Ashes 2023: ಸರಣಿ ಸಮಬಲದ ಮೇಲೆ ಕಣ್ಣು: ನಾಲ್ಕನೇ ಟೆಸ್ಟ್‌ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್
ಆಶಸ್ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಸರಣಿಯಲ್ಲಿನ ಹಿನ್ನಡೆಯನ್ನು 1-2 ಅಂತರಕ್ಕೆ ಕುಗ್ಗಿಸಿದೆ. ಇದೀಗ ಸರಣಿಯ ನಾಲ್ಕನೇ ಪಂದ್ಯದ ಮೇಲೆ ಎರಡು ತಂಡಗಳು ಕೂಡ ಚಿತ್ತ ನೆಟ್ಟಿದ್ದು ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತನ್ನ ತಂಡವನ್ನು ಇಂದು ಪ್ರಕಟಿಸಿದೆ.
ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಕೂಡ ಇಂಗ್ಲೆಂಡ್ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಮೂರನೇ ಪಂದ್ಯಕ್ಕೆ ಪ್ರಕಟಿಸಿದ ತಂಡವನ್ನೇ ಉಳಿಸಿದೆ. ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಗೆಲುವು ಸಾಧಿಸಿದ ಬಳಿಕ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಇರಲು ಇಂಗ್ಲೆಂಡ್ ನಿರ್ಧರಿಸಿ ಈ ತಂಡವನ್ನು ಪ್ರಕಟಿಸಿದೆ.

ಆಶಸ್ ಸರಣಿಯ ನಾಲ್ಕನೇ ಪಂದ್ಯಕ್ಕೆ ಇನ್ನು ಒಂದು ವಾರಕ್ಕೂ ಅಧಿಕ ಸಮಯಾವಕಾಶವಿದೆ. ಈ ನಾಲ್ಕನೇ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದ್ದು ಜುಲೈ 19ರಿಂದ ಈ ಪಂದ್ಯ ಆರಂಭವಾಗಿ 23ರಂದು ಅಂತ್ಯವಾಗಲಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್‌ನ ತಂಡವನ್ನು ಇಂದು ಮಂಗಳವಾರ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ.
ಇನ್ನು ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ರೋಚಕ ಗೆಲುವು ಸಾಧಿಸಿತ್ತು. ಇಂಗ್ಲೆಂಡ್ ತಂಡದ ಬ್ಯಾಸ್‌ಬಾಲ್ ಮಾದರಿಯ ಆಟದ ವಿರುದ್ಧ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿ ಮೊದಲ ಎರಡು ಪಂದ್ಯಗಳನ್ನು ಕೂಡ ತೆಕ್ಕೆಗೆ ಹಾಕಿಕೊಂಡಿತ್ತು. ಬರ್ಮಿಂಗ್‌ಹ್ಯಾಂಗ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 2 ವಿಕೆಟ್‌ಗಳ ಅಂತರದಿಂದ ಆಸ್ಟ್ರೇಲಿಯಾ ಗೆದ್ದಿದ್ದರೆ ನಂತರ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ 43 ರನ್‌ಗಳ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿತ್ತು.
ಅದಾದ ಬಳಿಕ ಹೆಡಿಂಗ್ಲೆಯಲ್ಲಿ ನಡೆದ ಪಂದ್ಯ ಕೂಡ ಸಾಕಷ್ಟು ರೋಚಕತೆಯಿಂದ ಕೂಡಿದ್ದು ಕೊನೆಯ ಹಂತದವರೆಗೂ ಎರಡು ತಂಡಗಳು ಕೂಡ ಗೆಲುವಿನ ಅವಕಾಶವನ್ನು ಹೊಂದಿತ್ತು. ಆದರೆ ಅಂತರಮ ಹಂತದಲ್ಲಿ ಇಂಗ್ಲೆಂಡ್ ಮೇಲುಗೈ ಸಾಧಿಸಿದ್ದು ಈ ಪಂದ್ಯವನ್ನು ತನ್ನ ವಶಕ್ಕೆ ಪಡೆದುಕೊಂಡು ಸರಣಿಯಲ್ಲಿ ಮೊದಲ ಗೆಲುವು ಸಾಧಿಸಿದೆ. ಇದೀಗ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ನಾಲ್ಕನೇ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಸಮಬಲಗೋಳಿಸುವ ಲೆಕ್ಕಾಚಾರದಲ್ಲಿ ಇಂಗ್ಲೆಂಡ್ ತಂಡ ಇದ್ದರೆ ಆಸ್ಟ್ರೇಲಿಯಾ ತಂಡ ಈ ಪಂದ್ಯವನ್ನು ಗೆದ್ದು ಸರಣಿಯನ್ನು ವಶಕ್ಕೆ ಪಡೆಯುವ ಇರಾದೆಯಲ್ಲಿದೆ.
4ನೇ ಪಂದ್ಯಕ್ಕೆ ಪ್ರಕಟಿಸಿದ ಇಂಗ್ಲೆಂಡ್ ಸ್ಕ್ವಾಡ್ ಹೀಗಿದೆ: ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಜೇಮ್ಸ್ ಆಂಡರ್ಸನ್, ಜೊನಾಥನ್ ಬೈರ್‌ಸ್ಟೋವ್, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಡಾನ್ ಲಾರೆನ್ಸ್, ಆಲಿ ರಾಬಿನ್ಸನ್, ಜೋ ರೂಟ್, ಜೋಶ್ ಟಂಗ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications