ಆಶಸ್ 2023: ಈ ಬಾರಿ ಆತ ಹಿಂದಿನಂತಿರುವುದಿಲ್ಲ: ಸ್ಟಾರ್ ಆಟಗಾರನ ಬಗ್ಗೆ ಆಸಿಸ್ ನಾಯಕನ ಭರವಸೆಯ ಮಾತು
ಬಹು ನಿರೀಕ್ಷಿತ ಆಶಸ್ ಸರಣಿಯ ಜೂನ್ 16 ಶುಕ್ರವಾರದಿಂದ ಆರಂಭವಾಗಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಬಗ್ಗೆ ಭರವಸೆಯ ಮಾತುಗಳನ್ನಾಡಿದ್ದಾರೆ. ಈ ಬಾರಿಯ ಆಶಸ್ ಸರಣಿಯಲ್ಲಿ ಡೇವಿಡ್ ವಾರ್ನರ್ ಅವರನ್ನು ಬೇರೆಯದ್ದೇ ರೂಪದಲ್ಲಿ ನೀಡಲಿದ್ದೀರಿ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದಾರೆ ಪ್ಯಾಟ್ ಕಮ್ಮಿನ್ಸ್.
ಡೇವಿಡ್ ವಾರ್ನರ್ ಇತ್ತೀಚೆಗೆ ಟೆಸ್ಟ್ ಮಾದರಿಯಲ್ಲಿ ಅತ್ಯಂತ ಕಠಿಣ ಫಾರ್ಮ್‌ನಲ್ಲಿದ್ದಾರೆ. ಕಳೆದ 17 ಇನ್ನಿಂಗ್ಸ್‌ನಲ್ಲಿ ವಾರ್ನರ್ ಕೇವಲ ಒಂದು ಅರ್ಧ ಶತಕವನ್ನು ಮಾತ್ರವೇ ಬಾರಿಸಿದ್ದಾರೆ. ಅಲ್ಲದೆ 2019ರಲ್ಲಿ ಆಶಸ್ ಸರಣಿಗಾಗಿ ಆಸ್ಟ್ರೇಲಿಯಾ ಇಂಗ್ಲೆಂಡ್‌ಗೆ ಪ್ರವಾಸ ಕೈಗೊಂಡಿದ್ದಾಗಲೂ ಕಳಪೆ ಪ್ರದರ್ಶನ ನೀಡಿದ್ದರು. ವಾರ್ನರ್ ಅವರನ್ನು ಬ್ರಾಡ್ ಸಂಪೂರ್ಣವಾಗಿ ನಿಯಂತ್ರಿಸಿದ್ದರು. 2019ರ ಆ ಸರಣಿಯಲ್ಲಿ ಆರಂಭಿಕ ಆಟಗಾರ ವಾರ್ನರ್ 9.5 ಸರಾಸರಿಯಲ್ಲಿ ಕೇವಲ 95 ರನ್ ಗಳಿಸಿದ್ದರು. ಇಂಗ್ಲಿಷ್ ವೇಗಿ ಸ್ಟುವರ್ಟ್ ಬ್ರಾಡ್ ವಾರ್ನರ್ ಅವರನ್ನು ಏಳು ಬಾರಿ ಔಟ್ ಮಾಡಿದರು.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ವಾರ್ನರ್ ಮೊದಲ ಇನ್ನಿಂಗ್ಸ್‌ನಲ್ಲಿ 43 ರನ್ ಗಳಿಸಿ ಸ್ವಲ್ಪ ಫಾರ್ಮ್ ಪ್ರದರ್ಶಿಸಿದರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತೆ ನೀರಸ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇಂಗ್ಲೆಂಡ್ ನೆಲದಲ್ಲಿ ವಾರ್ನರ್ ತಮ್ಮ ಲಯವನ್ನು ಕಂಡುಕೊಳ್ಳಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ.
