ಆಶಸ್ ಸರಣಿ, ಇಂಗ್ಲೆಂಡ್ vs ಆಸ್ಟ್ರೇಲಿಯಾ: ಬಾಕ್ಸಿಂಗ್ ಡೇ ಪಂದ್ಯ, Live ಸ್ಕೋರ್

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಪ್ರತಿಷ್ಠಿತ ಆಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯ ನಡೆಯುತ್ತಿದೆ. ಮೆಲ್ಬರ್ನ್‌ನಲ್ಲಿ ನಡೆಯುತ್ತಿರುವ ಈ ಬಾಕ್ಸಿಂಡ್ ಡೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಎದುರಾಳಿ ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಈ ಪಂದ್ಯದಲ್ಲಿಯೂ ಇಂಗ್ಲೆಂಡ್ ತಂಡ ನೀರಸವಾಗಿ ಬ್ಯಾಟಿಂಗ್ ಆರಂಭಿಸಿದ್ದು ಆಸಿಸ್ ಬೌಲಿಂಗ್ ದಾಳಿಗೆ ಸಮರ್ಥವಾಗಿ ಉತ್ತರಿಸಲು ತಿಣುಕಾಡುತ್ತಿದೆ.
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಇಂಗ್ಲೆಂಡ್ ತಂಡ ಅತ್ಯಂತ ನೀರಸ ಪ್ರದರ್ಶನ ನೀಡಿದ್ದು ಎರಡು ಪಂದ್ಯಗಳಲ್ಲಿಯೂ ಸೋಲು ಅನುಭವಿಸಿದೆ. ಸರಣಿಯಲ್ಲಿ ಜೀವಂತವಾಗಿರಬೇಕಾದರೆ ಈ ಸರಣಿಯಲ್ಲಿ ಗೆಲುವು ಸಾಧಿಸುವುದು ಇಂಗ್ಲೆಂಡ್ ತಂಡಕ್ಕೆ ಅನಿವಾರ್ಯವಾಗಿದೆ. ಆದರೆ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದಿಮದ ಹಿನ್ನಡೆ ಅನುಭವಿಸುತ್ತಿರುವ ಇಂಗ್ಲೆಂಡ್ ತಂಡಕ್ಕೆ ಸರಣಿಯಲ್ಲಿ ಹಿಡಿತ ಸಾಧಿಸುವುದು ಅಸಾಧ್ಯ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
Live ಸ್ಕೋರ್‌ಪಟ್ಟಿ ಹೀಗಿದೆ:
ಇನ್ನು ಈ ಬಾರಿಯ ಆಶಸ್ ಸರಣಿಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡ ಭಾರೀ ಆತ್ಮವಿಶ್ವಾಸದೊಂದಿಗೆ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿತ್ತು. ಆಸ್ಟ್ರೇಲಿಯಾ ತಂಡವನ್ನು ಈ ಹಿಂದೆ ಭಾರತ ಅದರದ್ದೇ ನೆಲದಲ್ಲಿ ಮಣಿಸಿದ ಬಳಿಕ ಇಂಗ್ಲೆಂಡ್ ತಂಡಕ್ಕೂ ಅಂತಾದ್ದೇ ಸಾಧನೆ ಮಾಡಬಹುದು ಎಂಬ ಆತ್ಮ ವಿಶ್ವಾಸ ಮೂಡಿತ್ತು. ಆದರೆ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್‌ನ ಈ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದೆ. ಮೊದಲ ಎರಡು ಪಂದ್ಯದಲ್ಲಿ ಇಂಗ್ಲೆಂಡ್ ಯಾವುದೇ ರೀತಿಯಲ್ಲಿಯೂ ಪ್ರತಿರೋಧವೊಡ್ಡಲು ವಿಫಲವಾಗಿದೆ.
ಇನ್ನು ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಹೀಗಾಗಿ ಈಗ ಆಸ್ಟ್ರೇಲಿಯಾ ಕಣ್ಣು ಆಶ್ ಟ್ರೋಫಿ ಗೆಲ್ಲುವುದರ ಜೊತೆಗೆ ಇಂಗ್ಲೆಂಡ್‌ಗೆ ವೈಟ್‌ವಾಶ್ ಮಾಡುವ ಲೆಕ್ಕಾಚಾರದಲ್ಲಿದೆ. ಅಂತಿಮ ಮೂರು ಪಂದ್ಯದಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ 5-0 ಅಂತರದಿಂದ ಗೆಲುವು ಸಾಧಿಸಬೇಕು ಎಂಬ ಲೆಕ್ಕಾಚಾರವನ್ನು ಮಾಡಿಕೊಳ್ಳುತ್ತಿದೆ.
ಇಂಗ್ಲೆಂಡ್: ಮಾರ್ಕಸ್ ಹ್ಯಾರಿಸ್, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್
ಬೆಂಚ್: ಉಸ್ಮಾನ್ ಖವಾಜಾ, ಮೈಕೆಲ್ ನೆಸರ್, ಝೈ ರಿಚರ್ಡ್ಸನ್, ಮಿಚೆಲ್ ಸ್ವೆಪ್ಸನ್
ಆಸ್ಟ್ರೇಲಿಯಾ: ಹಸೀಬ್ ಹಮೀದ್, ಝಾಕ್ ಕ್ರಾಲಿ, ಡೇವಿಡ್ ಮಲನ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋವ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮಾರ್ಕ್ ವುಡ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಸ್ಟುವರ್ಟ್ ಬ್ರಾಡ್, ಕ್ರಿಸ್ ವೋಕ್ಸ್, ಡೊಮಿನಿಕ್ ಬೆಸ್, ಆಲಿ ಪೋಪ್, ರೋರಿ ಬರ್ನ್ಸ್, ಕ್ರೇಗ್ ಓವರ್ಟನ್, ಡೇನಿಯಲ್ ಲಾರೆನ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications