ಆಶಸ್ ಸರಣಿ: ಅಂತಿಮ ಪಂದ್ಯವನ್ನೂ ಗೆದ್ದು ಬೀಗಿದ ಆಸ್ಟ್ರೇಲಿಯಾ: 4-0 ಅಂತರದಿಂದ ಸರಣಿ ವಶಕ್ಕೆ

ಐದು ಪಂದ್ಯಗಳ ಆಶಸ್ ಸರಣಿಯ ಅಂತಿಮ ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ತಂಡ ಅಮೋಘ ಆಟವನ್ನು ಪ್ರದರ್ಶಿಸಿದ್ದು ಭರ್ಜರಿಯಾಗಿ ಗೆಲುವು ಸಾಧಿಸಿದೆ. ಹೀಗಾಗಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ ತಂಡ 4-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ಆಸ್ಟ್ರೇಲಿಯಾ ನೆಲದಲ್ಲಿ ಸರಣಿ ಗೆಲ್ಲುವ ಕನಸು ಹೊತ್ತು ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ತೀವ್ರ ಮುಖಭಂಗ ಅನುಭವಿಸಿದೆ.

ಹೋಬಾರ್ಟ್‌ನಲ್ಲಿ ಅಹರ್ನಿಶಿಯಾಗಿ ನಡೆದ ಈ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಎಲ್ಲಾ ವಿಭಾಗದಲ್ಲಿಯೂ ಸಂಪೂರ್ಣ ವೈಫಲ್ಯವನ್ನು ಅನುಭವಿಸಿದೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ನೀರಸ ಪ್ರದರ್ಶನ ನೀಡಿದ ಇಂಗ್ಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಪಂದ್ಯದ ರೋಚಕತೆಯನ್ನು ಹೆಚ್ಚಿಸಿತು. ಅದರಲ್ಲೂ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 63 ರನ್‌ಗಳಿಸುವಷ್ಟರಲ್ಲಿ 6 ವಿಕೆಟ್ ಪಡೆಯುವ ಮೂಲಕ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪಡೆ ಒಂದು ಹಂತದ ನಿಯಂತ್ರಣ ಸಾಧಿಸಲು ಯಶಸ್ವಿಯಾಗಿದೆ. ಆದರೆ ಬಳಿಕ ತನ್ನ ಹಿಡಿತ ಸಡಿಲಿತ್ತು ಇಂಗ್ಲೆಂಡ್.

ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಕ್ಕೆ ಈ ಅಂಶಗಳೇ ಕಾರಣ!ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಕ್ಕೆ ಈ ಅಂಶಗಳೇ ಕಾರಣ!

ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಇಂಗ್ಲೆಂಡ್ 155 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿತ್ತು. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ 115 ರನ್‌ಗಳ ಮುನ್ನಡೆಯನ್ನು ಆಸ್ಟ್ರೇಲಿಯಾ ಪಡೆದಿದ್ದ ಕಾರಣ 270 ರನ್‌ಗಳ ಸವಾಲಿನ ಗುರಿಯನ್ನು ಇಂಗ್ಲೆಂಡ್ ತಂಡಕ್ಕೆ ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನಟ್ಟಲು ಹೊರಟ ಇಂಗ್ಲೆಂಡ್ ಮತ್ತೊಮ್ಮೆ ಅತ್ಯಂತ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿ ಮುಖಭಂಗ ಅನುಭವಿಸಿದೆ.

ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್‌ಗಿಂತಲೂ ಕಳಪೆ ಪ್ರದರ್ಶನವನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ನೀಡಿತು. ಇಂಗ್ಲೆಂಡ್ ತಂಡದ ಆರಂಭಿಕ ಜೋಡಿ ಮೊದಲ ವಿಕೆಟ್‌ಗೆ 68 ರನ್‌ಗಳ ಉತ್ತಮ ಆರಂಭವನ್ನು ನೀಡಿದ ಹೊರತಾಗಿಯೂ ಕೇವಲ 124 ರನ್‌ಗಳಿಗೆ ಆಲೌಟ್ ಆಗಿದೆ. ಯಾವೊಬ್ಬ ಆಟಗಾರ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲು ಸಾಧ್ಯವಾಗಲೇ ಇಲ್ಲ. ಆರಂಭಿಕ ಆಟಗಾರ ಜಾಕ್ ಕ್ರಾವ್ಲೆ ಗಳಿಸಿದ 36 ರನ್ ಪಂದ್ಯದ ಇಂಗ್ಲೆಂಡ್‌ ಇನ್ನಿಂಗ್ಸ್‌ನ ಹೈಯೆಸ್ಟ್ ಸ್ಕೋರ್ ಎನಿಸಿದೆ.

ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2021-23: ದ. ಆಫ್ರಿಕಾ ವಿರುದ್ಧ ಸೋಲಿನ ಬಳಿಕ ಭಾರತದ ಪಾಯಿಂಟ್ಸ್ ಎಷ್ಟು?ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2021-23: ದ. ಆಫ್ರಿಕಾ ವಿರುದ್ಧ ಸೋಲಿನ ಬಳಿಕ ಭಾರತದ ಪಾಯಿಂಟ್ಸ್ ಎಷ್ಟು?

ಎರಡನೇ ಇನ್ನಿಂಗ್ಸ್‌ನಲ್ಲಿಯೂ ಆಸ್ಟ್ರೇಲಿಯಾದ ಬೌಲರ್‌ಗಳು ಸಾಂಘಿಕ ಪ್ರದರ್ಶನ ನೀಡಿ ಮಿಂಚಿದ್ದಾರೆ. ಪ್ಯಾಟ್ ಕಮ್ಮಿನ್ಸ್, ಸ್ಕಾಟ್ ಬೊಲಾಂಡ್ ಹಾಗೂ ಕ್ಯಾಮರೂನ್ ಗ್ರೀನ್ ತಲಾ ಮೂರು ವಿಕೆಟ್ ಕಿತ್ತು ಗಮನಸೆಳೆದರು. ಮಿಚೆಲ್ ಸ್ಟಾರ್ಕ್ ಒಂದು ವಿಕೆಟ್ ಪಡೆದರು.

ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಟಾಸ್ ಗೆದ್ದ ಲಾಭ ಪಡೆಯಲು ಇಂಗ್ಲೆಂಡ್ ತಂಡ ಯಶಸ್ವಿಯಾಗಲಿಲ್ಲ. ಕೇವಲ 188 ರನ್‌ಗಳಿಗೆ ಇಂಗ್ಲೆಂಡ್ ತಂಡ ಆಲೌಟ್ ಆಯಿತು. ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಸ್ಟಾರ್ಕ್ ದಾಳಿಗೆ ನಲುಗಿದ ಇಂಗ್ಲೆಂಡ್ ದೊಡ್ಡ ಮೊತ್ತ ಗಳಿಸಲು ವಿಫಲವಾಯಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಟ್ರೆವಿಸ್ ಹೆಡ್ ಸಿಡಿಸಿದ ಭರ್ಜರಿ ಶತಕದ ನೆರವಿನಿಂದ 303 ರನ್‌ಗಳಿಸಲು ಯಶಸ್ವಿಯಾಯಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಮಹತ್ವದ 115 ರನ್‌ಗಳ ಮುನ್ನಡೆಯನ್ನು ಪಡೆಯಿತು. ಈ ಮುನ್ನಡೆ ಆಸಿಸ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದೆ.

ಆತ ಇದ್ದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿತ್ತು ಎಂದ ನೆಟ್ಟಿಗರುಆತ ಇದ್ದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿತ್ತು ಎಂದ ನೆಟ್ಟಿಗರು

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್, ಝೈ ರಿಚರ್ಡ್ಸನ್, ಮಿಚೆಲ್ ಎಸ್.

Virat Kohli ನಿರ್ಧಾರದಿಂದ ಆಘಾತಗೊಂಡ Rohit Sharma ಹೇಳಿದ್ದೇನು? | Oneindia Kannada

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಝಾಕ್ ಕ್ರಾಲಿ, ಡೇವಿಡ್ ಮಲನ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲಿ ಪೋಪ್, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಆಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್‌
ಬೆಂಚ್: ಜಾನಿ ಬೈರ್‌ಸ್ಟೋ, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್, ಕ್ರೇಗ್ಟನ್ , ಡೇನಿಯಲ್ ಲಾರೆನ್ಸ್, ಹಸೀಬ್ ಹಮೀದ್, ಡೊಮಿನಿಕ್ ಬೆಸ್

For Quick Alerts
ALLOW NOTIFICATIONS
For Daily Alerts
Story first published: Sunday, January 16, 2022, 21:15 [IST]
Other articles published on Jan 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X