Ashes 2023: ಮೊದಲ ಗೆಲುವಿಗಾಗಿ ಇಂಗ್ಲೆಂಡ್ ಆಸಿಸ್ ತಂಡಗಳ ಅಂತಿಮ ಪ್ರಯತ್ನ: ಕೊನೆಯ ದಿನದಾಟದ Live ಸ್ಕೊರ್
ಆಶಸ್ ಸರಣಿಯ ಕೊನೆಯ ದಿನದಾಟ ಆರಂಭವಾಗಿದೆ. ಎರಡು ತಂಡಗಳು ಕೂಡ ಈ ಪಂದ್ಯದಲ್ಲಿ ಗೆಲುವು ಸಾಧಿಸಲು ತಮ್ಮ ಕೊನೆಯ ಪ್ರಯುತ್ನವನ್ನು ನಡೆಸುತ್ತಿದೆ. ಈ ಪಂದ್ಯದಲ್ಲಿ ಗೆಲುವಿಗಾಗಿ ಎರಡು ತಂಡಗಳಿಗೂ ಅವಕಾಶವಿದ್ದು ಅಂತಿಮ ದಿನದಾಟದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ನಾಲ್ಕನೇ ದಿನದಾಟದ ಅಂತ್ಯದಲ್ಲಿ ಆಸ್ಟ್ರೇಲಿಯಾ ತಂಡ 107 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ದಿನದಾಟವನ್ನು ಅಂತ್ಯಗೊಳಿಸಿತ್ತು. ಆರಂಬಿಕ ಆಟಗಾರ ಉಸ್ಮಾನ್ ಖವಾಜ ಹಾಗೂ ನೈಟ್ ವಾಚ್‌ಮನ್ ಆಗಿ ಕಣಕ್ಕಿಳಿದಿರುವ ಸ್ಕಾಟ್ ಬೋಲಂಡ್ ಕೊನೆಯ ದಿನದಾಟ ಆರಂಭಿಸಿದ್ದಾರೆ. ಹೀಗಾಗಿ ಪಂದ್ಯ ಕುತೂಹಲ ಕೆರಳಿಸಿದೆ.

Live ಸ್ಕೋರ್ ಹೀಗಿದೆ
ಮೊದಲ ಇನ್ನಿಂಗ್ಸ್‌ನಲ್ಲಿ 7 ರನ್‌ಗಳ ಅಲ್ಪ ಮುನ್ನಡೆ ಪಡೆದುಕೊಂಡಿದ್ದ ಇಂಗ್ಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 273 ರನ್‌ಗಳನ್ನು ಕಲೆಹಾಕಲು ಮಾತ್ರವೇ ಯಶಸ್ವಿಯಾಗಿತ್ತು. ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ ಪರವಾಗಿ ಬ್ಯಾಟಿಂಗ್ ನಡೆಸುವಾಗ ಜೋ ರೂಟ್ ಹ್ಯಾರಿ ಬ್ರೂಕ್ ಮತ್ತು ನಾಯಕ ಬೆನ್ ಸ್ಟೋಕ್ಸ್ ಹೊರತುಪಡಿಸಿದರೆ ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ಹೀಗಾಗಿ 66.2 ಓವರ್‌ಗಳಲ್ಲಿ ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 273 ರನ್‌ಗಳನ್ನು ಮಾತ್ರವೇ ಯಶಸ್ವಿಯಾಯಿತು.
ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಎರಡನೇ ಇನ್ನಿಂಗ್ಸ್‌ನಲ್ಲಿ 281 ರನ್‌ಗಳನ್ನು ಗಳಿಸುವ ಸವಾಲು ನೀಡಿತು. ಈ ಗುರಿಯನ್ನು ಬೆನ್ನ್ಟಲು ಆರಂಭಿಸಿದ ಆಸ್ಟ್ರೇಲಿಯಾ ತಂಡ ಮೊದಲ ವಿಕೆಟ್‌ಗೆ 17.4 ಓವರ್‌ಗಳಲ್ಲಿ 61 ರನ್‌ಗಳ ಜೊತೆಯಾಟ ನೀಡುವ ಉತ್ತಮ ಆರಂಭ ನೀಡಿತು. ಆದರೆ ಈ ಸಂದರ್ಭದಲ್ಲಿ 36 ರನ್‌ಗಳಿಸಿದ್ದ ಡೇವಿಡ್ ವಾರ್ನರ್ ಬಾಬಿನ್ಸನ್‌ಗೆ ವಿಕೆಟ್ ನೀಡಿ ನಿರ್ಗಮಿಸಿದರು.
ನಂತರ ಬಂದ ಮಾರ್ನಸ್ ಲ್ಯಾಬುಶೇನ್ ಹಾಗೂ ಸ್ಟೀವ್ ಸ್ಮಿತ್ ಇಬ್ಬರು ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಸ್ಟುವರ್ಟ್ ಬ್ರಾಡ್ ಈ ಇಬ್ಬರು ಅಪಾಯಕಾರಿ ದಾಂಡಿಗರನ್ನು ಕೂಡ ಔಟ್ ಮಾಡುವ ಮೂಲಕ ಇಂಗ್ಲೆಂಡ್ ತಂಡಕ್ಕೆ ಮೇಲುಗೈ ದೊರೆಯುವಂತೆ ಮಾಡಿದರು. ಈ ಮೂಲಕ ಆಸ್ಟ್ರೇಲಿಯಾ ನಾಲ್ಕನೇ ದಿನದಾಟದ ಅಂತ್ಯದಲ್ಲಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿದೆ.
ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್
ಬೆಂಚ್: ಡೇನಿಯಲ್ ಲಾರೆನ್ಸ್, ಜೋಶ್ ಟಂಗ್, ಮ್ಯಾಥ್ಯೂ ಪಾಟ್ಸ್, ಮಾರ್ಕ್ ವುಡ್, ಕ್ರಿಸ್ ವೋಕ್ಸ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಜೋಶ್ ಇಂಗ್ಲಿಸ್, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications