For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಇಂಗ್ಲೆಂಡ್, ಆಶಸ್ ಸರಣಿ: 2ನೇ ದಿನ, Live ಸ್ಕೋರ್

Ashes series: England vs Australia, 1st match, 2nd day, Live score, Brisbane
Ashes ಸರಣಿಯ ಮೊದಲನೇ ದಿನ ಮಳೆಯಲ್ಲಿ ಕೊಚ್ಚಿ ಹೋದ England | Oneindia Kannada

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಆಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಬ್ರಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಎರಡನೇ ದಿನದಾಟ ಆಟಂಭವಾಗಿದ್ದು ಒಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಬಿಗಿ ಹಿಡಿತವನ್ನು ಮುಂದುವರಿಸಿದೆ. ಎರಡನೇ ದಿನ ಆರಂಭಿಕ ಆಟಗಾರ ಮಾರ್ಕಸ್ ಹ್ಯಾರಿಸ್ ವಿಕೆಟ್ ಶೀಘ್ರವಾಗಿ ಕಳೆದುಕೊಂಡಿತಾದರೂ ಡೇವಿಡ್ ವಾರ್ನರ್ ಹಾಗೂ ಲ್ಯಾಬುಶೈನ್ ಅದ್ಭುತ ಜೊತೆಯಾಟ ನೀಡಿದ್ದಾರೆ.

ಮೊದಲ ದಿನದಾಟದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ನಂತರ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ ನಂತರ ಸಂಫೂರ್ಣವಾಗಿ ನಿರಾಸೆಯನ್ನೇ ಅನುಭವಿಸುತ್ತಾ ಬಂದಿದೆ. ಕೇವಲ 147 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್ ಆಗುವ ಮೂಲಕ ಗಾಬಾ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಭಾರೀ ವೈಫಲ್ಯವನ್ನು ಅನುಭವಿಸಿದೆ. ಈ ಪಂದ್ಯದ ಮೊದಲ ಎಸೆತದಲ್ಲಿಯೇ ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ರೋರಿ ಬರ್ನ್ಸ್ ಅವರನ್ನು ಬೌಲ್ಡ್ ಮಾಡುವ ಮೂಲಕ ಕೆಡವಿದರು. ಈ ಮೂಲಕ ಸರಣಿಯ ಮೊದಲ ಎಸೆತದಲ್ಲಿಯೇ ವಿಕೆಟ್ ಪಡೆದ ಅಪರೂಪದ ಸಾಧನೆ ಮಾಡಿದ್ದಾರೆ ಮಿಚೆಲ್ ಸ್ಟಾರ್ಕ್. ನಂತರ ಒಂದಾದ ಮೇಲೊಂದರಂತೆ ಆಸ್ಟ್ರೇಲಿಯಾ ತಂಡ ತನ್ನ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತ್ತು.

Live ಸ್ಕೋರ್‌ಪಟ್ಟಿ ಹೀಗಿದೆ

1
51143

ಈ ಮೂಲಕ ಇಂಗ್ಲೆಂಡ್ ತಂಡ 50.1 ಓವರ್‌ಗಳಲ್ಲಿ ತನ್ನ ಮೊದಲ ಇನ್ನಿಂಗ್ಸ್‌ನ ಆಟವನ್ನು ಮುಕ್ತಾಯಗೊಳಿಸಿದೆ. ಬ್ರಿಸ್ಬೇನ್‌ನ ಗಾಬಾದಲ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿ ರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಬೇಕು ಎಂಬ ಗುರಿಯೊಂದಿಗೆ ಕಣಕ್ಕಿಳಿದಿರುವ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ತೀವ್ರ ನಿರಾಸೆಯನ್ನು ಅನುಭವಿಸಿದೆ.

ಈ ಆಶಸ್ ಸರಣಿಯ ಮೂಲಕ ಆಸ್ಟ್ರೇಲಿಯಾ ತಂಡವನ್ನು ಟೆಸ್ಟ್ ಮಾದರಿಯಲ್ಲಿ ಮುನ್ನಡೆಸುವ ಜವಾಬ್ಧಾರಿಯನ್ನು ವೇಗಿ ಪ್ಯಾಟ್ ಕಮ್ಮಿನ್ಸ್ ವಹಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ನಾಯಕನಾಗಿ ಹಾಗೂ ಬೌಲರ್ ಆಗಿ ಕಮ್ಮಿನ್ಸ್ ಮಿಂಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಕನಾದ ಮೊದಲ ಪಂದ್ಯದಲ್ಲಿಯೇ ಐದು ವಿಕೆಟ್‌ಗಳ ಗೊಂಚಲು ಪಡೆದು ಪ್ಯಾಟ್ ಕಮ್ಮಿನ್ಸ್ ಎದುರಾಳಿ ತಂಡಕ್ಕೆ ಆಘಾತ ನೀಡಿದರು. ಈ ಮೂಲಕ ಆಸ್ಟ್ರೇಲಿಯಾ ತಂಡದ ಪರವಾಗಿ ಕಮ್ಮಿನ್ಸ್ ವಿಶೇಷ ಭರವಸೆ ಮೂಡಿಸಿದ್ದಾರೆ. ಆಸಿಸ್ ಪರವಾಗಿ ನಾಯಕ ಪ್ಯಾಟ್ ಕಮ್ಮಿನ್ಸ್ ಐದು ವಿಕೆಟ್ ಪಡೆದು ಮಿಂಚಿದರೆ ಮಿಚೆಲ್ ಸ್ಟಾರ್ಕ್ 2 ವಿಕೆಟ್ ಕಬಳಿಸಿದರು. ಜೋಶ್ ಹ್ಯಾಜಲ್‌ವುಡ್ ಕೂಡ ಎರಡು ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ. ಒಂದು ವಿಕೆಟ್ ಕ್ಯಾಮರೂನ್ ಗ್ರೀನ್ ಪಾಲಾಗಿದೆ.

ಇಂಗ್ಲೆಂಡ್ ತಂಡವನ್ನು 147 ರನ್‌ಗಳಿಗೆ ಆಲೌಟ್ ಮಾಡಿದ ಆಸ್ಟ್ರೇಲಿಯಾ ಇಂದು ಬ್ಯಾಟಿಂಗ್‌ಗೆ ಇಳಿಯಿತು. ಆದರೆ ಮೊದಲ ವಿಕೆಟ್‌ಅನ್ನು ಆಸ್ಟ್ರೇಲಿಯಾ 10 ರನ್ ಆಗುವಷ್ಟರಲ್ಲಿ ಕಳೆದುಕೊಂಡಿತ್ತು. ಈ ಮೂಲಕ ಇಂಗ್ಲೆಂಡ್ ಬೌಲರ್‌ಗಳು ಆಸಿಸ್ ದಾಂಡಿಗರಿಗೆ ಕಂಠಕವಾಗುವ ಲಕ್ಷಣ ತೋರಿಸಿದರು. ಆದರೆ ಡೇವಿಡ್ ವಾರ್ನರ್ ಹಾಗೂ ಮರ್ನಾಸ್ ಲ್ಯಾಬುಶೈನ್ ಇಂಗ್ಲೆಂಡ್ ಬೌಲರ್‌ಗಳ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದರು. ಈ ಇಬ್ಬರು ಆಟಗಾರರು 156 ರನ್‌ಗಳ ಜೊತೆಯಾಟವನ್ನಾಡುವ ಮೂಲಕ ಆಸಿಸ್‌ಗೆ ಮೇಲುಗೈ ಒದಗಿಸಿದರು.

ನಂತರ ಯುವ ಆಟಗಾರ ಮಾರ್ನಾಸ್ ಲ್ಯಾಬುಶೈನ್ 74 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಸ್ಟೀವ್ ಸ್ಮಿತ್ ಕೂಡ 12 ರನ್‌ಗಳಿಗೆ ಔಟಾದರು. ಈ ಹಂತದಲ್ಲಿ ಆಸ್ಟ್ರೇಲಿಯಾ ಸಣ್ಣ ಕುಸಿತವೊಂದನ್ನು ಕಂಡಿತು. 94 ರನ್‌ಗಳಿಸಿ ಶತಕದತ್ತ ತೆರಳುತ್ತಿದ್ದ ಆಸ್ಟ್ರೇಲಿಯಾ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ರಾಬಿನ್ಸನ್‌ಗೆ ಬಲಿಯಾಗುವ ಮೂಲಕ ನಿರಾಸೆ ಅನುಭವಿಸಿದರು. ನಂತರ ಕ್ಯಾಮರೂನ್ ಗ್ರೀನ್ ಮೊಸಲ ಎಸೆತಕ್ಕೆ ಔಟಾಗುವ ಮೂಲಕ ಶೂನ್ಯ ಸುತ್ತಿ ನಿರ್ಗಮಿಸಿದರು.

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಉಸ್ಮಾನ್ ಖವಾಜಾ, ಮೈಕೆಲ್ ನೆಸರ್, ಝೈ ರಿಚರ್ಡ್ಸನ್, ಮಿಚೆಲ್ ಸ್ವೆಪ್ಸನ್
ಇಂಗ್ಲೆಂಡ್ ಆಡುವ ಬಳಗ: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲಿ ಪೋಪ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಆಲಿ ರಾಬಿನ್ಸನ್, ಮಾರ್ಕ್ ವುಡ್, ಜ್ಯಾಕ್ ಲೀಚ್
ಬೆಂಚ್: ಜಾನಿ ಬೈರ್ಸ್ಟೋವ್, ಕ್ರೇಗ್ ಓವರ್ಟನ್, ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಝಾಕ್ ಕ್ರಾಲಿ, ಸ್ಟುವರ್ಟ್ ಬ್ರಾಡ್

Story first published: Thursday, December 9, 2021, 17:25 [IST]
Other articles published on Dec 9, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+