Ashes 2023: ಜೋ ರೂಟ್ ಹೀಗೆ ಔಟಾಗಿದ್ದು ವೃತ್ತಿಜೀವನದಲ್ಲಿ ಇದೇ ಮೊದಲು!!
ಆಶಸ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ರೋಚಕವಾಗಿ ಕದನ ನಡೆಸುತ್ತಿವೆ. ಆತಿಥೆಯ ಇಂಗ್ಲೆಂಡ್ ತನ್ನ 'ಬಾಸ್‌ಬಾಲ್' ಶೈಲಿಯ ಆಟದ ಮೂಲಕ ಆಕ್ರಮಣಕಾರಿ ಪ್ರದರ್ಶನ ನೀಡಿದರೆ ಆಸ್ಟ್ರೇಲಿಯಾ ಸಾಂಪ್ರದಾಯಿಕ ಶೈಲಿಯಲ್ಲಿಯಲ್ಲಿ ಪ್ರತಿರೋಧವೊಡ್ಡುತ್ತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ತಂಡಗಳು ಪೈಪೋಟಿಯ ಹೋರಾಟ ನಡೆಸಿದ ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಜಿದ್ದಾಜಿದ್ದಿನ ಕದನಕ್ಕೆ ಇಳಿದಿವೆ.
ಇನ್ನು ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಆರಂಭಿಕ ಇಬ್ಬರು ಆಟಗಾರರ ವಿಕೆಟನ್ನು ಶೀಘ್ರದಲ್ಲಿ ಕಳೆದುಕೊಂಡ ಬಳಿಕ ಅನುಭವಿ ಆಟಗಾರ ಜೋ ರೂಟ್ ಬ್ಯಾಟಿಂಗ್‌ಗೆ ಇಳಿದರು. ಈ ಸಂದರ್ಭದಲ್ಲಿ ಅವರು ಒಲ್ಲೀ ಪೋಪ್ ಹಾಗೂ ಹ್ಯಾರಿ ಬ್ರೂಕ್ ಜೊತೆಗೆ ಉತ್ತಮ ಜೊತೆಯಾಟದಲ್ಲಿ ಭಾಗಿಯಾದರು. ತಮ್ಮ ಸ್ವಾಭಾವಿಕ ಶೈಲಿಯ ಆಟಕ್ಕಿಂತಲೂ ಭಿನ್ನವಾಗಿ ಆಕ್ರಮಣಕಾರಿಯಾಗಿ ಆಡಿದ ರೂಟ್ ಈ ಪಂದ್ಯದಲ್ಲಿ ಬಹಳ ಅಪಾಯಕಾರಿಯಾಗಿ ಕಾಣಿಸಿದ್ದರು.

ಮೊದಲ ಇನ್ನಿಂಗ್ಸ್‌ನಲ್ಲಿ ಅಜೇಯ ಅರ್ಧಶತಕ ಸಿಡಿಸಿದ್ದ ಜೋ ರೂಟ್ ಎರಡನೇ ಇನ್ನಿಂಗ್ಸ್‌ನಲ್ಲಿ ತಮ್ಮ ಆ ಆಟವನ್ನು ಹೆಚ್ಚಿನ ತೀವ್ರತೆಯಲ್ಲಿ ಮುಂದುವರಿಸಲು ನಿರ್ಧರಿಸಿದ್ದು ಸ್ಪಷ್ಟವಾಗಿತ್ತು. ಆದರೆ 44 ರನ್‌ಗಳಿಸಿದ್ದಾಗ ಜೋ ರೂಟ್ ನಥನ್ ಲಿಯಾನ್ ಎಸೆತದಲ್ಲಿ ಮುನ್ನುಗ್ಗಿ ಬಾರಿಸಲು ಹೋಗಿ ಸಂಪ್‌ಔಟ್ ಆಗಿದ್ದಾರೆ. ಈ ಸಂದರ್ಭದಲ್ಲಿ 55 ಎಸೆತಗಳನ್ನು ಎದುರಿಸಿದ್ದ ಅವರು ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿ 83.64ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದರು.
ಇದು ಜೋ ರೂಟ್ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಸ್ಟಂಪ್ ಮೂಲಕ ವಿಕೆಟ್ ಕಳೆದುಕೊಂಡಂತಾಗಿದೆ. ಈ ಮೂಲಕ ಅತಿ ಹೆಚ್ಚು ಎಸೆತಗಳನ್ನು ಎದುರಿಸಿದ ಬಳಿಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಟಂಒ್ ಔಟಾದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ ಜೋ ರೂಟ್. ಮೊದಲ ಸ್ಥಾನದಲ್ಲಿ ವೆಸ್ಟ್ ಇಂಡಿಸ್‌ನ ಮಾಜಿ ಕ್ರಿಕೆಟಿಗ ಚಂದರ್‌ಪಾಲ್ ಇದ್ದು ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಸ್ಟಂಪ್ ಔಟ್ ಆಗುವಾಗ 11,414 ಎಸೆತಗಳನ್ನು ಎದುರಿಸಿದ್ದರು. ಜೋ ರೂಟ್ 11,168 ಎಸೆತಗಳನ್ನು ಎದುರಿಸಿದ ಬಳಿಕ ಸ್ಟಂಪ್ ವಟ್ ಆಗಿದ್ದಾರೆ. ಮೂರನೇ ಸ್ಥಾನದಲ್ಲಿ ಗ್ರೇಮ್ ಸ್ಮಿತ್(8,800), ವಿರಾಟ್ ಕೊಹ್ಲಿ(8195) ಹಾಗೂ ನಂತರ ಸಚಿನ್ ತೆಂಡೂಲ್ಕರ್(7419) ಇದ್ದಾರೆ.
ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್
ಬೆಂಚ್: ಡೇನಿಯಲ್ ಲಾರೆನ್ಸ್, ಜೋಶ್ ಟಂಗ್, ಮ್ಯಾಥ್ಯೂ ಪಾಟ್ಸ್, ಮಾರ್ಕ್ ವುಡ್, ಕ್ರಿಸ್ ವೋಕ್ಸ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್ ಆಡುತ್ತಿದ್ದಾರೆ
ಬೆಂಚ್: ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಜೋಶ್ ಇಂಗ್ಲಿಸ್, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications