Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಶಸ್ ಸರಣಿ: ಮೊದಲ ಪಂದ್ಯಕ್ಕೆ ಆಡುವ 11ರ ಬಳಗ ಪ್ರಕಟಿಸಿದ ಇಂಗ್ಲೆಂಡ್: ಆಸಿಸ್ ವಿರುದ್ಧ ದಿಗ್ಗಜ ಜೋಡಿ ಕಣಕ್ಕೆ

ಜೂನ್ 16ರಿಂದ ಇಂಗ್ಲೆಂಡ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಆಶಸ್ ಟೆಸ್ಟ್ ಸರಣಿ ಆರಂಭವಾಗಲಿದೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಈ ಐತಿಹಾಸಿಕ ಸರಣಿಗಾಗಿ ಎರಡು ತಂಡಗಳು ಕೂಡ ಅದ್ಭುತವಾದ ಸಿದ್ಧತೆ ಮಾಡಿಕೊಂಡಿದೆ. ಈ ಸರಣಿಯ ಮೊಎಲ ಪಂದ್ಯದ ಆರಂಭಕ್ಕೆ ಎರಡು ದಿನಗಳ ಮುನ್ನವೇ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ 11ರ ಬಳಗವನ್ನು ಪ್ರಕಟಿಸಿದೆ.

ಈ ತಂಡದಲ್ಲಿ ಇತ್ತೀಚೆಗಷ್ಟೇ ಟೆಸ್ಟ್ ನಿವೃತ್ತಿ ವಾಪಾಸ್ ಪಡೆದಿರುವ ಮೊಯೀನ್ ಅಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಆಡುವ ಬಳಗದ ಮತ್ತೊಂದು ಪ್ರಮುಖ ಹೈಟೈಟ್ಸ್ ಎಂದರೆ ಇಂಗ್ಲೆಂಡ್ ತಂಡದ ಇಬ್ಬರು ದಿಗ್ಗಜ ವೇಗದ ಬೌಲರ್‌ಗಳಾದ ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಇಬ್ಬರು ಕೂಡ ಈ ತಂಡದ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Ashes 2023: England announced playing XI for 1st Test, James Anderson and Stuart Broad play together

ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಇತ್ತೀಚೆಗೆ ಇಂಗ್ಲೆಂಡ್ ತಂಡ ಐರ್ಲೆಂಡ್ ವಿರುದ್ಧ ಆಡಿದ ಏಕೈಕ ಟೆಸ್ಟ್ ತಂಡದಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದರು. ಆಶಸ್ ಸರಣಿಗೆ ಫಿಚ್ ಆಗಿ ಉಳಿದುಕೊಳ್ಳುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದರು. ಇನ್ನು ಈ ಸರಣಿಯಲ್ಲಿ ಆಡಿದ್ದ ಬ್ರಾಡ್ ಅದ್ಭುತ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದಿದ್ದರು.

ಐರ್ಲೆಂಡ್ ವಿರುದ್ಧ ಲಾರ್ಡ್ಸ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಅಗ್ರ ಕ್ರಮಾಂಕ ಉತ್ತಮ ಪ್ರದರ್ಶನ ನೀಡಿದ ಕಾರಣ ಜಾನಿ ಬೈರ್‌ಸ್ಟೋವ್‌ಗೆ ಬ್ಯಾಟಿಂಗ್‌ಗೆ ಅವಕಾಶ ದೊರೆತಿರಲಿಲ್ಲ. ಗಾಯದಿಂದಾಗಿ ಸುಮಾರು ಒಂದು ವರ್ಷಗಳ ಕಾಲ ಕ್ರಿಕೆಟ್‌ನಿಂದ ದೂರವುಳಿದಿದ್ದ ಬೈರ್‌ಸ್ಟೊವ್ ಆಸ್ಟ್ರೇಲಿಯಾ ವಿರುದ್ಧ ಈ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದು ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ.

ಬೆನ್ ಡಕೆಟ್ ಮತ್ತು ಝಾಕ್ ಕ್ರಾಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದರೆ ಐರ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ದ್ವಿಶತಕ ಗಳಿಸಿದ ಒಲಿ ಪೋಪ್, ಮಾಜಿ ನಾಯಕ ಜೋ ರೂಟ್ ಮೂರು ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಇತ್ತೀಚಿನ ದಿನಗಳಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಹ್ಯಾರಿ ಬ್ರೂಕ್ ನಂತರದ ಸ್ಥಾನದಲ್ಲಿ ಕಣಕ್ಕಿಳಿದರೆ ಒಲ್ಲಿ ರಾಬಿನ್ಸನ್ ಬೌಲಿಂಗ್‌ನ ಜೊತೆಗೆ ಕೆಳಕ್ರಮಂಕದಲಕ್ಲಿ ಬ್ಯಾಟಿಂಗ್‌ಲ್ಲಿಯೂ ತಂಡಕ್ಕೆ ನೆರವಾಗಲಿದ್ದಾರೆ.

ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್, ಮೊಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್

Story first published: Wednesday, June 14, 2023, 21:21 [IST]
Other articles published on Jun 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+