Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ashes 2023: ENG vs AUS 3ನೇ ಟೆಸ್ಟ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ, ಲೈವ್ ಸ್ಕೋರ್

ಗುರುವಾರ, ಜುಲೈ 6ರಿಂದ ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಐದು ಪಂದ್ಯಗಳ 2023ರ ಆಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯ ಆರಂಭವಾಗಿದೆ.

ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಪ್ರವಾಸಿ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಈಗಾಗಲೇ ಬರ್ಮಿಂಗ್‌ಹ್ಯಾಮ್ ಮತ್ತು ಲಾರ್ಡ್ಸ್‌ನಲ್ಲಿ ನಡೆದ 2023ರ ಆಶಸ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

Ashes 2023


ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಸರಣಿಯಲ್ಲಿ ಸತತ ಎರಡನೇ ಸೋಲನ್ನು ಎದುರಿಸಬೇಕಾಯಿತು. ಭಾನುವಾರ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ರೋಚಕ ಪಂದ್ಯದಲ್ಲಿ 43 ರನ್‌ಗಳಿಂದ ಸೋತಿದ್ದರಿಂದ ನಾಯಕ ಬೆನ್ ಸ್ಟೋಕ್ಸ್ ಅವರ 155 ರನ್‌ಗಳ ಹೊರತಾಗಿಯೂ ಗೆಲುವು ಸಾಧಿಸಲು ಇಂಗ್ಲೆಂಡ್‌ ತಂಡಕ್ಕೆ ಸಾಧ್ಯವಾಗಲಿಲ್ಲ.

ಇಂಗ್ಲೆಂಡ್ ತಂಡ ಒಂದು ದಿನದ ಮುಂಚೆಯೇ ತಮ್ಮ ಆಡುವ 11ರ ಬಳಗವನ್ನು ಪ್ರಕಟಿಸಿತ್ತು. ಮಾರ್ಕ್ ವುಡ್, ಕ್ರಿಸ್ ವೋಕ್ಸ್ ಮತ್ತು ಮೊಯಿನ್ ಅಲಿ ಅವರು ಜೇಮ್ಸ್ ಆಂಡರ್ಸನ್, ಜೋಶ್ ಟಂಗ್ ಮತ್ತು ಒಲ್ಲಿ ಪೋಪ್ ಬದಲಿಯಾಗಿ ಸ್ಥಾನ ಪಡೆದಿದ್ದಾರೆ. ಇನ್ನು ಆಸ್ಟ್ರೇಲಿಯಾ ತಂಡದ ಪರ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 100ನೇ ಪಂದ್ಯ ಆಡುತ್ತಿದ್ದಾರೆ.

ಆಶಸ್ 3ನೇ ಟೆಸ್ಟ್ ಪಂದ್ಯ; ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ಆಡುವ 11ರ ಬಳಗ

ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಝಾಕ್ ಕ್ರಾಲಿ, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಆಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಮಾರ್ಕ್ ವುಡ್.

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಟಾಡ್ ಮರ್ಫಿ.

Story first published: Thursday, July 6, 2023, 15:57 [IST]
Other articles published on Jul 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+