For Quick Alerts
ALLOW NOTIFICATIONS  
For Daily Alerts
 

ಆಶಸ್ 2023, ಲಾರ್ಡ್ಸ್ ಟೆಸ್ಟ್: 2ನೇ ದಿನದಾಟದಲ್ಲಿ ಇಂಗ್ಲೆಂಡ್ ಬೌಲರ್‌ಗಳು ಸಾಧಿಸುತ್ತಾರಾ ಮೇಲುಗೈ: Live ಸ್ಕೋರ್

ಆಶಸ್ ಸರಣಿಯ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು ಎರಡನೇ ದಿನದಾಟ ಇಂದು ನಡೆಯುತ್ತಿದೆ. ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಕೊನೆಯ ಹಂತದಲ್ಲಿ ಜೋ ರೂಟ್ ಎರಡು ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ತಂಡ ಕೂಡ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡುವ ಸೂಚನೆ ನೀಡಿದ್ದಾರೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಪಡೆದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ದೊರೆತಿತು. ಉಸ್ಮಾನ್ ಖವಾಜ ಹಾಗೂ ಡೇವಿಡ್ ವಾರ್ನರ್ ಅರ್ಧ ಶತಕದ ಜೊತೆಯಾಟ ನೀಡಿದರು. ಡೇವಿಡ್ ವಾರ್ನರ್ ಅರ್ಧ ಶತಕ ಸಿಡಿಸಿ ಮಿಂಚಿದ್ದು ಉತ್ತಮ ಅಡಿಪಾಯ ಹಾಕಿಕೊಟ್ಟರು. ಉಸ್ಮಾನ್ ಖವಾಜ ಈ ಇನ್ನಿಂಗ್ಸ್‌ನಲ್ಲಿ 17 ರನ್‌ಗಳನ್ನು ಗಳಿಸಲು ಮಾತ್ರವೇ ಶಕ್ತವಾದರು.

England vs Australia 2nd Test, day 2 Live Score

Live ಸ್ಕೋರ್ ಹೀಗಿದೆ

1
55392

ಇನ್ನು ನಂತರ ಮಾರ್ನಸ್ ಲ್ಯಾಬುಶೇನ್ ಹಾಗೂ ಸ್ಟೀವ್ ಸ್ಮಿತ್ ಜೋಡಿ ಶತಕದ ಜೊತೆಯಾಟ ನೀಡಿ ಮತ್ತೊಂದು ಉತ್ತಮ ಜೊತೆಯಾಟದಲ್ಲಿ ಭಾಗಿಯಾದರು. 47 ರನ್‌ಗಳಿಸಿ ಲ್ಯಾಬೈಶೇನ್ ಔಟ್ಆದ ಬಳಿಕ ಟ್ರೆವಿಡ್ ಹೆಡ್ ಕಣಕ್ಕಿಳಿದು ಮತ್ತೊಂದು ಸ್ಪೋಟಕ ಇನ್ನಿಂಗ್ಸ್ ಆಡಿದರು. ಸ್ಟೀವ್ ಸ್ಮಿತ್ ಹಾಗೂ ಹೆಡ್ ಜೋಡಿ ಕೂಡ ಶತಕದ ಜೊತೆಯಾಟ ನೀಡಿ ಮುನ್ನುಗ್ಗುತ್ತಿದ್ದಂತೆಯೇ ದಿನದಾಟದ ಅಂತ್ಯದ ಸಂದರ್ಭದಲ್ಲಿ ಟ್ರೆವಿಡ್ ಹೆಡ್ ಜೋ ರೂಟ್‌ಗೆ ಬಲಿಯಾದರು.

ಅದರ ಬೆನ್ನಿಗೇ ಕ್ಯಾಮರೂನ್ ಗ್ರೀನ್ ಅವರನ್ನು ಕೂಡ ಜೋ ರೂಟ್ ಬಲಿ ಪಡೆಯುವ ಮೂಲಕ ಸತತ ಎರಡು ವಿಕೆಟ್ ಪಡೆದು ದಿನದಾಟದ ಅಂತ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸಣ್ಣ ಚೇತರಿಕೆ ನೀಡಿದರು. ಈ ಮೂಲಕ ಇಂಗ್ಲೆಂಡ್ ತಂಡ ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾದ ಐದು ವಿಕೆಟ್‌ಗಳನ್ನು ಪಡೆದಂತಾಗಿದ್ದು ಆಸ್ಟ್ರೇಲಿಯಾ 339 ರನ್‌ಗಳನ್ನು ಗಳಿಸಿದೆ. ಸ್ಟೀವ್ ಸ್ಮಿತ್ 85 ರನ್‌ಗಳಿಸಿ ಅಜೇಯವಾಗುಳಿದರೆ ಅಲೆಕ್ಸ್ ಕ್ಯಾರಿ 11 ರನ್‌ಗಳಿಸಿದ್ದು ಎರಡನೇ ದಿನಕ್ಕೆ ಕ್ರೀಸ್‌ ಕಾಯ್ದಿರಿಸಿಕೊಂಡಿದ್ದಾರೆ.

ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಓಲಿ ರಾಬಿನ್ಸನ್, ಜೋಶ್ ಟಂಗ್, ಜೇಮ್ಸ್ ಆಂಡರ್ಸನ್
ಬೆಂಚ್: ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್

ಆಸ್ಟ್ರೇಲಿಯಾ ಆಡುವ ಬಳಗ: ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್ಶಾ, ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್

Story first published: Thursday, June 29, 2023, 15:34 [IST]
Other articles published on Jun 29, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+