ಆಶಸ್ ಸರಣಿ, ಆಸ್ಟ್ರೇಲಿಯಾ vs ಇಂಗ್ಲೆಂಡ್: 2ನೇ ಪಂದ್ಯ, 4ನೇ ದಿನ, Live ಸ್ಕೋರ್

ಅಡಿಲೇಡ್: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಆಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನಲ್ಲಿ ನಡೆಯುತ್ತಿದೆ. ನಾಲ್ಕನೇ ದಿನದಾಟ ಆರಂಭವಾಗಿದ್ದು ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಹಿಡಿತವನ್ನು ಬಿಗಿಗೊಳಿಸಿದೆ. ಈ ಮೂಲಕ ಎರಡನೇ ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ.
ಮೂರನೇ ದಿನದಂತ್ಯಕ್ಕೆ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 236 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿತ್ತು. ಈ ಮೂಲಕ ಆತಿಥೇಯ ಆಸ್ಟ್ರೇಲಿಯಾ ತಂಡ 282 ರನ್‌ಗಳ ಭಾರೀ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮುನ್ನಡೆಯೊಂದಿಗೆ ಆಸ್ಟ್ರೇಲಿಯಾ ಅಡಿಲೇಡ್ ಪಂದ್ಯವನ್ನು ಕೂಡ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ
ಇನ್ನು ಎರಡನೇ ಇನ್ನಿಂಗ್ಸ್‌ನಲ್‌ಲಿ ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ ತನ್ನ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಿದೆಯಾದರೂ ಮೊದಲ ಇನ್ನಿಂಗ್ಸ್‌ನಲ್ಲಿ ಪಡೆದುಕೊಂಡಿರುವ ಭಾರೀ ಮುನ್ನಡೆ ತಂಡಕ್ಕೆ ಹಿನ್ನಡೆಯುಂಟು ಮಾಡುವ ಸಾಧ್ಯತೆಯಿಲ್ಲ. ಎರಡನೇ ಇನ್ನಿಂಗ್ಸ್‌ನಲ್ಲಿ 32 ಓವರ್‌ಗಳಾಗಯವಷ್ಟರಲ್ಲಿ ಆಸ್ಟ್ರೇಲಿಯಾ 64 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ಆದರೆ ಅದಾಗಲೇ ತಂಡದ ಮುನ್ನಡೆ 300 ದಾಟಿದೆ. ಅಡಿಲೇಡ್ ಓವಲ್‌ನಲ್ಲಿ ಈ ಮೊತ್ತವನ್ನು ಬೆನ್ನಟ್ಟುವುದು ಇಂಗ್ಲೆಂಡ್ ಪಡೆಗೆ ಬಹಳ ದೊಡ್ಡ ಸವಾಲಾಗಲಿದೆ.
ಇದಕ್ಕೂ ಮುನ್ನ ಮೂರನೇ ದಿನದಾಟದಲ್ಲಿ ಆಸ್ಟ್ರೇಲಿಯಾದ 473ರನ್‌ಗಳಿಗೆ ಉತ್ತರವಾಗಿ ಬ್ಯಾಟ್ ಬೀಸಿದ ಇಂಗ್ಲೆಂಡ್ 2 ವಿಕೆಟ್ ನಷ್ಟಕ್ಕೆ 17 ರನ್ ಕಲೆಹಾಕಿತ್ತು. ಆದ್ರೆ ಮೂರನೇ ವಿಕೆಟ್‌ಗೆ ಶತಕದ ಜೊತೆಯಾಟವಾಡಿದ ನಾಯಕ ಜೋ ರೂಟ್ ಮತ್ತು ಡೇವಿಡ್ ಮಲನ್ ಆಸೀಸ್ ಬೌಲರ್‌ಗಳನ್ನ ತಾಳ್ಮೆಯಿಂದ ಎದುರಿಸಿದ್ರು.
