Ashes 2023: ಮಿಚೆಲ್ ಮಾರ್ಷ್ ಶತಕ, ಮಾರ್ಕ್ ವುಡ್‌ಗೆ 5 ವಿಕೆಟ್; ಸಾಧಾರಣ ಮೊತ್ತಕ್ಕೆ ಆಸ್ಟ್ರೇಲಿಯಾ ಆಲೌಟ್
ಗುರುವಾರ, ಜುಲೈ 6ರಿಂದ ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಐದು ಪಂದ್ಯಗಳ 2023ರ ಆಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯ ಆರಂಭವಾಗಿದೆ.
ಮೂರನೇ ಆಶಸ್ ಟೆಸ್ಟ್ ಪಂದ್ಯದ ಮೊದಲನೇ ದಿನದಂದು ಪ್ರವಾಸಿ ಆಸ್ಟ್ರೇಲಿಯಾ ತಂಡ 60.4 ಓವರ್‌ಗಳಲ್ಲಿ 263 ರನ್‌ಗಳಿಗೆ ಸರ್ವಪತನ ಕಂಡಿತು. ಆದರೆ ಆಸೀಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮಿಚೆಲ್ ಮಾರ್ಷ್ ಶತಕ ಬಾರಿಸಿದ ಮಿಂಚಿದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡದ ಪರ ಆರಂಭಿಕರಾದ ಡೇವಿಡ್ ವಾರ್ನರ್ 4 ರನ್ ಮತ್ತು ಉಸ್ಮಾನ್ ಖವಾಜಾ 13 ರನ್ ಗಳಿಸಿ ವಿಕೆಟ್ ಒಪ್ಪಸಿದರು. ಇದು ಆರಂಭದಲ್ಲಿ ಪ್ರವಾಸಿ ತಂಡವನ್ನು ಒತ್ತಡಕ್ಕೆ ಸಿಲುಕಿಸಿತು.

ನಂತರ ಬಂದ ಮಾರ್ನಸ್ ಲ್ಯಾಬುಸ್ಚಾಗ್ನೆ 21 ರನ್, ಕಳೆದ ಪಂದ್ಯದ ಶತಕವೀರ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ 100ನೇ ಪಂದ್ಯವಾಡುತ್ತಿರುವ ಸ್ಟೀವನ್ ಸ್ಮೀತ್ 22 ರನ್ ಗಳಿಸಿ ನಿರಾಶೆ ಮೂಡಿಸಿದರು.
ಟ್ರಾವಿಸ್ ಹೆಡ್ 39 ರನ್ ಗಳಿಸಿದರೆ, ಮಿಚೆಲ್ ಮಾರ್ಷ್ 118 ಎಸೆತಗಳಲ್ಲಿ 17 ಬೌಂಡರಿ ಮತ್ತು 4 ಸಿಕ್ಸರ್ ಸಮೇತ 118 ರನ್ ಬಾರಿಸಿದರು. ಬಳಿಕ ಅಲೆಕ್ಸ್ ಕ್ಯಾರಿ 8 ರನ್, ಮಿಚೆಲ್ ಸ್ಟಾರ್ಕ್ 2 ರನ್, ಪ್ಯಾಟ್ ಕಮ್ಮಿನ್ಸ್ ಸೊನ್ನೆ ಸುತ್ತಿದರೆ, ಟಾಡ್ ಮರ್ಫಿ 13 ರನ್ ಗಳಿಸಿದರು.
ಆತಿಥೇಯ ಇಂಗ್ಲೆಂಡ್ ತಂಡದ ಪರ ಬೌಲಿಂಗ್‌ನಲ್ಲಿ ಮಾರ್ಕ್ ವುಡ್ 11.4 ಓವರ್‌ಗಳಲ್ಲಿ 34 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಕ್ರಿಸ್ ವೋಕ್ಸ್ 17 ಓವರ್‌ಗಳಲ್ಲಿ 73 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಸ್ಟುವರ್ಟ್ ಬ್ರಾಡ್ 11.4 ಓವರ್‌ಗಳಲ್ಲಿ 58 ರನ್ ನೀಡಿ 2 ವಿಕೆಟ್ ಪಡೆದರು.
ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡ ಆರಂಭಿಕ ಆಘಾತ ಎದುರಿಸಿದೆ. ಬೆನ್ ಡಕೆಟ್ 2 ರನ್ ಮತ್ತು ಹ್ಯಾರಿ ಬ್ರೂಕ್ 3 ರನ್ ಗಳಿಸಿ ಪೆವಿಲಿಯನ್ ಸೇರಿದರೆ, ಜಾಕ್ ಕ್ರಾಲಿ 33 ರನ್ ಗಳಿಸಿ ಔಟಾದರು. ಜೋ ರೂಟ್ 19 ರನ್ ಮತ್ತು ಜಾನಿ ಬೈರ್‌ಸ್ಟೋವ್ 1 ರನ್ ಗಳಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಸದ್ಯ ಇಂಗ್ಲೆಂಡ್ ತಂಡ 19 ಓವರ್‌ಗಳಲ್ಲಿ 68 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದೆ. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಎದುರಾಳಿಯ 2 ವಿಕೆಟ್ ಪಡೆದಿದ್ದರೆ, ಮಿಚೆಲ್ ಮಾರ್ಷ್ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications