For Quick Alerts
ALLOW NOTIFICATIONS  
For Daily Alerts
 

Ashes 2023: ಆಶಸ್ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದ ನಾಥನ್ ಲಿಯಾನ್; ಆಸೀಸ್‌ಗೆ ಹಿನ್ನಡೆ

2023ರ ಆಶಸ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡವು ಆತಿಥೇಯ ಇಂಗ್ಲೆಂಡ್ ತಂಡವನ್ನು ಸೋಲಿಸಿ, 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಇದೇ ವೇಳೆ ಆಸ್ಟ್ರೇಲಿಯಾ ತಂಡದ ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ಅವರು ಆಶಸ್ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಆದರೂ, ಆಸ್ಟ್ರೇಲಿಯಾ ತಂಡ ಯಾವುದೇ ಬದಲಿ ಆಟಗಾರನನ್ನು ಆಯ್ಕೆ ಮಾಡಿಲ್ಲ.

Ashes 2023: Setback For Australia Team; Nathan Lyon Ruled Out of Ashes Test Series

ಆದರೆ, ಆಫ್‌ಸ್ಪಿನ್ನರ್ ಟಾಡ್ ಮರ್ಫಿ ಅವರನ್ನು ಇಂಗ್ಲೆಂಡ್ ವಿರುದ್ಧ ಹೆಡಿಂಗ್ಲಿಯಲ್ಲಿ ಗುರುವಾರ, ಜೂನ್ 6ರಂದು ಆರಂಭವಾಗಲಿರುವ ಮೂರನೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡವು ಆಯ್ಕೆ ಮಾಡುವುದು ಖಚಿತವಾಗಿದೆ.

ಲಾರ್ಡ್ಸ್ ಮೈದಾನದಲ್ಲಿ ಆಸ್ಟ್ರೇಲಿಯಾ ತಂಡದ ಎರಡನೇ ಟೆಸ್ಟ್ ಪಂದ್ಯದ ಗೆಲುವಿನಲ್ಲಿ ಭಾಗಿಯಾಗಿದ್ದ ನಾಥನ್ ಲಿಯಾನ್, ಫೀಲ್ಡಿಂಗ್ ಮಾಡುವಾಗ ಅವರ ಹಿಮ್ಮಡಿ ನೋವಿಗೆ ಒಳಗಾದರು. ಪಂದ್ಯದ ಉಳಿದ ಭಾಗದಲ್ಲಿ ಬೌಲಿಂಗ್ ಮಾಡಲು ಅಸಾಧ್ಯವಾಯಿತು. ಆದರೂ. ನಾಥನ್ ಲಿಯಾನ್ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಪರ ಬ್ಯಾಟಿಂಗ್‌ ಮಾಡಲು ಮೈದಾನಕ್ಕಿಳಿದರು.

ಇನ್ನು ಲಾರ್ಡ್ಸ್ ಟೆಸ್ಟ್‌ ಪಂದ್ಯದ ಅಂತಿಮ ದಿನದಂದು ನಾಥನ್ ಲಿಯಾನ್ ಬದಲಿಗೆ ಫೀಲ್ಡಿಂಗ್ ಮಾಡಿದ ಮ್ಯಾಟ್ ರೆನ್‌ಶಾ ಅವರನ್ನು ಸಹ ತಂಡದಿಂದ ಬಿಡುಗಡೆ ಮಾಡಲಾಗಿದೆ. ಆದರೂ, ಇಂಗ್ಲೆಂಡ್‌ನಲ್ಲಿರುವ ಸ್ಟ್ಯಾಂಡ್‌ಬೈ ಆಟಗಾರರಾಗಿ ಉಳಿಯಲಿದ್ದಾರೆ. ಇದೀಗ ಆಸ್ಟ್ರೇಲಿಯಾ ತಂಡವನ್ನು 16 ಆಟಗಾರರಿಗೆ ಇಳಿಸಲಾಗಿದೆ.

Ashes 2023: Setback For Australia Team; Nathan Lyon Ruled Out of Ashes Test Series

ಆಸ್ಟ್ರೇಲಿಯಾದ ಆಫ್-ಸ್ಪಿನ್ನರ್ ನಾತನ್ ಲಿಯಾನ್ ಭಾನುವಾರ ತಂಡದ ವೈದ್ಯಕೀಯ ಸಿಬ್ಬಂದಿ ಭೇಟಿಯಾಗಿದ್ದರು. ಹಿಮ್ಮಡಿ ಗಾಯದಿಂದಾಗಿ ಆಶಸ್ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಲ್ಲಿ ಆಡುವುದು ಅಸಾಧ್ಯ ಎಂದು ಖಚಿತಪಡಿಸಿದರು.

ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಪಂದ್ಯವು ಪ್ರಸ್ತುತ ಆಶಸ್ ಟೆಸ್ಟ್‌ ಸರಣಿಯಲ್ಲಿ ನಾಥನ್ ಲಿಯಾನ್ ಅವರ ಕೊನೆಯ ಟೆಸ್ಟ್ ಪಂದ್ಯವಾಗಿದೆ. ಇದು ಅವರ ಸತತ 100ನೇ ಟೆಸ್ಟ್ ಪಂದ್ಯವಾಗಿದ್ದು, ಟೆಸ್ಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಆರನೇ ಆಟಗಾರ ಮತ್ತು ಮೊದಲ ಬೌಲರ್ ಎನಿಸಿದರು.

2011ರಲ್ಲಿ ಟೆಸ್ಟ್ ಪಾದಾರ್ಪಣೆ ಮಾಡಿದ ನಾಥನ್ ಲಿಯಾನ್ 2013ರ ಆಶಸ್ ಸರಣಿಯ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಗೆ ಹೊರಗುಳಿದ ನಂತರ, ಅವರು ಆಸ್ಟ್ರೇಲಿಯಾ ತಂಡಕ್ಕಾಗಿ ನಾಥನ್ ಲಿಯಾನ್ ಎಂದಿಗೂ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಂಡಿಲ್ಲ.

ಉಳಿದ ಪಂದ್ಯಗಳಲ್ಲಿ ನಾಥನ್ ಲಿಯಾನ್ ಅನುಪಸ್ಥಿತಿಯು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ. ಏಕೆಂದರೆ ಲಿಯಾನ್ ಅವರು ತಂಡದ ಅತ್ಯಂತ ಅನುಭವಿ ಮತ್ತು ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾಗಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ 495 ವಿಕೆಟ್‌ಗಳೊಂದಿಗೆ ಆಸ್ಟ್ರೇಲಿಯಾದ ಎರಡನೇ ಪ್ರಮುಖ ವಿಕೆಟ್ ಟೇಕರ್ ಆಗಿದ್ದಾರೆ.

ಆಶಸ್ ಮೂರನೇ ಟೆಸ್ಟ್‌ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ:

ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚೆಲ್ ಮಾರ್ಷ್, ಸ್ಕಾಟ್ ಬೋಲ್ಯಾಂಡ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಜಿಮ್ಮಿ ಪೀರ್ಸನ್ (ವಿಕೆಟ್ ಕೀಪರ್), ಸ್ಟೀವ್ ಸ್ಮಿತ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್.

Story first published: Monday, July 3, 2023, 14:24 [IST]
Other articles published on Jul 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+