Ashes 2023: ಇಂಗ್ಲೆಂಡ್ vs ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಶುಕ್ರವಾರ, ಜೂನ್ 16ರಿಂದ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಐದು ಪಂದ್ಯಗಳ ಆಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಕ್ರಿಕೆಟ್‌ನ ಅತ್ಯಂತ ಹಳೆಯ ಎದುರಾಳಿಗಳು ಮತ್ತೆ ಮೈದಾನದಲ್ಲಿ ಪೈಪೋಟಿ ನಡೆಸುತ್ತಿವೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡಲಿದೆ.
ಕಳೆದ ವರ್ಷ ನಾಯಕ ಬೆನ್ ಸ್ಟೋಕ್ಸ್ ಮತ್ತು ಕೋಚ್ ಬ್ರೆಂಡನ್ ಮೆಕಲಮ್ ಸಂಯೋಜನೆಯಿಂದ ಕ್ರಿಕೆಟ್‌ನ ಆಕ್ರಮಣಕಾರಿ ನೀತಿಯೊಂದಿಗೆ 13 ಟೆಸ್ಟ್ ಪಂದ್ಯಗಳಲ್ಲಿ 11 ಗೆಲುವುಗಳೊಂದಿಗೆ ಇಂಗ್ಲೆಂಡ್ ತಂಡ ಗಮನ ಸೆಳೆಯುವ ಪ್ರದರ್ಶನ ನೀಡಿದೆ. ಇದೇ ನೀತಿ ಆಸ್ಟ್ರೇಲಿಯಾ ವಿರುದ್ಧವೂ ಕೆಲಸ ಮಾಡುತ್ತದೆಯೇ ಎಂದು ಕಾದು ನೋಡಬೇಕಿದೆ.
ಇನ್ನು ಕಳೆದ ವಾರವಷ್ಟೇ ಲಂಡನ್‌ನ ಓವಲ್‌ನಲ್ಲಿ ಭಾರತ ತಂಡವನ್ನು 209 ರನ್‌ಗಳಿಂದ ಸೋಲಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ಈ ಸರಣಿಯಲ್ಲಿಯೂ ಅದೇ ಪ್ರದರ್ಶನ ಮುಂದುವರೆಸಲು ಎದುರು ನೋಡುತ್ತಿದೆ,
ಸಾಂಪ್ರದಾಯಿಕ ಎದುರಾಳಿ ತಂಡದ ವಿರುದ್ಧ ವೇಗದ ಬೌಲಿಂಗ್ ದಾಳಿಯು ಕೆಲಸ ಮಾಡಬಹುದೇ ಎಂಬ ಅನುಮಾನಗಳು ಉಳಿದುಕೊಂಡಿವೆ.
ಇಂಗ್ಲೆಂಡ್ vs ಆಸ್ಟ್ರೇಲಿಯಾ ತಂಡಗಳ ಆಡುವ 11ರ ಬಳಗ
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಆಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್, ಸ್ಕಾಟ್ ಬೋಲ್ಯಾಂಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications