For Quick Alerts
ALLOW NOTIFICATIONS  
For Daily Alerts
 

ಆಶಸ್ ಟೆಸ್ಟ್, ಅಂತಿಮ ಪಂದ್ಯ: 2ನೇ ಇನ್ನಿಂಗ್ಸ್‌ನಲ್ಲಿ ನಿಯಂತ್ರಣ ಸಾಧಿಸಿದ ಇಂಗ್ಲೆಂಡ್: Live ಸ್ಕೋರ್

Ashes series: England vs Australia, 5th match, 3rd day, Live score, Hobart

ಆಶಸ್ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ಹೋಬಾರ್ಟ್‌ನಲ್ಲಿ ಅಹರ್ನಿಶಿಯಾಗಿ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ನೀರಸ ಪ್ರದರ್ಶನ ನೀಡಿದ ಇಂಗ್ಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಪಂದ್ಯದ ರೋಚಕತೆಯನ್ನು ಹೆಚ್ಚಿಸಿದೆ. ಅದರಲ್ಲೂ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 63 ರನ್‌ಗಳಿಸುವಷ್ಟರಲ್ಲಿ 6 ವಿಕೆಟ್ ಪಡೆಯುವ ಮೂಲಕ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪಡೆ ಒಮದು ಹಂತದ ನಿಯಂತ್ರಣ ಸಾಧಿಸಲು ಯಶಸ್ವಿಯಾಗಿದೆ.

ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಟಾಸ್ ಗೆದ್ದ ಲಾಭ ಪಡೆಯಲು ಇಂಗ್ಲೆಂಡ್ ತಂಡ ಯಶಸ್ವಿಯಾಗಲಿಲ್ಲ. ಕೇವಲ 188 ರನ್‌ಗಳಿಗೆ ಇಂಗ್ಲೆಂಡ್ ತಂಡ ಆಲೌಟ್ ಆಯಿತು. ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಸ್ಟಾರ್ಕ್ ದಾಳಿಗೆ ನಲುಗಿದ ಇಂಗ್ಲೆಂಡ್ ದೊಡ್ಡ ಮೊತ್ತ ಗಳಿಸಲು ವಿಫಲವಾಯಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಟ್ರೆವಿಸ್ ಹೆಡ್ ಸಿಡಿಸಿದ ಭರ್ಜರಿ ಶತಕದ ನೆರವಿನಿಂದ 303 ರನ್‌ಗಳಿಸಲು ಯಶಸ್ವಿಯಾಯಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಮಹತ್ವದ 115 ರನ್‌ಗಳ ಮುನ್ನಡೆಯನ್ನು ಪಡೆಯಿತು.

ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ನಲ್ಲಿ ಇಂಗ್ಲೆಂಡ್ ಆಕ್ರಮಣಕಾರಿ ಆಟವನ್ನಾಡಲು ಆರಂಭಿಸಿದೆ. ಅದರಲ್ಲೂ ಇಂಗ್ಲೆಂಡ್ ವೇಗಿ ಮಾರ್ಕ್ ವುಡ್ ದಾಳಿಗೆ ಆಸಿಸ್ ಬ್ಯಾಟ್‌ಗಳು ಕ್ರಿಸ್‌ನಲ್ಲಿ ನೆಲೆಯೂರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿನ ಭಾರೀ ಹಿನ್ನಡೆಯ ಹೊರತಾಗಿಯೂ ಇಂಗ್ಲೆಂಡ್ ಪಂದ್ಯದಲ್ಲಿ ಹಿಡಿತ ಸಾಧಿಸಿದೆ.

Live ಸ್ಕೋರ್‌ ಕಾರ್ಡ್‌ ಪಟ್ಟಿ ಹೀಗಿದೆ

1
51147

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಮೈಕೆಲ್ ನೆಸರ್, ಮಾರ್ಕಸ್ ಹ್ಯಾರಿಸ್, ಝೈ ರಿಚರ್ಡ್ಸನ್, ಮಿಚೆಲ್ ಎಸ್.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಝಾಕ್ ಕ್ರಾಲಿ, ಡೇವಿಡ್ ಮಲನ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲಿ ಪೋಪ್, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಆಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್‌
ಬೆಂಚ್: ಜಾನಿ ಬೈರ್‌ಸ್ಟೋ, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್, ಕ್ರೇಗ್ಟನ್ , ಡೇನಿಯಲ್ ಲಾರೆನ್ಸ್, ಹಸೀಬ್ ಹಮೀದ್, ಡೊಮಿನಿಕ್ ಬೆಸ್

Virat Kohli ಕ್ಯಾಪ್ಟೆನ್ಸಿ ನಿರ್ಗಮನದ ಹಿಂದೆಯೇ ಟೀಮ್ ಇಂಡಿಯಾಗೆ ಬಿಗ್ ಶಾಕ್ ಕೊಟ್ಟ ICC | Oneindia Kannada

Story first published: Sunday, January 16, 2022, 10:39 [IST]
Other articles published on Jan 16, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+