Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ashes 2023: ಕಡೆಗೂ ಆಸಿಸ್ ಪಡೆಗೆ ಸೋಲುಣಿಸಿದ ಇಂಗ್ಲೆಂಡ್: ರೋಚಕ ಪಂದ್ಯದಲ್ಲಿ 3 ವಿಕೆಟ್‌ಗಳ ಗೆಲುವು

ತವರಿನಲ್ಲಿ ನಡೆಯುತ್ತಿರುವ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ತಂಡ ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸಿ ಮೊದಲ ವಿಜಯ ಸಾಧಿಸಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಕಠಿಣ ಕದನದಲ್ಲಿ ರೋಚಕ ಹೋರಾಟ ನಡೆಸಿದ ಇಂಗ್ಲೆಂಡ್ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ನಾಲ್ಕನೇ ದಿನದಾಟದಲ್ಲಿಯೂ ಸಾಕಷ್ಟು ಏರಿಳಿತಗಳು ಕಂಡಿದ್ದು ಅಂತಿಮವಾಗಿ ಆತಿಥೇಯ ಇಂಗ್ಲೆಂಡ್ ಗೆಲುವು ಸಾಧಿಸಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ಗೆಲುವಿಗೆ 251 ರನ್‌ಗಳ ಅಗತ್ಯವಿತ್ತು. ಮೊದಲ ವಿಕೆಟ್‌ಗೆ 42 ರನ್‌ಗಳ ಜೊತೆಯಾಟವಾಡುವ ಮೂಲಕ ಇಂಗ್ಲೆಂಡ್ ಉತ್ತಮ ಪ್ರದರ್ಶನ ನೀಡುವ ಸುಳಿವು ನೀಡಿತ್ತು. ಆದರೆ ಬೆನ್ ಡಕೆಟ್ 23 ರನ್‌ಗಳಿಸಿ ಔಟಾದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಯೀನ್ ಅಲಿ 5 ರನ್‌ಗೆ ಔಟಾದರು. ನಂತರ ಜಾಕ್ ಕ್ರಾವ್ಲೆ 44 ರನ್‌ಗಳಿಸಿ ವಿಕೆಟ್ ಕಳೆದುಕೊಂಡಾಗ ತಂಡದ ಮೊತ್ತ 93ಕ್ಕೆ 3 ವಿಕೆಟ್. ನಂತರ ಜೋ ರೂಟ್ 21 ರನ್‌ಗಳಿಸಿ ಔಟಾದರು.

Ashes 2023: England won against Australia by 3 wickets in Headingley test

ಈ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ಗೆಲುವಿನ ಕನಸು ಕಮರದಂತೆ ಮಾಡಿದ್ದು ಹ್ಯಾರಿ ಬ್ರೂಕ್ ಇನ್ನಿಂಗ್ಸ್. ಇಂಗ್ಲೆಂಡ್ ತಂಡವನ್ನು ಗೆಲುವಿನ ಸನಿಹದವರೆಗೂ ಮುನ್ನಡೆಸಿದ ಬ್ರೂಕ್ 75 ರನ್‌ಗಳಿಸಿ ಮಿಂಚಿದರು. ಈ ಪ್ರದರ್ಶನದಿಂದಾಗಿ ಇಂಗ್ಲೆಂಡ್ ಗೆಲುವಿನ ಸನಿಹಕ್ಕೆ ತಲುಪಿತ್ತು. ಈ ಸಂದರ್ಭದಲ್ಲಿ ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋವ್ ಅಗ್ಗಕ್ಕೆ ಔಟಾಗುವ ಮೂಲಕ ಆಸ್ಟ್ರೇಲಿಯಾ ಮತ್ತೆ ತಿರುಗಿ ಬೀಳುವ ವಿಶ್ವಾಸ ಮೂಡಿಸಿತು. ಆದರೆ ಕ್ರಿಸ್ ವೋಕ್ಸ್ ಆಸಿಸ್ ಬೌಲರ್‌ಗಳಿಗೆ ಅಡ್ಡಿಯಾದರು. ಕ್ರಿಸ್ ವೋಕ್ಸ್ ಹಾಗೂ ಮಾರ್ಕ್ ವುಡ್ ಬ್ರೂಕ್ ವಿಕೆಟ್ ಕಳೆದುಕೊಂಡ ಬಳಿಕ ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಆಶಸ್ ಸರಣಿಯ ಹಿನ್ನಡೆಯನ್ನು 1-2ಕ್ಕೆ ತಗ್ಗಿಸುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದೆ.

ಇನ್ನು ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಮಿಚೆಲ್ ಮಾರ್ಶ್ ಅವರ ಭರ್ಜರಿ ಶತಕದ ನೆರವಿನಿಂದಾಗಿ 262 ರನ್‌ಗಳನ್ನು ಗಳಿಸಿತ್ತು. ಮಾರ್ಶ್ ಮಾತ್ರವೇ ಈ ಇನ್ನಿಂಗ್ಸ್‌ನಲ್ಲಿ ಮಿಂಚಿದ್ದು ಉಳಿದ ಆಟಗಾರರು ಸಂಪೂರ್ಣ ವಿಫಲವಾಗಿದ್ದರು. ಆದರೆ ಮಿಚೆಲ್ ಮಾರ್ಶ್ ವಿಕೆಟ್ ಕಳೆದುಕೊಂಡ ಬಳಿಕ ಹಠಾತ್ ಕುಸಿತ ಕಂಡು ಆಸಿಸ್ ಪಡೆ ನಿರಾಸೆ ಅನುಭವಿಸಿತ್ತು.

ಇನ್ನು ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್‌ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡದ ಬ್ಯಾಟರ್‌ಗಳು ಕೂಡ ಉತ್ತಮ ಪ್ರದರ್ಶನ ನೀಡಲು ವಿಫಲವಾದರು, ನಾಯಕ ಬೆನ್ ಸ್ಟೋಕ್ಸ್ ಮಾತ್ರವೇ ಏಕಾಂಗಿ ಹೋರಾಟ ನೀಡಿದ್ದು 80 ರನ್‌ಗಳ ಕೊಡುಗೆ ನೀಡಿದ್ದರು. ಇದರ ಪರಿಣಾಮವಾಗಿ ಇಂಗ್ಲೆಂಡ್ ತಂಡ 237 ರನ್‌ಗಳನ್ನು ಗಳಿಸಿ 26 ರನ್‌ಗಳ ಹಿನ್ನಡೆ ಅನುಭವಿಸಿತು.

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್ (ನಾಯಕ), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಆಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್
ಬೆಂಚ್: ಜೋಶ್ ಟಂಗ್, ಜೇಮ್ಸ್ ಆಂಡರ್ಸನ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (WK), ಪ್ಯಾಟ್ ಕಮಿನ್ಸ್ (c), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್:
ಜೋಶ್ ಹ್ಯಾಜಲ್‌ವುಡ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್‌ಶಾ, ಜೋಶ್ ಇಂಗ್ಲಿಸ್, ಕ್ಯಾಮರೂನ್ ಗ್ರೀನ್

Story first published: Sunday, July 9, 2023, 21:09 [IST]
Other articles published on Jul 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+