For Quick Alerts
ALLOW NOTIFICATIONS  
For Daily Alerts
 

Ashes 2023: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ಹ್ಯಾರಿ ಬ್ರೂಕ್

ಆಶಸ್ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ರೋಚಕ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ ಗೆಲುವು ಸಾಧಿಸಿದ್ದು ಸರಣಿಯಲ್ಲಿ ಹಿಮ್ಮಡೆಯನ್ನು 1-2 ಅಂತರದಕ್ಕೆ ತಗ್ಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹೆಡಿಂಗ್ಲೆಯಲ್ಲಿ ನಡೆದ ಈ ಪಂದ್ಯ ಕೂಡ ಸಾಕಷ್ಟು ರೋಚಕತೆಯಿಂದ ಕೂಡಿದ್ದು ಕೊನೆಯ ಕ್ಷಣದವರೆಗೂ ಎರಡು ತಂಡಗಳಿಗೂ ಗೆಲುವಿನ ಅವಕಾಶವಿತ್ತು. ಆದರೆ ಯುವ ಆಟಗಾರ ಹ್ಯಾರಿ ಬ್ರೂಕ್ ಅವರ ಪ್ರದರ್ಶನ ಇಂಗ್ಲೆಂಡ್ ತಂಡಕ್ಕೆ ಈ ಸವಾಲನ್ನು ಸುಲಭವಾಗಿಸಿದೆ.

ಈ ಪಂದ್ಯದಲ್ಲಿ ಹ್ಯಾರಿ ಬ್ರೂಕ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 1000 ರನ್‌ಗಳನ್ನು ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಹ್ಯಾರಿ ಬ್ರೂಕ್ ಪಾತ್ರವಾಗಿದ್ದಾರೆ. ಚೆಂಟುಗಳನ್ನು ಎದುರಿಸಿದ ಲೆಕ್ಕಾಚಾರದಲ್ಲಿ ಅತ್ಯಂತ ವೇಗವಾಗಿ ಈ ಸಾಧನೆಯನ್ನು ಹ್ಯಾರಿ ಬ್ರೂಕ್ ಮಾಡಿದ್ದು ಕೇವಲ 1058 ಎಸೆತಗಳಲ್ಲಿ ಈ ವಿಶೇಷ ದಾಖಲೆ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

Ashes 2023: Harry Brook special record in test cricket becomes fastest batter to 1000 runs in Test

ಆಕ್ರಮಣಕಾರಿಯಾಗಿ ಆಡುವ ಹ್ಯಾರಿ ಬ್ರೂಕ್ ಟೆಸ್ಟ್ ಮಾದರಿಯಲ್ಲಿಯೂ ವೇಗವಾಗಿ ರನ್‌ಗಳಿಸುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ. ಅಲ್ಲದೆ ಸ್ಥಿರವಾಗಿಯೂ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು ಸದ್ಯ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಇಂಗ್ಲೆಂಡ್‌ನ ನೂತನ ಬ್ಯಾಸ್‌ಬಾಲ್ ಮಾದರಿಯ ಕ್ರಿಕೆಟ್‌ಗೆ ಹೇಳಿ ಮಾಡಿಸಿದ ಆಟಗಾರನಾಗಿದ್ದಾರೆ ಬ್ರೂಕ್.

ಇನ್ನು ಪಂದ್ಯಗಳ ಲೆಕ್ಕಾಚಾರದಲ್ಲಿ ಹ್ಯಾರಿ ಬ್ರೂಕ್ 10 ಟೆಸ್ಟ್ ಪಂದ್ಯಗಳ 16ನೇ ಇನ್ನಿಂಗ್ಸ್‌ಲ್ಲಿ ಈ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ. ಹಾಗಾಗಿ ಪಂದ್ಯಗಳ ಲೆಕ್ಕದಲ್ಲಿ ಬ್ರೂಕ್ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಆಟಗಾರರ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದಾರೆ. ಪಂದ್ಯಗಳ ಲೆಕ್ಕದಲ್ಲಿ ಡಾನ್ ಬ್ರಾಡ್ಮನ್ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಕ್ರಿಕೆಟಿಗ ಎನಿಸಿಕೊಂಡಿದ್ದು ಕೇವಲ 7 ಪಂದ್ಯಗಳಲ್ಲಿ ಈ ಮೈಲಿಗಲ್ಲು ದಾಟಿ ದಾಖಲೆ ಹೊಂದಿದ್ದಾರೆ.

ಇನ್ನು ಲೀಡ್ಸ್ ಪಂದ್ಯದಲ್ಲಿ ಹ್ಯಾರಿ ಬ್ರೂಕ್ ಒತ್ತಡದ ಸಂದರ್ಭದಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ 251 ರನ್‌ಗಳ ಗುರಿ ಬೆನ್ನಟ್ಟುವ ಸಂದರ್ಭದಲ್ಲಿ ಅಗ್ರ ಕ್ರಮಾಂಕದ ಆಟಗಾರರು ಬೇಗನೆ ಔಟಾಗಿ ತಂಡ ಹಠಾತ್ ಕುಸಿತ ಅನುಭವಿಸಿತ್ತು. ಈ ಸರಣಿಯಲಿ ಜೀವಂತ ಉಳಿದಯಬೇಕಾದರೆ ಈ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸುವುದು ಇಂಗ್ಲೆಂಡ್ ತಂಡಕ್ಕೆ ಅನಿವಾರ್ಯವೂ ಆಗಿತ್ತು. ಇಂಥಾ ಸಂದರ್ಭದಲ್ಲಿ ಕಣಕ್ಕಿಳಿದ ಬ್ರೂಕ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ನಾಯಕ ಬೆನ್ ಸ್ಟೋಕ್ಸ್ ಬೈರ್‌ಸ್ಟೋವ್ ಸೇರಿದಂತೆ ಉಳಿದ ಅಗ್ರ ಕ್ರಮಾಂಕದ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲು ವಿಫಲವಾಗಿದ್ದರು.

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್ (ನಾಯಕ), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಆಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್
ಬೆಂಚ್: ಜೋಶ್ ಟಂಗ್, ಜೇಮ್ಸ್ ಆಂಡರ್ಸನ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (WK), ಪ್ಯಾಟ್ ಕಮಿನ್ಸ್ (c), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್:
ಜೋಶ್ ಹ್ಯಾಜಲ್‌ವುಡ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್‌ಶಾ, ಜೋಶ್ ಇಂಗ್ಲಿಸ್, ಕ್ಯಾಮರೂನ್ ಗ್ರೀನ್

Story first published: Monday, July 10, 2023, 10:30 [IST]
Other articles published on Jul 10, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+