38ರನ್‌ಗಳ ಜೊತೆಯಾಟವಾಡಿದ್ದ ಈ ಜೋಡಿಯನ್ನ ಆಸೀಸ್ ಬೌಲರ್ ಗ್ರೀನ್ ಬೇರ್ಪಡಿಸಿದ್ರು. 116 ಎಸೆತಗಳಲ್ಲಿ 62 ರನ್ ಕಲೆಹಾಕಿದ್ದ ಜೋ ರೂಟ್ ಸ್ಟೀವನ್ ಸ್ಮಿತ್‌ಗೆ ಕ್ಯಾಚಿತ್ತು ಪೆವಿಲಿಯನ್‌ಗೆ ಸೇರಿದ್ರು. ಇದ್ರ ಬೆನ್ನಲ್ಲೇ ಶತಕದ ಭರವಸೆ ಮೂಡಿಸಿದ್ದ ಡೇವಿಡ್ ಮಲನ್ 150 ಎಸೆತಗಳಲ್ಲಿ 80ರನ್‌ಗೆ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದ್ರು. ಬೆನ್ ಸ್ಟೋಕ್ಸ್ ಆಟವೂ 34ರನ್‌ಗೆ ಕೊನೆಗೊಂಡಿತು.
ಜೋ ರೂಟ್ ವಿಕೆಟ್ ಪಡೆದಿದ್ದ ಗ್ರೀನ್ ವಿಶ್ವದ ಶ್ರೇಷ್ಟ ಆಲ್‌ರೌಂಡರ್ ಬೆನ್ ಸ್ಟೋಕ್ಸ್ 34ರನ್‌ಗಳಿಸಿದ್ದಾಗ ಕ್ಲೀನ್ ಬೌಲ್ಡ್ ಮಾಡುವಲ್ಲಿ ಯಶಸ್ವಿಯಾದ್ರು. ಸ್ಟೋಕ್ಸ್ ಬಳಿಕ ಬಂದ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳೆಲ್ಲಾ ಒಬ್ಬರ ಹಿಂದೆ ಒಬ್ಬೊಬ್ಬರಾಗಿ ಪೆವಿಲಿಯನ್ ಸೇರಿಕೊಂಡ್ರು. ಒಲ್ಲಿ ಪೋಪ್ 5, ವಿಕೆಟ್ ಕೀಪರ್ ಜಾಸ್ ಬಟ್ಲರ್ 0, ಕ್ರಿಸ್ ವೋಕ್ಸ್ 24, ರಾಬಿನ್‌ಸನ್ 0, ಸ್ಟುವರ್ಟ್ ಬ್ರಾಡ್ 9ರನ್‌ಗಳಿಸಿ ವಿಕೆಟ್ ಒಪ್ಪಿಸಿದ್ರು. ಅಂತಿಮವಾಗಿ ಇಂಗ್ಲೆಂಡ್ 236ರನ್‌ಗಳಿಗೆ ಸರ್ವಪತನಗೊಂಡು ಭಾರೀ ಹಿನ್ನಡೆ ಅನುಭವಿಸಿದೆ.
ಆಸ್ಟ್ರೇಲಿಯಾ ತಂಡದ ಆಡುವ ಬಳಗ: ಮಾರ್ಕಸ್ ಹ್ಯಾರಿಸ್, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮೈಕೆಲ್ ನೆಸರ್, ಮಿಚೆಲ್ ಸ್ಟಾರ್ಕ್, ನಥಾನ್ ಲಿಯಾನ್, ಜೈ ರಿಚರ್ಡ್ಸನ್
ಇಂಗ್ಲೆಂಡ್ ತಂಡದಆಡುವ ಬಳಗ: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್(ನಾಯಕ), ಬೆನ್ ಸ್ಟೋಕ್ಸ್, ಆಲಿ ಪೋಪ್, ಜೋಸ್ ಬಟ್ಲರ್(ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಆಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆ್ಯಂಡರ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications