Mitchell Starc: ವಾಸಿಂ ಅಕ್ರಮ್ ದಾಖಲೆ ಅಳಿಸಿದ ಸ್ಟಾರ್ಕ್
ಆಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿತು. ಈ ವೇಳೆ ಇಂಗ್ಲೆಂಡ್ ಮೊದಲ ದಿನದಾಟದ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 325 ರನ್ ಸೇರಿಸಿದೆ. ಈ ವೇಳೆ ಆಸ್ಟ್ರೇಲಿಯಾ ತಂಡದ ಮಾರಕ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ 6 ವಿಕೆಟ್ ಕಬಳಿಸಿ ಆರ್ಭಟಿಸಿದರು.
ಈ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಅಬ್ಬರದ ಬೌಲಿಂಗ್ ನಡೆಸಿ ಮಿಂಚಿದರು. ಈ ಮೂಲಕ ಮಿಚೆಲ್ ಸ್ಟಾರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಎಡಗೈ ವೇಗಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೊದಲು ಈ ದಾಖಲೆ ಪಾಕ್ ವೇಗಿ ವಾಸಿಮ್ ಅಕ್ರಮ್ ಅವರ ಹೆಸರಿನಲ್ಲಿತ್ತು. ಅಕ್ರಮ್ 414 ಟೆಸ್ಟ್ ವಿಕೆಟ್ ಪಡೆದಿದ್ದರು. ಸ್ಟಾರ್ಕ್ ಈಗ 415 ವಿಕೆಟ್ ಪಡೆದು ಎಡಗೈ ವೇಗದ ಬೌಲರ್‌ಗಳ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಪ್ರಸಕ್ತ ಆಶಸ್ ಸರಣಿಯಲ್ಲಿ ಮಿಚೆಲ್ ಸ್ಟಾರ್ಕ್ ಅಬ್ಬರದ ಬೌಲಿಂಗ್ ನಡೆಸುತ್ತಿದ್ದಾರೆ. ಇವರ ಬಿಗುವಿನ ದಾಳಿಗೆ ಇಂಗ್ಲೆಂಡ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಸ್ಟಾರ್ಕ್ ಆರಂಭದಲ್ಲಿ ಬೆನ್ ಡಕೆಟ್ ಅವರ ವಿಕೆಟ್ ಪಡೆದರೆ, ಬಳಿಕ ಓಲಿ ಪೋಪ್ ಅವರನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್‌ಗೆ ಅಟ್ಟಿದರು. ಹ್ಯಾರಿ ಬ್ರೂಕ್ ಸಹ ಸ್ಟಾರ್ಕ್ ಎಸೆತವನ್ನು ಅರಿಯುವಲ್ಲಿ ವಿಫಲರಾದರು.
ಸ್ಟಾರ್ಕ್ ಆಸೀಸ್ ತಂಡಕ್ಕೆ 2011ರಲ್ಲಿ ಪದಾರ್ಪಣೆ ಮಾಡಿದರು. ಅಲ್ಲಿಂದ ಇವರು ತಂಡದಲ್ಲಿ ಖಾಯಂ ಸ್ಥಾನ ಪಡೆಯಲು ಹರಸಾಹಸ ಪಡುತ್ತಿದ್ದರು. ಬಳಿಕ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡಿದ್ದ ಸ್ಟಾರ್ಕ್ ಆಸ್ಟ್ರೇಲಿಯಾ ತಂಡದ ಬೌಲಿಂಗ್ ಬೆನ್ನೆಲಬು ಆದರು. ಇವರು ಆಡಿದ 102 ಟೆಸ್ಟ್ ಪಂದ್ಯಗಳಲ್ಲಿ 415 ವಿಕೆಟ್ ಪಡೆದು ಅಬ್ಬರಿಸಿದ್ದಾರೆ.
ಜೋ ರೂಟ್ ಶತಕ
ಇಂಗ್ಲೆಂಡ ತಂಡದ ಸ್ಟಾರ್ ಬ್ಯಾಟರ್ ಜೋ ರೂಟ್ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾದರು. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ರೂಟ್ ಇಂಗ್ಲೆಂಡ್ ತಂಡಕ್ಕೆ ಆಧಾರವಾದರು. ಇವರು ಒಂದು ಬದಿಯಲ್ಲಿ ವಿಕೆಟ್‌ಗಳು ಬೀಳುತ್ತಾ ಇದ್ದರೂ, ಇನ್ನೊಂದು ಬದಿಯನ್ನು ಗಟ್ಟಿಗಿಯಾಗಿ ಹಿಡಿದಿಟ್ಟುಕೊಂಡ ಬ್ಯಾಟ್ ಮಾಡಿದರು. ಇವರು 202 ಎಸೆತಗಳಲ್ಲಿ 15 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 135 ರನ್ ಸಿಡಿಸಿದರು. ಎರಡನೇ ದಿನಕ್ಕೆ ಜೋಫ್ರಾ ಆರ್ಚರ್ (ಅಜೇಯ 32) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications