For Quick Alerts
ALLOW NOTIFICATIONS  
For Daily Alerts
 

3ನೇ ಟೆಸ್ಟ್‌ಗೆ ಇಂಗ್ಲೆಂಡ್‌ನಲ್ಲಿ ಬದಲಾವಣೆ: ಗೆಲುವಿನ ಒತ್ತಡದಲ್ಲಿ ಸ್ಟೋಕ್ಸ್‌ ಪಡೆ

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಣ ಆಶಸ್‌ ಟೆಸ್ಟ್‌ ಸರಣಿ ನಡೆಯುತ್ತಿದೆ. ಈಗಾಗಲೇ ನಡೆದಿರುವ ಎರಡೂ ಟೆಸ್ಟ್‌ ಪಂದ್ಯಗಳನ್ನು ಆತಿಥೇಯ ಆಸ್ಟ್ರೇಲಿಯಾ ಗೆದ್ದು ಬೀಗಿದೆ. ಮುಂದಿನ ಮೂರು ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿ ಪುಟಿದೇಳುವ ಕನಸು, ಇಂಗ್ಲೆಂಡ್ ತಂಡದ್ದಾಗಿದೆ. ಹೀಗಾಗಿ ಮೂರನೇ ಟೆಸ್ಟ್‌ ಪಂದ್ಯಕ್ಕಾಗಿ ಬೆನ್ ಸ್ಟೋಕ್ಸ್ ತಂಡ ಕೊಂಚ ಬದಲಾವಣೆ ಮಾಡಿಕೊಂಡಿದೆ. ಟೆಸ್ಟ್‌ ಸರಣಿ ಆರಂಭಕ್ಕೆ ಇನ್ನು ಎರಡು ದಿನ ಮುಂಚಿತವಾಗಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಿದೆ.

ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ ಪಂದ್ಯದಿಂದ ಗಸ್ ಅಟ್ಕಿನ್ಸನ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಮಾತ್ರ ಪಡೆದಿದ್ದರಿಂದ, ಇವರು ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಜೋಶ್‌ ಟಾಂಗ್‌ ಇವರ ಸ್ಥಾನವನ್ನು ತುಂಬಿದ್ದಾರೆ. ಜೋಶ್‌ ಟಾಂಗ್‌ 6 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು 31 ವಿಕೆಟ್‌ ಪಡೆದಿದ್ದಾರೆ.

Ashes England makes one change for 3rd Test Stokes under immense pressure to win

ಇಂಗ್ಲೆಂಡ್ ತಂಡದ ಸ್ಟಾರ್‌ ಆರಂಭಿಕ ಆಟಗಾರರಾದ ಜ್ಯಾಕ್ ಕ್ರೌಲಿ ಮತ್ತು ಬೆನ್ ಡಕೆಟ್ ಬಿಗ್‌ ಇನಿಂಗ್ಸ್ ಕಟ್ಟುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಜಯ ಸಾಧಿಸಲು ಸಾಧ್ಯ. ಜ್ಯಾಕ್ ಕ್ರೌಲಿ ಉತ್ತಮ ಆರಂಭವನ್ನು ನೀಡಿದರೂ ಸಹ, ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇವರ ಮೇಲೂ ಒತ್ತಡವಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಓಲಿ ಪೋಪ್‌ ಹಾಗೂ ಭರವಸೆಯ ಬ್ಯಾಟರ್‌ ಜೋ ರೂಟ್ ತಮ್ಮ ಸ್ಥಿರ ಪ್ರದರ್ಶನದಿಂದ ತಂಡಕ್ಕೆ ಆಧಾರವಾಗಬೇಕಿದೆ.

ಇಂಗ್ಲೆಂಡ್‌ ಮೇಲೆ ಒತ್ತಡ

ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಅವರ ಮೇಲೂ ಒತ್ತಡವಿದೆ. ಇವರು ತಮ್ಮ ಆಲ್‌ರೌಂಡರ್ ಆಟದಿಂದ ತಂಡಕ್ಕೆ ನೆರವಾಗಬೇಕಿದೆ. ಇವರು ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ. ಬೌಲರ್‌ಗಳು ಸಹ ಶಿಸ್ತು ಬದ್ಧ ದಾಳಿಯನ್ನು ಸಂಘಟಿಸಿ ತಂಡದ ಜಯದಲ್ಲಿ ಮಿಂಚುವ ಅನಿವಾರ್ಯತೆ ಇದೆ.

Ashes England makes one change for 3rd Test Stokes under immense pressure to win

ಆಸ್ಟ್ರೇಲಿಯಾ ಮೊದಲ ಪಂದ್ಯವನ್ನು 8 ವಿಕೆಟ್‌ಗಳಿಂದ, ಎರಡನೇ ಟೆಸ್ಟ್ ಅನ್ನು 8 ವಿಕೆಟ್‌ಗಳಿಂದ ಗೆದ್ದು ಬೀಗಿತ್ತು. ಇಂಗ್ಲೆಂಡ್‌ ಸರಣಿಯನ್ನು ಜೀವಂತವಾಗಿರಸಲು ಮೂರನೇ ಪಂದ್ಯದಲ್ಲಿ ಜಯ ಸಾಧಿಸುವುದು ಅನಿವಾರ್ಯವಾಗಿದೆ.

3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಜೋಶ್ ಟೊಂಗ್‌

Story first published: Monday, December 15, 2025, 16:20 [IST]
Other articles published on Dec 15, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+