2023 ರ ಆಶಸ್ ಸರಣಿಯಲ್ಲಿ ನಾವು ವಾರ್ನರ್‌ನ ವಿಭಿನ್ನ ರೂಪವನ್ನು ನೋಡಲಿದ್ದೇವೆ ಎಂದು ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಹೇಳಿದ್ದಾರೆ. "ಯಾವುದೇ ಅಚ್ಚರಿಗಳು ಇರುತ್ತವೆ ಎಂದು ನಾನು ಭಾವಿಸುವುದಿಲ್ಲ" ಎಂದಿರುವ ಪ್ಯಾಟ್ ಕಮ್ಮಿನ್ಸ್ ವಾರ್ನರ್ ಬಗ್ಗೆ "ಅವರು ನಾವು ಸಾಕಷ್ಟು ಆಡಿರುವ ವ್ಯಕ್ತಿ, ಅವರು ಕಳೆದ ನಾಲ್ಕು ವರ್ಷಗಳಲ್ಲಿ ಬ್ರಾಡ್ ಬಗ್ಗೆ ಸಾಕಷ್ಟು ಯೋಚಿಸುತ್ತಿದ್ದೇನೆ ಮತ್ತು ವಾರ್ನರ್‌ಗೆ ಮತ್ತೊಂದು ಅವಕಾಶ ಸಿಕ್ಕರೆ ಆತ ಬ್ರಾಡ್ ವಿರುದ್ಧ ಹೇಗೆ ಆಡಲಿದ್ದಾರೆ ಎಂದು ನಾನು ಖಚಿತವಾಗಿ ಭಾವಿಸುತ್ತೇನೆ." ಎಂದಿದ್ದಾರೆ.
"ಇದು ಕಳೆದ ಬಾರಿ ಡೇವಿ(ಡೇವಿಡ್ ವಾರ್ನರ್) ಅಂದುಕೊಂಡಂತೆ ಆಗಿರಲಿಲ್ಲ. ಆದರೆ ಈ ಬಾರಿ ನಾವು ಬೇರೆಯದ್ದೇ ಆದ ಡೇವಿಯನ್ನು ನೋಡುತ್ತೇವೆ ಎಂದು ನಾನು ಭಾವಿಸುತ್ತೇನೆ" ಎಂದು ಆಸಿಸ್ ಆರಂಬಿಕ ಆಟಗಾರನ ಬಗ್ಗೆ ಪ್ಯಾಟ್ ಕಮ್ಮಿನ್ಸ್ ಭರವಸೆಯ ಮಾತುಗಳನ್ನಾಡಿದ್ದಾರೆ.
ಇನ್ನು ಆಶಸ್ ಸರಣಿಯ ಮೊದಲ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಎರಡು ದಿನಗಳ ಮುನ್ನವೇ ಆಡುವ 11ರ ಬಳಗವನ್ನು ಇಂಗ್ಲೆಂಡ್ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ಸ್ಟುವರ್ಟ್ ಬ್ರಾಡ್ ಹಾಗೂ ಜೇಮ್ಸ್ ಆಂಡರ್ಸನ್ ಇಬ್ಬರು ಕೂಡ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಟೆಸ್ಟ್ ಮಾದರಿಯಲ್ಲಿ ನಿವೃತ್ತಿಯಿಂದ ವಾಪಾಸಾಗಿರುವ ಮೊಯೀನ್ ಅಲಿ ಕೂಡ ಆಡುವ ಬಳಗದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.
ಆಸ್ಟ್ರೇಲಿಯಾ ಸ್ಕ್ವಾಡ್: ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್, ಟಾಡ್ ಮರ್ಫಿ, ಜೋಶ್ ಇಂಗ್ಲಿಸ್, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್
ಇಂಗ್ಲೆಂಡ್ ಆಡುವ ಬಳಗ: ಬೆನ್ ಡಕೆಟ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೊನಾಥನ್ ಬೈರ್‌ಸ್ಟೋವ್, ಮೊಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications