For Quick Alerts
ALLOW NOTIFICATIONS  
For Daily Alerts
 

ಆಶಸ್ ಸರಣಿ: ಟಾಸ್ ಗೆದ್ದ ಇಂಗ್ಲೆಂಡ್‌ಗೆ ಆರಂಭಿಕ ಆಘಾತ: Live ಸ್ಕೋರ್

Ashes series: England vs Australia, 1st match, 1st day, Live score, Brisbane

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಪ್ರತಿಷ್ಠಿತ ಆಶ್ ಟೆಸ್ಟ್ ಸರಣಿ ಆರಂಭವಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಬ್ರಿಸ್ಬೇನ್‌ನಲ್ಲಿರುವ ಗಾಬಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆಲುವಿಗಾಗಿ ಪ್ರಯತ್ನ ನಡೆಸುತ್ತಿದೆ.

ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ವೇಗಿ ಪ್ಯಾಟ್ ಕಮ್ಮಿನ್ಸ್‌ ಮುನ್ನಡೆಸುತ್ತಿದ್ದಾರೆ. ವಿವಾದದ ಬಳಿಕ ಈ ಹಿಂದೆ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದ ಟಿಮ್ ಪೈನ್ ನಾಯಕತ್ವದಿಂದ ಹಿಂದಕ್ಕೆ ಸರಿಯುವ ನಿರ್ಧಾರವನ್ನು ಆಶಸ್ ಸರಣಿಯ ಆರಂಭಕ್ಕೆ ಮುನ್ನ ತೆಗೆದುಕೊಂಡಿದ್ದರು. ಅದಾದ ಬಳಿಕ ಮಾನಸಿಕ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಪೈನ್ ಕ್ರಿಕೆಟ್‌ನಿಂದ ಕೆಲ ಕಾಲ ದೂರವುಳಿಯಲು ನಿರ್ಧರಿಸಿದ್ದಾರೆ, ಹೀಗಾಗಿ ಆಶಸ್ ಸರಣಿಯಿಂದ ಅವರು ಹೊರಗುಳಿದಿದ್ದಾರೆ.

ಇನ್ನು ಇಂಗ್ಲೆಂಡ್ ತಂಡದಲ್ಲಿ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಸುದೀರ್ಘ ವಿಶ್ರಾಂತಿಯ ನಂತರ ಮರಳಿ ಸೇರ್ಒಡೆಯಾಗಿದ್ದು ಆಶಸ್ ಸರಣಿಯ ಮೂಲಕ ಮತ್ತೆ ಕಣಕ್ಕಿಳಿದಿದ್ದಾರೆ. ಮಾನಸಿಕ ಆರೋಗ್ಯ ಹಾಗೂ ಬೆರಳಿನ ಗಾಯದ ಕಾರಣಕ್ಕಾಗಿ ಭಾರತದ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಅವರು ವಿಶ್ರಾಂತಿ ಪಡೆದುಕೊಂಡಿದ್ದರು.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆಮಾಡಿಕೊಂಡ ಇಂಗ್ಲೆಂಡ್ ನಾಯಕ ಜೋ ರೂಟ್ ನಂತರ ಅನುಭವಿಸಿದ್ದು ಸಂಪೂರ್ಣ ನಿರಾಸೆ ಮಾತ್ರ. ಈ ಪಂದ್ಯದ ಮೊದಲ ಎಸೆತದಲ್ಲಿಯೇ ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ರೋರಿ ಬರ್ನ್ಸ್ ಅವರನ್ನು ಬೌಲ್ಡ್ ಮಾಡುವ ಮೂಲಕ ಕೆಡವಿದರು. ಈ ಮೂಲಕ ಸರಣಿಯ ಮೊದಲ ಎಸೆತದಲ್ಲಿಯೇ ವಿಕೆಟ್ ಪಡೆದ ಅಪರೂಪದ ಸಾಧನೆ ಮಾಡಿದ್ದಾರೆ ಮಿಚೆಲ್ ಸ್ಟಾರ್ಕ್. ನಂತರ ಒಂದಾದ ಮೇಲೊಂದರಂತೆ ಆಸ್ಟ್ರೇಲಿಯಾ ತಂಡ ತನ್ನ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತ್ತು.

ಡೇವಿಡ್ ಮಲನ್ 6 ರನ್‌ಗಳಿಗೆ ಔಟಾದರೆ ನಾಯಕ ಜೋ ರೂಟ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಬೆನ್ ಸ್ಟೋಕ್ಸ್ ಕೂಡ 5 ರನ್‌ಗಳಿಗೆ ಆಟ ಮುಗಿಸಿದರು. ಅಲ್ಲಿಗೆ ಪ್ರವಾಸಿ ಇಂಗ್ಲೆಂಡ್ ಕೇವಲ 29 ರನ್‌ಗಳಿಗೆ ಇಂಗ್ಲೆಂಡ್ ತಂಡ 4 ವಿಕೆಟ್ ಕಳೆದುಕೊಂಡಿತ್ತು. ನಂತರ ಹಸೀಬ್ ಹಮೀದ್ 25 ರನ್‌ಗಳಿಸಿ ಔಟಾದರೆ ಜೋಸ್ ಬಟ್ಲರ್ 39 ರನ್‌ಗಳ ಕೊಡುಗೆ ನೀಡಿದರು. ಒಲ್ಲಿ ಪೋಪ್ 35 ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಕ್ರಿಸ್ ವೋಕ್ಸ್ 21 ರನ್‌ಗಳಿಗೆ ಔಟಾಗಿದ್ದಾರೆ. ಒಲ್ಲೀ ರಾಬಿನ್ಸನ್ ಶೂನ್ಯಕ್ಕೆ ಔಟಾದರೆ ಮಾರ್ಕ್ ವುಡ್ 8 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು.

ಗಾಬಾ ಕ್ರಿಕೆಟ್ ಮೈದಾನದಲ್ಲಿ ಗೆಲುವು ಇಂಗ್ಲೆಂಡ್ ತಂಡಕ್ಕೆ ಸುದೀರ್ಘ ಕಾಲದಿಂದ ಕನಸಾಗಿಯೇ ಉಳಿದುಕೊಂಡಿದೆ. ಗಾಬಾದಲ್ಲಿ ಇಂಗ್ಲೆಂಡ್ ತಂಡ ಕೊನೆಯ ಬಾರಿ ಟೆಸ್ಟ್ ಗೆಲುವು ಸಾಧಿಸಿದಾದ ಈಗ ಇಂಗ್ಲೆಂಡ್ ತಂಡದಲ್ಲಿರುವ ಆಟಗಾರ ಪೈಕಿ ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಮಾತ್ರವೇ ಜನಿಸಿದ್ದರು. ಸುದೀರ್ಘ ಕಾಲದಿಂದ ಗಾಬಾದಲ್ಲಿ ಆಸ್ಟ್ರೇಲಿಯಾ ತನ್ನ ಸಂಪೂರ್ಣ ಪಾರುಪತ್ಯವನ್ನು ಸಾಧಿಸುತ್ತಾ ಬಂದಿದೆ. 1986ರಲ್ಲಿ ಕೊನೆಯ ಬಾರಿಗೆ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಗಾಬಾದಲ್ಲಿ ಆಸ್ಟ್ರೇಲಿಯಾ ಸೋಲು ಕಂಡಿತ್ತು.

ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಗಾಬಾ ಅಂಗಳದಲ್ಲಿ ಸೋಲಿಸುವ ಮೂಲಕ ಈ ಮೈದಾನದಲ್ಲಿ ಕಳೆದ 32 ವರ್ಷಗಳಿಂದ ಅಜೇಯವಾಗಿ ಉಳಿದಿದ್ದ ಆಸ್ಟ್ರೇಲಿಯಾಗೆ ಸೋಲಿನ ರುಚಿ ತೋರಿಸಿತ್ತು. ಈ ಮೂಲಕ ಐತಿಹಾಸಿಕ ಗೆಲುವು ಸಾಧಿಸಿ ಟ್ರೋಫಿಯನ್ನು ಕೂಡ ವಶಕ್ಕೆ ಪಡೆದುಕೊಂಡಿತ್ತು. ಭಾರತದ ಈ ಗೆಲುವಿನಿಂದ ಸ್ಪೂರ್ತಿ ಪಡೆದುಕೊಂಡ ಇಂಗ್ಲೆಂಡ್ ತಾನು ಕೂಡ ಅದೇ ರೀರಿ ಪ್ರದರ್ಶನ ನೀಡುವ ಆತ್ಮ ವಿಶ್ವಾಸದೊಂದಿಗೆ ಕಣಕ್ಕಿಳಿದಿತ್ತು. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಅದರಲ್ಲಿ ವಿಫಲವಾಗಿದೆ

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್

ಬೆಂಚ್: ಉಸ್ಮಾನ್ ಖವಾಜಾ, ಮೈಕೆಲ್ ನೆಸರ್, ಝೈ ರಿಚರ್ಡ್ಸನ್, ಮಿಚೆಲ್ ಸ್ವೆಪ್ಸನ್

ಇಂಗ್ಲೆಂಡ್ ಆಡುವ ಬಳಗ: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲಿ ಪೋಪ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಆಲಿ ರಾಬಿನ್ಸನ್, ಮಾರ್ಕ್ ವುಡ್, ಜ್ಯಾಕ್ ಲೀಚ್
ಬೆಂಚ್: ಜಾನಿ ಬೈರ್ಸ್ಟೋವ್, ಕ್ರೇಗ್ ಓವರ್ಟನ್, ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಝಾಕ್ ಕ್ರಾಲಿ, ಸ್ಟುವರ್ಟ್ ಬ್ರಾಡ್

Story first published: Wednesday, December 8, 2021, 16:32 [IST]
Other articles published on Dec 8, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+