ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠತ ಆಶಸ್ ಸರಣಿ ಇಂದಿನಿಂದ ಆರಂಬವಾಗಲಿದೆ. ಎರಡು ತಂಡಗಳು ಬಲಿಷ್ಠ ತಂಡದೊಂದಿಗೆ ಈ ಸರಣಿಗೆ ಸಜ್ಜಾಗಿದ್ದು ಕುತೂಹಲ ಮೂಡಿಸಿದೆ. ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿದ್ದು ಬಹುತೇಕ ಆಟಗಾರರು ಉತ್ತಮ ಫಾರ್ಮ್‌ನಲ್ಲಿರುವುದು ತಮಡದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಿಸಿದೆ.
ಮತ್ತೊಂದೆಡೆ ಇಂಗ್ಲೆಂಡ್ ತಂಡ ತವರಿನಲ್ಲಿ ನಡೆದ ಆಶಸ್‌ನಲ್ಲಿ ಅಮೋಘ ದಾಖಲೆ ಹೊಂದಿದ್ದು ಎರಡು ದಶಕದಿಂದ ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋತಿಲ್ಲ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಇಂಗ್ಲೆಂಡ್‌ನ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ತವರಿನಲ್ಲಿ ಎಲ್ಲಾ ತಂಡಗಳನ್ನು ಹಿಮ್ಮೆಟ್ಟಿಸಿದೆ. ಆಸ್ಟ್ರೇಲಿಯಾವನ್ನು ಕೂಡ ಅದೇ ಶೈಲಿಯಲ್ಲಿ ಹಿಮ್ಮೆಟ್ಟಿಸುವುದು ಇಂಗ್ಲೆಂಡ್ ಪಾಳಯದ ಲೆಕ್ಕಾಚಾರ. ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿದ್ದು ಅಂಗಳದಲ್ಲಿ ಇದು ಯಾವ ರೀತಿ ಕಾರ್ಯರೂಪಕ್ಕೆ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರ
ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಆಶಸ್ ಸರಣಿಯಲ್ಲಿ ಮೊದಲ ಪಂದ್ಯ ಜೂನ್ 16ರಿಂದ ಆರಂಭಗೊಳ್ಳುತ್ತಿದೆ. ಇಂಗ್ಲೆಂಡ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ. 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಭಾರತದಲ್ಲಿ ಸೋನಿ ನೆಟ್‌ವರ್ಕ್‌ನಲ್ಲಿ ಈ ಪಂದ್ಯವನ್ನು ನೇರಪ್ರಸಾರಸಲ್ಲಿ ವಿಕ್ಷಿಸಬಹುದಾಗಿದ್ದು ಸೋನಿ ಲಿವ್‌ನಲ್ಲಿಯೂ ವೀಕ್ಷಿಸುವ ಅವಕಾಶವಿದೆ.
ಪಿಚ್ ರಿಪೋರ್ಟ್ ಹೀಗಿದೆ
ಎಡ್ಜ್‌ಬಾಸ್ಟನ್‌ನ ಪಿಚ್ ತಿರುವು ನೀಡುವ ಕಾರಣ ಬೌಲರ್‌ಗಳಿಗೆ ಆರಂಬದಲ್ಲಿ ಇಲ್ಲಿ ಉತ್ತಮ ಬೆಂಬಲ ದೊರೆಯಲಿದೆ. ಹೀಗಾಗಿ ಆರಂಭದಲ್ಲಿ ಬೌಲರ್‌ಗಳು ಕೆಲ ವಿಕೆಟ್‌ಗಳನ್ನು ಪಡೆಯುವ ಅವಕಾಶವಿದೆ. ಆದರೆ ಪಂದ್ಯ ಸಾಗುತ್ತಿದ್ದಂತೆಯೇ ಬ್ಯಾಟರ್‌ಗಳಿಗೆ ಪಿಚ್ ಉತ್ತಮ ಬೆಂಬಲ ದೊರೆಯುವ ನಿರೀಕ್ಷೆಯಿದೆ. ಇಲ್ಲಿ ಟಾಸ್ ಗೆದ್ದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ತಮಡದ ಬ್ಯಾಟಿಂಗ್ ವಿಭಾಗದ ಮೇಲಕೆ ಹೆಚ್ಚಿನ ಉತ್ತಮವನ್ನುಂಟು ಮಾಡುವ ಸಾಧ್ಯತೆಯಿದೆ
ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ ಭಾರತ ಮಹಿಳಾ ತಂಡ: ವೇಳಾಪಟ್ಟಿ ಪ್ರಕಟ
ಇತ್ತಂಡಗಳ ಆಡುವ ಬಳಗ
ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಆಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಆಸ್ಟ್ರೇಲಿಯಾ ಸಂಭಾವ್ಯ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (WK), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (c), ಸ್ಕಾಟ್ ಬೋಲ್ಯಾಂಡ್ / ಜೋಶ್ ಹ್ಯಾಜಲ್ವುಡ್, ನಾಥನ್ ಲಿಯಾನ್
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಇಂಗ್ಲಂಡ್: ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್, ಡೇನಿಯಲ್ ಲಾರೆನ್ಸ್, ಜೋಶ್ ಟಂಗ್, ಮ್ಯಾಥ್ಯೂ ಪಾಟ್ಸ್, ಮಾರ್ಕ್ ವುಡ್, ಕ್ರಿಸ್ ವೋಕ್ಸ್
ಆಸ್ಟ್ರೇಲಿಯಾ: ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್, ಟಾಡ್ ಮರ್ಫಿ, ಜೋಶ್ ಇಂಗ್ಲಿಸ್, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್