ಆಶಸ್ 2023, ಇಂಗ್ಲೆಂಡ್ vs ಆಸ್ಟ್ರೇಲಿಯಾ 2ನೇ ಟೆಸ್ಟ್, ಟಾಸ್ ವರದಿ, ಆಡುವ ಬಳಗ Live ಸ್ಕೋರ್
ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಐದು ಪಂದ್ಯಗಳ ಆಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯ ಲಂಡನ್‌ನ ಲಾರ್ಡ್ಸ್‌ನಲ್ಲಿ ಆರಂಭವಾಗಿದೆ. ಪ್ರತಿಷ್ಠಿತ ಸರಣಿಯಲ್ಲಿ ಎರಡು ತಂಡಗಳು ಕುಡ ಮೇಲುಗೈ ಸಾಧಿಸಲು ಪೈಪೋಟಿ ನಡೆಸಲಿದ್ದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ಆಸ್ಟ್ರೇಲಿಯಾ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ತನ್ನ ಬ್ಯಾಸ್‌ಬಾಲ್ ಆಟದಲ್ಲಿ ಹಿನ್ನಡೆ ಅನುಭವಿಸಿ ಸೋಲು ಕಂಡಿತು. ಸಾಕಷ್ಟು ಪೈಪೋಟಿಯಿಂದ ಪಂದ್ಯ ಕೂಡಿದ್ದರೂ ಅತಿಯಾದ ಆತ್ಮವಿಶ್ವಾಸ ಕೈಕೊಟ್ಟ ಕಾರಣ ಕೇವಲ ಎರಡು ವಿಕೆಟ್‌ಗಳ ಅಂತರದಿಂದ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ವಿರುದ್ಧ ಶರಣಾಗಿದೆ. ಹೀಗಾಗಿ ಐದು ಪಂದ್ಯಗಳ ಈ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದ್ದು ಆತ್ಮವಿಶ್ವಾಸದಿಂದ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ.

ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಎರಡು ತಂಡಗಳು ಕೂಡ ಒಂದೊಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಇಂಗ್ಲೆಂಡ್ ತಂಡ ಆಲ್‌ರೌಂಡ್ ಮೊಯೀನ್ ಅಲಿ ಬದಲಿಗೆ ಜೋಶ್ ಟಂಗ್‌ಗೆ ಅವಕಾಶ ನೀಡಿದೆ. ಆಸ್ಟ್ರೇಲಿಯಾ ತಂಡದಲ್ಲಿ ಬೋಲಂಡ್ ಬದಲಿಗೆ ಮಿಚೆಲ್ ಸ್ಟಾರ್ಕ್ ಕಮ್‌ಬ್ಯಾಕ್ ಮಾಡಿದ್ದಾರೆ.
ಇನ್ನು ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ತಂಡವನ್ನು ಮೊದಲ ಪಂದ್ಯದಲ್ಲಿ ಮಣಿಸಿದ ಆತ್ಮವಿಶ್ವಾಸದಲ್ಲಿದ್ದರೆ ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಸೋಲು ಕಂಡರೂ ತನ್ನದೇ ಶೈಲಿಯ ಆಟವನ್ನು ಮುಂದುವರಿಸುವುದಾಗಿ ಹುಮ್ಮಸ್ಸಿನಿಂದ ಹೇಳಿಕೊಂಡಿದೆ. ತಂಡದ ನಾಯಕ ಬೆನ್ ಸ್ಟೋಕ್ಸ್, ಕೋಚ್ ಬ್ರೆಂಡನ್ ಮೆಕ್ಕಲಮ್ ಸೇರಿದಂತೆ ಕೆಲ ಆಟಗಾರರು ಕೂಡ ಇದೇ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯ ಕುತೂಹಲ ಹೆಚ್ಚುಗೊಳಿಸಿದೆ.
ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಎರಡನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡುವ ಸಾಧ್ಯತೆಯಿದೆ. ಮೊದಲ ದಿನದಾಟದ ಸಂದರ್ಬದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು 17-26 ಡಿಗ್ರ ಸೆಲ್ಸಿಯಸ್‌ನ ಮಧ್ಯೆ ಉಷ್ಣಾಂಶವಿರಲಿದೆ. ಇನ್ನು ಪಂದ್ಯದ ಎರಡನ ದಿನ ಹಾಗೂ ನಾಲ್ಕನೇ ದಿನದಾಟಕ್ಕೆ ಭಾರೀ ಮಳೆಯಿಂದಾಗಿ ಅಡ್ಡಿಯುಂಟಾಗುವ ಸಾಧ್ಯತೆಯಿದೆ.
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಓಲಿ ರಾಬಿನ್ಸನ್, ಜೋಶ್ ಟಂಗ್, ಜೇಮ್ಸ್ ಆಂಡರ್ಸನ್
ಬೆಂಚ್: ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್ಶಾ, ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications