Ashes 2023: ಐತಿಹಾಸಿಕ ಲಾರ್ಡ್ಸ್ ಅಂಗಳದಲ್ಲಿ ಮತ್ತೊಂದು ಕಾದಾಟಕ್ಕೆ ಸಜ್ಜಾದ ಇಂಗ್ಲೆಂಡ್, ಆಸ್ಟ್ರೇಲಿಯಾ
ಆಶಸ್ ಸರಣಿಯ ಎರಡನೇ ಪಂದ್ಯ ಜೂನ್ 28 ಬುಧವಾರ ಆರಂಭವಾಗಲಿದ್ದು ಎರಡು ತಂಡಗಳು ಕೂಡ ಮತ್ತೊಂದು ಸೆಣೆಸಾಟಕ್ಕೆ ಸಜ್ಜಾಗಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ರೋಚಕ ಗೆಲುವು ಸಾಧಿಸಿದ್ದು ಇಂಗ್ಲೆಂಡ್ ತಂಡ ತನ್ನದೇ ಆದ ಕೆಲ ತಪ್ಪು ನಿರ್ಧಾರಗಳಿಂದ ಗೆಲ್ಲಬಹುದಾಗಿದ್ದ ಪಂದ್ಯವನ್ನು ಸೋತು ನಿರಾಸೆ ಅನುಭವಿಸಿದೆ. ಈ ಸೋಲಿನ ಬಳಿಕ ಸಾಕಷ್ಟು ಪರಾಮರ್ಶೆಗಳು ನಡೆದಿದ್ದು ಎರಡು ತಮಡಗಳು ಕೂಡ ಮತ್ತೆ ಹೊಸ ಹುರುಪಿನಿಂದ ಕಣಕ್ಕಿಳಿಯಲು ಸಿದ್ಧವಾಗಿದೆ.
ಇನ್ನು ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ತಂಡವನ್ನು ಮೊದಲ ಪಂದ್ಯದಲ್ಲಿ ಮಣಿಸಿದ ಆತ್ಮವಿಶ್ವಾಸದಲ್ಲಿದ್ದರೆ ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಸೋಲು ಕಂಡರೂ ತನ್ನದೇ ಶೈಲಿಯ ಆಟವನ್ನು ಮುಂದುವರಿಸುವುದಾಗಿ ಹುಮ್ಮಸ್ಸಿನಿಂದ ಹೇಳಿಕೊಂಡಿದೆ. ತಂಡದ ನಾಯಕ ಬೆನ್ ಸ್ಟೋಕ್ಸ್, ಕೋಚ್ ಬ್ರೆಂಡನ್ ಮೆಕ್ಕಲಮ್ ಸೇರಿದಂತೆ ಕೆಲ ಆಟಗಾರರು ಕೂಡ ಇದೇ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯ ಕುತೂಹಲ ಹೆಚ್ಚುಗೊಳಿಸಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಆಶಸ್ ಸರಣಿಯ ಎರಡನೇ ಪಂದ್ಯ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಜೂನ್ 28ರಿಂದ ಈ ಪಂದ್ಯ ಆರಂಭವಾಗಲಿದ್ದು ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದ್ದು 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ನೆಟ್‌ವರ್ಕ್‌ನಲ್ಲಿ ಈ ಪಂದ್ಯ ನೇರಪ್ರಸಾರವಾಗಲಿದ್ದು ಸೋನಿ ಲಿವ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಲಂಡನ್ ಹವಾಮಾನ ವರದಿ ಹೇಗಿದೆ?
ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಎರಡನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡುವ ಸಾಧ್ಯತೆಯಿದೆ. ಮೊದಲ ದಿನದಾಟದ ಸಂದರ್ಬದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು 17-26 ಡಿಗ್ರ ಸೆಲ್ಸಿಯಸ್‌ನ ಮಧ್ಯೆ ಉಷ್ಣಾಂಶವಿರಲಿದೆ. ಇನ್ನು ಪಂದ್ಯದ ಎರಡನ ದಿನ ಹಾಗೂ ನಾಲ್ಕನೇ ದಿನದಾಟಕ್ಕೆ ಭಾರೀ ಮಳೆಯಿಂದಾಗಿ ಅಡ್ಡಿಯುಂಟಾಗುವ ಸಾಧ್ಯತೆಯಿದೆ.
ಇಂಗ್ಲೆಂಡ್ ಆಡುವ ಬಳಗ: ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜೋಶ್ ಟಂಗ್, ಜೇಮ್ಸ್ ಆಂಡರ್ಸನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್
ಆಸ್ಟ್ರೇಲಿಯಾ ಆಡುವ ಬಳಗ: ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್, ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್ಶಾ, ಜೋಶ್ ಇಂಗ್ಲಿಸ್, ಟಾಡ್ ಮರ್ಫಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications