Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಎಡ್ಜ್‌ಬಾಸ್ಟನ್ ಗೆದ್ದವರು ಆಶಸ್ ಗೆಲ್ಲುತ್ತಾರೆ: ಭವಿಷ್ಯ ನುಡಿದ ಇಂಗ್ಲೆಂಡ್ ಮಾಜಿ ನಾಯಕ

ಆಶಸ್ ಸರಣಿಯ ಅಂತಿಮ ಪಂದ್ಯದ ಕೊನೆಯ ದಿನದಾಟದ ಆರಂಭಕ್ಕೆ ಮಳೆ ಅಡ್ಡಿಯಾಗಿದ್ದು ಪಂದ್ಯ ತಡವಾಗಿ ಆರಂಭವಾಯಿತು. ಆಸ್ಟ್ರೇಲಿಯಾ ತಂಡದ ಗೆಲುವಿಗೆ ಕೊನೆಯ ದಿನ 174 ರನ್‌ಗಳ ಅಗತ್ಯವಿದ್ದರೆ ಇಂಗ್ಲೆಂಡ್ ತಂಡ 7 ವಿಕೆಟ್‌ಗಳನ್ನು ಕಬಳಿಸಿ ಗೆಲುವು ಸಾಧಿಸಲು ಹಾತೊರೆಯುತ್ತಿದೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ನಾಯಕ ಮೈಕಲ್ ವಾನ್ ಭವಿಷ್ಯವೊಂದನ್ನು ನುಡಿದಿದ್ದು ಕುತೂಹಲ ಮೂಡಿಸಿದೆ.

"ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಆರಂಭಿಕ ಟೆಸ್ಟ್‌ನಲ್ಲಿ ಗೆಲುವು ಸಾಧಿಸಿದವರು ಆಶಸ್ ಗೆಲ್ಲುತ್ತಾರೆ ಎಂದು ಮೈಕೆಲ್ ವಾನ್ ಭವಿಷ್ಯ ನುಡಿದಿದ್ದಾರೆ. ಇನ್ನು ಈ ಪಂದ್ಯದಲ್ಲಿ ಸೋತವರು ಸರಣಿಯ ಕೊನೆಯ ನಾಲ್ಕು ಪಂದ್ಯಗಳಿಗೂ ಮುನ್ನ ನಮ್ಮ ರಣತಂತ್ರಗಳ ಬಗ್ಗೆ ಪರಾಮರ್ಶೆ ನಡೆಸಬೇಕಾಗುತ್ತದೆ" ಎಂದಿದ್ದಾರೆ ಮೈಕಲ್ ವಾನ್.

Ashes 2023: Michael Vaughan said Winner of Edgbaston Test will win the Ashes series

ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಸೋತರೆ ಮೊದಲ ಇನ್ನಿಂಗ್ಸ್‌ನಲ್ಲಿ ತಮ್ಮ ಬ್ಯಾಟಿಂಗ್ ಬಗ್ಗೆ ಮತ್ತು ಡಿಕ್ಲೇರ್ ಮಾಡುವ ಸಮಯದ ಬಗ್ಗೆ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತದೆ ಎಂದು ವಾನ್ ಎಚ್ಚರಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋಲು ಅನುಭವಿಸಿದರೆ ಪ್ಯಾಟ್ ಕಮ್ಮಿನ್ಸ್ ಅವರ ತಂತ್ರಗಳ ಬಗ್ಗೆ ಪ್ರಶ್ನೆಗಳು ಬರಲಿದೆ ಎಂದಿದ್ದಾರೆ.

"ಎಲ್ಲವೂ ಇಂದು ಸ್ಪಷ್ಟವಾಗುತ್ತದೆ. ಇದು ಈ ಆಶಸ್ ಸರಣಿಯನ್ನು ವ್ಯಾಖ್ಯಾನಿಸಲಿದೆ. ಇಂಗ್ಲೆಂಡ್ ಗೆಲುವು ಸಾಧಿಸಿದರೆ ಬೆನ್ ಸ್ಟೋಕ್ಸ್ ತೀವ್ರ ಆಕ್ರಮಣಕಾರಿ ಆಟದಲ್ಲಿ ಮುಂದುವರಿಯುತ್ತಾರೆ. ಇಂಗ್ಲೆಂಡ್ ಸೋತರೆ ಅವರು ತಮ್ಮ ನಿಲುವುಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಎದುರಿಸಬೇಕಾಗುತ್ತದೆ" ಎಂದಿದ್ದಾರೆ ಮೈಕಲ್ ವಾನ್.

ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್
ಬೆಂಚ್: ಡೇನಿಯಲ್ ಲಾರೆನ್ಸ್, ಜೋಶ್ ಟಂಗ್, ಮ್ಯಾಥ್ಯೂ ಪಾಟ್ಸ್, ಮಾರ್ಕ್ ವುಡ್, ಕ್ರಿಸ್ ವೋಕ್ಸ್

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಜೋಶ್ ಇಂಗ್ಲಿಸ್, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್

Story first published: Tuesday, June 20, 2023, 19:07 [IST]
Other articles published on Jun 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+