ್ ಪಡೆಗೆ ಭೀತಿ ಹೆಚ್ಚಿಸಿದೆ.

ಎರಡನೇ ದಿನದಾಟದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಮುನ್ನುಗ್ಗುತ್ತಿದ್ದ ಇಂಗ್ಲೆಂಡ್ ತಂಡವನ್ನು ಮೂರನೇ ದಿನದಾಟದ ಮೊದಲ ಸೆಶನ್‌ನಲ್ಲಿಯೇ ಕಟ್ಟಿಹಾಕುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. 325 ರನ್‌ಗಳಿಗೆ ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದ್ದು 91 ರನ್‌ಗಳ ಹಿನ್ನಡೆ ಅನುಭವಿಸಿತು.

Ashes 2023, Eng vs Aus: Australia strong hold in Lords test: day 3 Highlights

2ನೇ ದಿನದಾಟದ ಅಂತ್ಯದಲ್ಲಿ ಇಂಗ್ಲೆಂಡ್ 4 ವಿಕೆಟ್ ಕಳೆದುಕೊಂಡು 278 ರನ್‌ಗಳನ್ನು ಗಳಿಸಿತ್ತು. ಹ್ಯಾರಿ ಬ್ರೂಕ್ ಹಾಗೂ ಬೆನ್ ಸ್ಟೋಕ್ಸ್ ಅವರಂತಾ ಪ್ರಮುಖ ದಾಂಡಿಗರು ಕ್ರೀಸ್‌ನಲ್ಲಿದ್ದರು. ಆದರೆ ಈ ಇಬ್ಬರು ಆಟಗಾರನ್ನು ಕುಡ ಶೀಗ್ರದಲ್ಲಿಯೇ ಔಟ್ ಮಾಡುವಲ್ಲಿ ಯಶಸ್ವಿಯಾದ ಇಂಗ್ಲೆಂಡ್ ತಂಡ ನಂತರ ಜಾನಿ ಬೈರ್‌ಸ್ಟೋವ್ ಅವರನ್ನು ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯದಂತೆ ಮಾಡುವಲ್ಲಿ ಆಸಿಸ್ ಬೌಲರ್‌ಗಳು ಯಶಸ್ವಿಯಾದರು. ನಂತರ ಇಂಗ್ಲೆಂಡ್ ಬಾಲಂಗೋಚಿಗಳನ್ನು ಸುಲಭವಾಗಿ ಔಟ್ ಮಾಡುವಲ್ಲಿ ಆಸಿಸ್ ಬೌಲರ್‌ಗಳು ಯಶಸ್ವಿಯಾದರು.

ಹೀಗಾಗಿ ಇಂಗ್ಲೆಂಡ್ ತಂಡ ಲಾರ್ಡ್ಸ್ ಮೈದಾನದಲ್ಲಿ 325 ರನ್‌ಗಳಿಸಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡ ಈ ಪಂದ್ಯದಲ್ಲಿ ಮಹತ್ವದ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆಸ್ಟ್ಏಲಿಯಾ ಪರವಾಗಿ ಮಿಚೆಲ್ ಸ್ಟಾರ್ಕ್ ಮೂರು ವಿಕೆಟ್ ಕಬಳಿಸಿದರೆ ಹೇಜಲ್‌ವುಡ್ ಮತ್ತು ಟ್ರೇವಿಸ್ ಹೆಡ್ ತಲಾ ಎರಡು ವಿಕೆಟ್ ಪಡೆದರು. ನಾಯಕ ಪ್ಯಾಟ್ ಕಮ್ಮಿನ್ಸ್, ನಾಥನ್ ಲಿಯಾನ್, ಹಾಘೂ ಕ್ಯಾಮರೂನ್ ಗ್ರೀನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.

ನಂತರ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್‌ಗೆ 63 ರನ್‌ಗಳ ಜೊತೆಯಾಟ ಬಂದರೆ ಎರಡನೇ ವಿಕೆಟ್‌ಗೆ ಕೂಡ ಉತ್ತಮ ಜೊತೆಯಾಟ ಬಂದಿತು. ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲ್ಯಾಬುಶೇನ್ ಕ್ರಮವಾಗಿ 25 ಹಾಗೂ 30 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಇನ್ನು ಉಸ್ಮಾನ್ ಖವಾಜ 58 ರನ್‌ಗಳಿಸಿ ಅಜೇಯವಾಗುಳಿದರೆ ಸ್ಟೀವ್ ಸ್ಮಿತ್ 6 ರನ್‌ಗಳಿಸಿ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದಿರಿಸಿದ್ದಾರೆ. ಮಳೆಯ ಕಾರಣ ಮೂರನೇ ದಿನ ಹೆಚ್ಚು ಆಟ ನಡೆಯಲು ಸಾಧ್ಯವಾಗಲಿಲ್ಲ.

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಓಲಿ ರಾಬಿನ್ಸನ್, ಜೋಶ್ ಟಂಗ್, ಜೇಮ್ಸ್ ಆಂಡರ್ಸನ್
ಬೆಂಚ್: ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್ಶಾ, ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್

Story first published: Friday, June 30, 2023, 23:36 [IST]
Other articles published on Jun 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+