
ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಿನ ಆಶಸ್ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲ ದಿನ ಆಸ್ಟ್ರೇಲಿಯಾ ಬೌಲರ್‌ಗಳ ಅದ್ಭುತ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ತಂಡ ಅಲ್ಪ ಮೊತ್ತಕ್ಕೆ ಆಲೌಟ್ ಆಗಿತ್ತು. ಈ ಮೂಲಕ ಮೂರನೇ ಪಂದ್ಯದಲ್ಲಿಯೂ ಭಾರೀ ಆಘಾತವನ್ನು ಅನುಭವಿಸಿದೆ. ಎರಡನೇ ದಿನ ಆಸ್ಟ್ರೇಲಿಯಾ ತಂಡವನ್ನು ದೊಡ್ಡ ಮೊತ್ತವನ್ನು ಗಳಿಸದೆ ಶೀಘ್ರವಾಗಿ ಆಲೌಟ್ ಮಾಡುವ ಪ್ರಯತ್ನವನ್ನು ನಡೆಸುತ್ತಿದೆ.
ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ್ದ ಇಂಗ್ಲೆಂಡ್ ಈ ಸರಣಿಯಲ್ಲಿ ಮತ್ತೊಮ್ಮೆ ಹೀನಾಯ ಬ್ಯಾಟಿಂಗ್ ಪ್ರದರ್ಶನ ನೀಡಿತು. ಇಂಗ್ಲೆಂಡ್‌ನ ಬ್ಯಾಟರ್‌ಗಳೆಲ್ಲರೂ ಭಾರೀ ವೈಫಲ್ಯವನ್ನು ಅನುಭವಿಸಿದರು. ನಾಯಕ ಜೋ ರೂಟ್ ಮಾತ್ರವೇ ಈ ಇನ್ನಿಂಗ್ಸ್‌ನಲ್ಲಿ 50 ರನ್‌ಗಳಿಸಿ ಒಂದಷ್ಟು ಪ್ರತಿರೋಧವನ್ನು ತೋರಿದರು. ಉಳಿದಂತೆ ಯಾವ ಆಟಗಾರ ಕೂಡ ಉತ್ತಮ ಜೊತೆಆಟವನ್ನು ನೀಡಲು ಸಾಥ್ ನೀಡಲೇ ಇಲ್ಲ. ಹೀಗಾಗಿ ಇಂಗ್ಲೆಂಡ್ ಮೊದಲ ದಿನದಾಟದಲ್ಲಿ ಕೇವಲ 65.1 ಓವರ್‌ಗಳನ್ನು ಮಾತ್ರವೇ ಎದುರಿಸಲು ಯಶಸ್ವಿಯಾಗುದ್ದು ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದೆ. 185 ರನ್‌ಗಳಿಸಿ ಇಂಗ್ಲೆಂಡ್ ಆಲೌಟ್ ಆಗಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ:
ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರವಾಗಿ ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಸ್ಪಿನ್ನರ್ ನಾಥನ್ ಲಿಯಾನ್ ತಲಾ ಮೂರು ವಿಕೆಟ್ ಕಬಳಿಸಿ ಮಿಂಚಿದರು. ಮಿಚೆಲ್ ಸ್ಟಾರ್ಕ್ ಎರಡು ವಿಕೆಟ್ ಸಂಪಾದಿಸಿದರೆ ಮೊಲಾಂಡ್ ಹಾಗೂ ಗ್ರೀನ್ ತಲಾ ಒಂದು ವಿಕೆಟ್ ಪಡೆದರು.
ಇನ್ನು ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್ ನಡೆಸುತ್ತಿದ್ದು ಇಂಗ್ಲೆಂಡ್ ತಂಡಕ್ಕೆ ಭಾರೀ ಆಘಾತ ನೀಡುವ ಹುಮ್ಮಸ್ಸಿನಲ್ಲಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ರನ್ ಪೇರಿಸಿ ಇಂಗ್ಲೆಂಡ್ ತಂಡಕ್ಕೆ ಭಾರೀ ಹಿನ್ನೆಡೆಯುಂಟು ಮಾಡುವ ಲೆಕ್ಕಾಚಾರದಲ್ಲಿದೆ. ಇಂಗ್ಲೆಂಡ್ ಗಳಿಸಿದ ರನ್ ಹಿಂದಿಕ್ಕುವ ಸನಿಹದಲ್ಲಿದ್ದು ಸಾಧ್ತವಾದಷ್ಟು ಹೆಚ್ಚು ಮುನ್ನಡೆ ಕಾಯ್ದುಕೊಳ್ಳುವ ಪ್ರಯತ್ನ ನಡೆಸಲಿದೆ. ಇನ್ನು ಆಸ್ಟ್ರೇಲಿಯಾ ತಂಡ ಈಗಾಗಲೇ ತನ್ನ ನಾಲ್ಕು ವಿಕೆಟ್ ಕಳೆದುಕೊಂಡಿದ್ದು ಮೊದಲ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್, ಮಾರ್ನಾಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್ ಹಾಗೂ ಮೊದಲ ದಿನ ನೈಟ್ ವಾಚ್‌ಮನ್ ಆಗಿ ಕಣಕ್ಕಿಳಿದಿದ್ದ ನಾಥನ್ ಲಿಯಾನ್ ವಿಕೆಟ್ ಕಳೆದುಕೊಂಡಿದ್ದಾರೆ.
ಆಸ್ಟ್ರೇಲಿಯಾ ಆಡುವ ಬಳಗ: ಮಾರ್ಕಸ್ ಹ್ಯಾರಿಸ್, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್
ಬೆಂಚ್: ಉಸ್ಮಾನ್ ಖವಾಜಾ, ಮೈಕೆಲ್ ನೆಸರ್, ಝೈ ರಿಚರ್ಡ್ಸನ್, ಮಿಚೆಲ್ ಸ್ವೆಪ್ಸನ್
ಇಂಗ್ಲೆಂಡ್ ಆಡುವ ಬಳಗ: ಹಸೀಬ್ ಹಮೀದ್, ಝಾಕ್ ಕ್ರಾಲಿ, ಡೇವಿಡ್ ಮಲನ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋವ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮಾರ್ಕ್ ವುಡ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಸ್ಟುವರ್ಟ್ ಬ್ರಾಡ್, ಕ್ರಿಸ್ ವೋಕ್ಸ್, ಡೊಮಿನಿಕ್ ಬೆಸ್, ಆಲಿ ಪೋಪ್, ರೋರಿ ಬರ್ನ್ಸ್, ಕ್ರೇಗ್ ಓವರ್ಟನ್, ಡೇನಿಯಲ್ ಲಾರೆನ್ಸ್