Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ashes 2023: ಇಂಗ್ಲೆಂಡ್ vs ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಬುಧವಾರ, ಜುಲೈ 19ರಂದು ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿರುವ 2023ರ ಆಶಸ್ ಟೆಸ್ಟ್‌ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

Ashes 2023

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಆಶಸ್ ಟೆಸ್ಟ್‌ ಪಂದ್ಯದಲ್ಲಿ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಸಮಬಲಗೊಳಿಸಲು ಇಂಗ್ಲೆಂಡ್ ತಂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಅನುಭವಿ ಜೇಮ್ಸ್ ಆಂಡರ್ಸನ್ ಮರಳಿದ್ದಾರೆ.

ಹೆಡಿಂಗ್ಲಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸೋಲುವ ಮೊದಲು ಎಡ್ಜ್‌ಬಾಸ್ಟನ್ ಮತ್ತು ಲಾರ್ಡ್ಸ್‌ನಲ್ಲಿ ನಡೆದ ಆರಂಭಿಕ ಎರಡು ಟೆಸ್ಟ್‌ಗಳನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಆಶಸ್ ಸರಣಿ 4ನೇ ಟೆಸ್ಟ್‌ ಪಂದ್ಯ: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಆಡುವ 11ರ ಬಳಗ

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಜೋಶ್ ಹ್ಯಾಝಲ್‌ವುಡ್.

ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಮೊಯಿನ್ ಅಲಿ, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೊನಾಥನ್ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.

Story first published: Wednesday, July 19, 2023, 15:46 [IST]
Other articles published on Jul 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+