Ashes 2023: ಮೊದಲ ಇನ್ನಿಂಗ್ಸ್‌ನಲ್ಲಿ 7 ರನ್‌ಗಳ ಹಿನ್ನಡೆ ಅನುಭವಿಸಿದ ಆಸಿಸ್
ಆಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿಯೂ ಇಂಗ್ಲೆಂಡ್ ತಂಡದ 'bazzball' ಶೈಲಿಯ ಆಟ ಅದ್ಭುತ ಯಶಸ್ಸು ಕಂಡಂತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 78 ಓವರ್‌ಗಳ ಕಾಳ ಬ್ಯಾಟಿಂಗ್ ನಡೆಸಿ 398 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡುವ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ಚಕಿತಗೊಳಿಸಿದ್ದ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾವನ್ನು ಮುನ್ನಡೆ ಸಾಧಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದೆ.
ಉಸ್ಮಾನ್ ಖವಾಜ ಅಮೋಘ ಶತಕ ಹಾಗೂ ಅಲೆಕ್ಸ್ ಕ್ಯಾರಿ ಹಾಗೂ ಟ್ರೆವಿಸ್ ಹೆಡ್ ಅವರ ಅರ್ಧ ಶತಕದ ನೆರವಿನಿಂದ ಆಸ್ಟ್ರೇಲಿಯಾ ಇಂಗ್ಲೆಂಡ್ ಸ್ಕೋರ್ ಹಿಂದಿಕ್ಕುವ ವಿಶ್ವಾಸ ಮೂಡಿಸಿತ್ತ. ಆದರೆ ಮೂರನೇ ದಿನದಾಟದಲ್ಲಿ ಬೌಲಿಂಗ್ ಹಾಗೂ ಫಿಲ್ಡೀಂಗ್‌ನಲ್ಲಿಯೂ ಆಕ್ರಮಣಕಾರಿ ಆಟಕ್ಕೆ ಮುಂದಾದ ಇಂಗ್ಲೆಂಡ್ ಆಸ್ಟ್ರೇಲಿಯಾ ತಂಡವನ್ನು 386 ರನ್‌ಗಳಿಗೆ ಆಲವಟ್ ಮಾಡುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಉಸ್ಮಾನ್ ಖವಾಕ ಅವರನ್ನು ಔಟ್ ಮಾಡಲು ಇಂಗ್ಲೆಂಡ್ ಬಳಸಿದ ರಣತಂತ್ರ ಅದ್ಭುತವಾಗಿ ಯಶಸ್ಸು ಕಂಡಿತು. ಪ್ಯಾಟ್ ಕಮ್ಮನ್ಸ್ ಹೊರತುಪಡಿಸಿ ಆಸಿಸ್ ಬಾಲಂಗೋಚಿಗಳು ಸುಲಭವಾಗಿ ಔಟಾಗಿದ್ದು ಇಂಗ್ಲೆಂಡ್ ಕೆಲಸ ಸುಲಭವಾಯಿತು.

ಎರಡನೇ ದಿನದಾಟದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದ ಉಸ್ಮಾನ್ ಖವಾಜ ಅಬ್ಬಿರಿಸಿದ್ದು ಪ್ರಮುಖ ಅಂಶ. ಶತಕ ಸಿಡಿಸಿದ್ದು ಮಾತ್ರವಲ್ಲದೆ ತಮ್ಮ ಆಟವನ್ನು ಮೂರನೇ ದಿನಕ್ಕೂ ಅವರು ಕ್ರೀಸ್ ಕಾಯ್ದಿರಿಸಿಕೊಂಡಿದ್ದ ಕಾರಣ ಅವರನ್ನು ಔಟ್ ಮಾಡುವುದು ಇಂಗ್ಲೆಂಡ್ ಬೌಲರ್‌ಗಳ ಮುಂದಿದ್ದ ದೊಡ್ಡ ಸವಾಲಾಗಿತ್ತು. ಎರಡನೇ ದಿನದಾಟದಲ್ಲಿ ಖವಾಜಾಗೆ ಭರ್ಜರಿ ಸಾಥ್ ನೀಡಿದ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಮೂರನೇ ದಿನದಾಟದಲ್ಲಿ ಶೀಘ್ರದಲ್ಲೇ ವಿಕೆಟ್ ಕಳೆದುಕೊಳ್ಳುವ ಮೂಲಕ ಇಂಗ್ಲೆಂಡ್ ಮೇಲುಗೈ ಸಾಧಿಸಿತ್ತು. ನಂತರ ಖವಾಜ ಕೂಡ 141 ರನ್‌ಗಳಿಗೆ ಔಟಾದರು. ಮೂರನೇ ದಿನ 75ರನ್‌ಗಳನ್ನು ಮಾತ್ರವೇ ಸೇರಿಸಿದ ಆಸ್ಟ್ರೇಲಿಯಾ ಉಳಿದ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ಹೀಗಾಗಿ ನಿರೀಕ್ಷಿತ ರನ್‌ಗಳಿಸಲು ಆಸಿಸ್ ವಿಫಲವಾಗಿದೆ.
ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ವೇಗಿಗಳಾದ ಸ್ಟುವರ್ಟ್ ಬ್ರಾಡ್ ಹಾಗೂ ರಾಬಿನ್ಸನ್ ತಲಾ ಮೂರು ವಿಕೆಟ್ ಪಡೆದುಕೊಂಡಿದ್ದಾರೆ. ಮೊಯೀನ್ ಅಲಿ ಎರಡು ವಿಕೆಟ್ ಕಿತ್ತರೆ ಜೇಮ್ಸ್ ಆಂಡರ್ಸನ್ ಹಾಗೂ ನಾಯಕ ಬೆನ್ ಸ್ಟೋಕ್ಸ್ ತಲಾ ಒಂದು ವಿಕೆಟ್ ಕಬಳಿಸಿದರು.
ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್
ಬೆಂಚ್: ಡೇನಿಯಲ್ ಲಾರೆನ್ಸ್, ಜೋಶ್ ಟಂಗ್, ಮ್ಯಾಥ್ಯೂ ಪಾಟ್ಸ್, ಮಾರ್ಕ್ ವುಡ್, ಕ್ರಿಸ್ ವೋಕ್ಸ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್ ಆಡುತ್ತಿದ್ದಾರೆ
ಬೆಂಚ್: ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಜೋಶ್ ಇಂಗ್ಲಿಸ್, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications