Ashes 2023: ಹೆಡಿಂಗ್ಲೆ ಟೆಸ್ಟ್ ಪಂದ್ಯಕ್ಕಾಗಿ ಆಡುವ 11ರ ಬಳಗ ಪ್ರಕಟಿಸಿದ ಇಂಗ್ಲೆಂಡ್; ಹೊರಬಿದ್ದ ಜಿಮ್ಮಿ
ಬರ್ಮಿಂಗ್‌ಹ್ಯಾಮ್ ಮತ್ತು ಲಾರ್ಡ್ಸ್‌ನಲ್ಲಿ ನಡೆದ 2023ರ ಆಶಸ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆತಿಥೇಯ ಇಂಗ್ಲೆಂಡ್ ತಂಡದ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.
ತವರಿನಲ್ಲಿ ಇಂಗ್ಲೆಂಡ್ ತಂಡಕ್ಕೆ 2023ರ ಆಶಸ್ ಸರಣಿ ಕೆಟ್ಟ ಆರಂಭವನ್ನು ನೀಡಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋತಿರುವ ಬೆನ್ ಸ್ಟೋಕ್ಸ್ ನಾಯಕತ್ವದ ತಂಡ ನಿರ್ಣಾಯಕ ಮೂರನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗಾಗಿ ಹುಡುಕಾಟ ನಡೆಸಲಿದೆ.
ಗುರುವಾರ, ಜುಲೈ 6ರಿಂದ ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ಆಶಸ್ 2023ರ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಮೂರನೇ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತನ್ನ ಆಡುವ 11ರ ಬಳಗವನ್ನು ಪ್ರಕಟಿಸಿದೆ.

ವೇಗಿಗಳಾದ ಜೋಶ್ ಟಂಗ್ ಮತ್ತು ಜೇಮ್ಸ್ ಆಂಡರ್ಸನ್ ಅವರನ್ನು ಕೈಬಿಟ್ಟಿರುವ ಆಂಗ್ಲರ ಪಡೆ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇನ್ನು ಗಾಯಗೊಂಡು 2ನೇ ಟೆಸ್ಟ್ ಪಂದ್ಯ ತಪ್ಪಿಸಿಕೊಂಡಿದ್ದ ಆಲ್‌ರೌಂಡರ್ ಮೊಯಿನ್ ಅಲಿ ಮುಂದಿನ ಪಂದ್ಯಕ್ಕೆ ವಾಪಸ್ಸಾಗಿದ್ದಾರೆ.
ಇನ್ನು ಹೆಡಿಂಗ್ಲೆಯಲ್ಲಿ ನಡೆಯುವ ಆಶಸ್ ಸರಣಿಯ ಮೂರನೇ ಪಂದ್ಯವು ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್ ಸ್ಟೀವನ್ ಸ್ಮಿತ್‌ಗೆ 100ನೇ ಟೆಸ್ಟ್ ಪಂದ್ಯವಾಗಿರಲಿದೆ. ಇದೇ ವೇಳೆ ತಮ್ಮ ತಂಡಕ್ಕೆ ಗೆಲುವು ತಂದುಕೊಟ್ಟು ಆಶಸ್ ಟೆಸ್ಟ್ ಸರಣಿಯನ್ನು ಗೆಲ್ಲುವ ಗುರಿ ಹೊಂದಿದ್ದಾರೆ.
ಹೆಡಿಂಗ್ಲೆ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡದ ಆಡುವ 11ರ ಬಳಗ
ಬೆನ್ ಸ್ಟೋಕ್ಸ್ (ನಾಯಕ), ಝಾಕ್ ಕ್ರಾಲಿ, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಆಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications