Ashes 2023: ಮೂರನೇ ಕದನಕ್ಕೆ ಹೆಡಿಂಗ್ಲೆ ಸಜ್ಜು: ಸರಣಿ ಗೆಲುವಿನ ಮೇಲೆ ಆಸಿಸ್ ಕಣ್ಣು
ಆಶಸ್ ಸರಣಿ ಎಂದರೆ ಅಲ್ಲಿ ವಿವಾದಗಳು ಸಾಮಾನ್ಯ. ಈ ಬಾರಿಯ ಆಶಸ್ ಸರಣಿ ಕೂಡ ಅದಕ್ಕೆ ಹೊರತಲ್ಲ. ಲಾರ್ಡ್ಸ್ ಟೆಸ್ಟ್ ಪಂದ್ಯದ ಕೊನೆಯ ದಿನದಾಟದಲ್ಲಿ ಜಾನಿ ಬೈರ್‌ಸ್ಟೋವ್ ಔಟ್ ವಿವಾದದ ಬಳಿಕ ನಡೆದ ಚರ್ಚೆಗಳು ವಾದ ವಿವಾದಗಳು ಇನ್ನೂ ಮುಂದುವರಿಯುತ್ತಿರುವಂತೆಯೇ ಆಶಸ್ ಸರಣಿಯ ಮೂರನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಜುಲೈ 6 ಗುರುವಾರ ಸರಣಿಯ ಈ ಮೂರನೇ ಪಂದ್ಯ ಆರಂಬವಾಗಲಿದ್ದು ಎರಡು ತಂಡಗಳು ಕೂಡ ಮತ್ತೊಂದು ಸೆಣೆಸಾಟಕ್ಕೆ ಸಜ್ಜಾಗಿದೆ.
ಎಡ್ಜ್‌ಬಾಸ್ಟನ್ ಹಾಗೂ ಲಾರ್ಡ್ಸ್ ಮೈದಾನಗಳಲ್ಲಿ ನಡೆದ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ರೋಚಕ ಗೆಲುವು ಸಾಧಿಸಿದ್ದು ಸರಣಿಯಲ್ಲಿ 2-0 ಮುನ್ನಡೆಯಲ್ಲಿದೆ. ಈ ಮೂಲಕ 2001ರ ಬಳಿಕ ಇಂಗ್ಲೆಂಡ್ ನೆಲದಲ್ಲಿ ಆಶಸ್ ಸರಣಿ ಗೆಲ್ಲುವ ಅವಕಾಶ ಹೊಂದಿರುವ ಆಸ್ಟ್ರೇಲಿಯಾ ತಂಡ ಹೆಡಿಂಗ್ಲೆಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿಯೇ ಸರಣಿ ಗೆಲುವು ಸಾಧಿಸುವ ಆತ್ಮವಿಶ್ವಾಸದಲ್ಲಿದೆ. ಮತ್ತೊಂದೆಡೆ ಇಂಗ್ಲೆಂಡ್ ತಂಡ ಸರಣಿಯ ಹಿನ್ನಡೆಯ ಅಂತರವನ್ನು ಕಡಿಮೆಗೊಳಿಸಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.

ಎಡ್ಜ್‌ಬಾಸ್ಟನ್ ಹಾಗೂ ಲಾರ್ಡ್ಸ್ ಎರಡು ಪಂದ್ಯಗಳಲ್ಲಿಯೂ ಇಂಗ್ಲೆಂಡ್ ತಂಡ ಬ್ಯಾಸ್‌ಬಾಲ್ ಆಟಕ್ಕೆ ಮುಂದಾಗಿ ಕೈಸುಟ್ಟುಕೊಂಡಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಇಂಗ್ಲೆಂಡ್ ದಾಂಡಿಗರ ಆಟ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.
ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಆಶಸ್ ಸರಣಿಯ ಮೂರನೇ ಪಂದ್ಯ ಲೀಡ್ಸ್‌ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯಲಿದೆ. ಜುಲೈ 6ರಿಂದ ಈ ಪಂದ್ಯ ಆರಂಭವಾಗಲಿದ್ದು ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದ್ದು 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ನೆಟ್‌ವರ್ಕ್‌ನಲ್ಲಿ ಈ ಪಂದ್ಯ ನೇರಪ್ರಸಾರವಾಗಲಿದ್ದು ಸೋನಿ ಲಿವ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಪಿಚ್ ರಿಪೋರ್ಟ್
ಹೆಡಿಂಗ್ಲೆ ಮೈದಾನದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಕ್ಕೂ ಸಮವಾದ ಬೆಂಬಲ ನೀಡಲಿದ್ದು ಪೀಪೋಟಿಯ ಪಿಚ್ ಆಗಿರಲಿದೆ. ಪಿಚ್ ಇಲ್ಲಿ ತಿರುವು ಪಡೆದುಕೊಳ್ಳುವ ಕಾರಣ ವೇಗಿಗಳು ಇದರ ಲಾಭವನ್ನು ಪಡೆಯಬಹುದು. ಪಂದ್ಯ ಮುಂದುವರಿದಂತೆಯೇ ಇಲ್ಲಿ ಸ್ಪಿನ್ನರ್‌ಗಳು ಕೂಡ ನಿರ್ಣಾಯಕ ಪಾತ್ರವಹಿಸುವ ಸಾಧ್ಯತೆಯಿದೆ. ಮೊದಲ ಇನ್ನಿಂಗ್ಸ್‌ನ ಮುನ್ನಡೆ ಇಲ್ಲಿ ಬಹಳ ಪ್ರಮುಖವಾಗಲಿದೆ.
ಲಂಡನ್ ಹವಾಮಾನ ವರದಿ ಹೇಗಿದೆ?
ಮೊದಲ ಎರಡು ದಿನಗಳ ಪರಿಸ್ಥಿತಿಗಳು ಕ್ರಿಕೆಟ್ ಆಟಕ್ಕೆ ಸೂಕ್ತವಾಗಿರುತ್ತದೆ. ತಾಪಮಾನವು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಟೆಸ್ಟ್‌ನ ಕೊನೆಯ ಮೂರು ದಿನಗಳಲ್ಲಿ ಮಳೆಯ ಮುನ್ಸೂಚನೆ ಇದೆ ಈ ದಿನಗಳಲ್ಲಿ ತಾಪಮಾನವು 20ಕ್ಕಿಂತಲೂ ಕಡಿಮೆಯಾಗುವ ನಿರೀಕ್ಷೆಯಿದೆ.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ(ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್(ನಾಯಕ), ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್ಶಾ, ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಇಂಗ್ಲೆಂಡ್ ತಂಡ: ಝಾಕ್ ಕ್ರಾಲಿ, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್(ನಾಯಕ), ಜಾನಿ ಬೈರ್‌ಸ್ಟೋವ್(ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜೋಶ್ ಟಂಗ್, ಜೇಮ್ಸ್ ಆಂಡರ್ಸನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications