ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಶಸ್: ಅಡಿಲೇಡ್ ಅಂಗಳದಲ್ಲಿಯೂ ಗೆದ್ದ ಆಸ್ಟ್ರೇಲಿಯಾ; ಭಾರೀ ಸಂಕಷ್ಟದಲ್ಲಿ ಇಂಗ್ಲೆಂಡ್

Ashes Test Series 2021 22: Australia won by 275 runs against England in the second test
South Africa ಪಿಚ್ ನಲ್ಲಿ ಭಾರತದ ಗೇಮ್ ಚೇಂಜರ್ಸ್ ಯಾರು ಗೊತ್ತಾ? | Oneindia Kannada

ಬದ್ಧ ವೈರಿಗಳ ಕಾಳಗ ಎಂದೇ ಹೆಸರು ಮಾಡಿರುವ ಆಶಸ್ ಟೆಸ್ಟ್ ಸರಣಿಯ ಈ ಬಾರಿಯ ಆವೃತ್ತಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೂಡ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ ಗೆದ್ದು ಬೀಗಿದೆ. ಆಸ್ಟ್ರೇಲಿಯಾದ ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಮೊದಲನೆಯ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 473 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡಿತು. ಹೀಗೆ ಮೊದಲನೇ ಇನ್ನಿಂಗ್ಸ್‌ನಲ್ಲಿಯೇ ಎದುರಾಳಿ ಇಂಗ್ಲೆಂಡ್ ಮೇಲೆ ಹಿಡಿತವನ್ನು ಸಾಧಿಸಿದ ಆಸ್ಟ್ರೇಲಿಯಾ ಬೌಲಿಂಗ್‌ನಲ್ಲಿಯೂ ಸಹ ಆಂಗ್ಲರನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.

ಹೌದು, ಮೊದಲನೇ ಇನ್ನಿಂಗ್ಸ್‌ ಬೌಲಿಂಗ್ ವಿಭಾಗದಲ್ಲಿ ಎಡವಿದ್ದ ಇಂಗ್ಲೆಂಡ್ ಬ್ಯಾಟಿಂಗ್ ವಿಭಾಗದಲ್ಲಿಯೂ ಕೂಡ ದಿಟ್ಟ ಹೋರಾಟ ಮಾಡುವಲ್ಲಿ ಯಶಸ್ವಿಯಾಗಲಿಲ್ಲ. ಮೊದಲನೇ ಇನ್ನಿಂಗ್ಸ್‌ನಲ್ಲಿನ ತನ್ನ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ 236 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ 237 ರನ್‌ಗಳ ಬೃಹತ್ ಹಿನ್ನಡೆಯನ್ನು ಅನುಭವಿಸಿತು. ಹೀಗೆ ಇಂಗ್ಲೆಂಡ್ ಇಷ್ಟು ಕಡಿಮೆ ಮೊತ್ತಕ್ಕೆ ಆಲ್ ಔಟ್ ಆದಾಗಲೇ ಪಂದ್ಯವನ್ನು ಬಹುತೇಕ ಕೈವಶ ಮಾಡಿಕೊಂಡಿದ್ದ ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿ 9 ವಿಕೆಟ್ ನಷ್ಟಕ್ಕೆ 230 ರನ್ ಕಲೆ ಹಾಕಿ ಡಿಕ್ಲೇರ್ ಮಾಡಿಕೊಂಡಿತು. ಹೀಗೆ ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ಮುಗಿಸಿದ ಆಸ್ಟ್ರೇಲಿಯಾ ಎದುರಾಳಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು ಬರೋಬ್ಬರಿ 467 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಹೀಗೆ ಆಸ್ಟ್ರೇಲಿಯಾ ನೀಡಿದ್ದ ಬೃಹತ್ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಗಳ ಊಹೆಯಂತೆ ಇಷ್ಟು ದೊಡ್ಡ ಮೊತ್ತವನ್ನು ಬೆನ್ನಟ್ಟುವಲ್ಲಿ ವಿಫಲವಾಗಿ ಹೀನಾಯವಾಗಿ ಸೋತಿದೆ.

ಮೀಟೂ ವಿವಾದಕ್ಕೆ ತಿರುವು ನೀಡಿದ ಟೆನಿಸ್‌ ಆಟಗಾರ್ತಿ ಫೆಂಗ್ ಶುಯಿ ಹೇಳಿಕೆಮೀಟೂ ವಿವಾದಕ್ಕೆ ತಿರುವು ನೀಡಿದ ಟೆನಿಸ್‌ ಆಟಗಾರ್ತಿ ಫೆಂಗ್ ಶುಯಿ ಹೇಳಿಕೆ

ಐದನೇ ದಿನದಾಟದಂದು ಎರಡನೇ ಇನ್ನಿಂಗ್ಸ್‌ನಲ್ಲಿ 192 ರನ್‌ಗಳಿಗೆ ಆಲ್ ಔಟ್ ಆದ ಇಂಗ್ಲೆಂಡ್ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ದ್ವಿತೀಯ ಪಂದ್ಯದಲ್ಲಿಯೂ ಸೋತು ಸರಣಿ ಸೋಲುವ ಭೀತಿಗೆ ಒಳಗಾಗಿದೆ. ಇತ್ತ ಮೊದಲನೇ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತ ದಾಖಲಿಸುವುದರ ಮೂಲಕ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ ಎರಡನೇ ಪಂದ್ಯದಲ್ಲಿ 275 ರನ್‌ಗಳ ಬೃಹತ್ ಜಯ ಸಾಧಿಸಿ 5 ಪಂದ್ಯಗಳ ಆ್ಯಶಸ್ ಟೆಸ್ಟ್ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್ ಈ ಸರಣಿಯಲ್ಲಿ ಜಯ ಸಾಧಿಸಬೇಕೆಂದರೆ ಮುಂದಿನ ಎಲ್ಲ ಪಂದ್ಯಗಳನ್ನು ಗೆಲ್ಲಲೇಬೇಕಿದೆ ಮತ್ತು ಆಸ್ಟ್ರೇಲಿಯಾಗೆ ಟ್ರೋಫಿಯನ್ನು ಬಿಟ್ಟುಕೊಡಬಾರದು ಎಂದುಕೊಂಡರೆ ಮುಂಬರುವ ಯಾವುದೇ ಪಂದ್ಯದಲ್ಲಿಯೂ ಆಸ್ಟ್ರೇಲಿಯಾವನ್ನು ಗೆಲ್ಲಲು ಬಿಡಲೇಬಾರದಂತಹ ಕಠಿಣ ಸವಾಲು ಇದೀಗ ಇಂಗ್ಲೆಂಡ್ ತಂಡದ ಮುಂದಿದೆ.

ಮಾರ್ನಸ್ ಲ್ಯಾಬುಸ್‌ಚಾಗ್ನೆ ಪಂದ್ಯ ಶ್ರೇಷ್ಠ

ಮಾರ್ನಸ್ ಲ್ಯಾಬುಸ್‌ಚಾಗ್ನೆ ಪಂದ್ಯ ಶ್ರೇಷ್ಠ

ಈ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅರ್ಧ ಶತಕ ಸಿಡಿಸಿದ ಮಾರ್ನಸ್ ಲ್ಯಾಬುಸ್‌ಚಾಗ್ನೆ ಆಸ್ಟ್ರೇಲಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು ಎಂದೇ ಹೇಳಬಹುದು. ಮೊದಲ ಇನ್ನಿಂಗ್ಸ್‌ನಲ್ಲಿ 103 ರನ್ ಗಳಿಸಿದ ಮಾರ್ನಸ್ ಲ್ಯಾಬುಸ್‌ಚಾಗ್ನೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ 51 ರನ್ ಕಲೆಹಾಕಿದರು. ಇದರ ಜೊತೆ ಮೊದಲನೇ ಇನ್ನಿಂಗ್ಸ್‌ನಲ್ಲಿ ನಾಯಕ ಸ್ಟೀವ್ ಸ್ಮಿತ್ 93 ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಟ್ರೇವಿಸ್ ಹೆಡ್ 51 ರನ್ ಗಳಿಸಿದರು. ಹೀಗೆ ಪ್ರಥಮ ಮತ್ತು ದ್ವಿತೀಯ ಎರಡೂ ಇನ್ನಿಂಗ್ಸ್‌ನಲ್ಲಿಯೂ ಜವಾಬ್ದಾರಿಯುತ ಆಟವನ್ನು ಆಡಿದ ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಸ್‌ಚಾಗ್ನೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಜೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್ ಉತ್ತಮ ಬೌಲಿಂಗ್

ಜೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್ ಉತ್ತಮ ಬೌಲಿಂಗ್

ಇನ್ನು ಆಸ್ಟ್ರೇಲಿಯಾ ಪರ ಬ್ಯಾಟಿಂಗ್ ವಿಭಾಗದಲ್ಲಿ ಮಾರ್ನಸ್ ಲ್ಯಾಬುಸ್‌ಚಾಗ್ನೆ, ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ಪ್ರಮುಖ ಪಾತ್ರ ನಿರ್ವಹಿಸಿದರೆ ಬೌಲಿಂಗ್ ವಿಭಾಗದಲ್ಲಿ ಜೆ ರಿಚರ್ಡ್ಸನ್ ಮತ್ತು ಮಿಚೆಲ್ ಸ್ಟಾರ್ಕ್ ಜವಾಬ್ದಾರಿಯುತ ಪ್ರದರ್ಶನವನ್ನು ನೀಡಿದರು. ಮಿಚೆಲ್ ಸ್ಟಾರ್ಕ್ ಮೊದಲನೇ ಇನ್ನಿಂಗ್ಸ್‌ನಲ್ಲಿ 4 ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದರೆ ಜೆ ರಿಚರ್ಡ್ಸನ್ ಮೊದಲನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ಪಡೆಯದೇ ಇದ್ದರೂ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರರ ವಿಕೆಟ್‍ಗಳನ್ನೊಳಗೊಂಡಂತೆ ಒಟ್ಟು 5 ವಿಕೆಟ್ ಪಡೆದರು.

ಬೌಲಿಂಗ್‌, ಬ್ಯಾಟಿಂಗ್ ಎರಡರಲ್ಲೂ ನೆಲಕಚ್ಚಿದ ಇಂಗ್ಲೆಂಡ್

ಬೌಲಿಂಗ್‌, ಬ್ಯಾಟಿಂಗ್ ಎರಡರಲ್ಲೂ ನೆಲಕಚ್ಚಿದ ಇಂಗ್ಲೆಂಡ್

ಆ್ಯಶಸ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆಟಗಾರರು ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಕೂಡಾ ವಿಫಲರಾದರು ಎಂದೇ ಹೇಳಬಹುದು. ಮೊದಲನೇ ಇನ್ನಿಂಗ್ಸ್‌ನಲ್ಲಿ ಡೇವಿಡ್ ಮಲನ್ (80) ಮತ್ತು ಜೋ ರೂಟ್ (62) ತಂಡವನ್ನು ರಕ್ಷಿಸುವ ಪ್ರಯತ್ನ ಮಾಡಿದರಾದರೂ ಇತರೆ ಆಟಗಾರರಾರೂ ಕೂಡ ನೆಲಕಚ್ಚಿ ನಿಲ್ಲುವಲ್ಲಿ ಯಶಸ್ವಿಯಾಗಲೇ ಇಲ್ಲ. ಇನ್ನು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ಯಾವೊಬ್ಬ ಆಟಗಾರನೂ ಕೂಡ ಅರ್ಧಶತಕ ಬಾರಿಸುವಲ್ಲಿ ಯಶಸ್ವಿಯಾಗಲಿಲ್ಲ. ಇನ್ನು ಬೌಲಿಂಗ್ ವಿಭಾಗದಲ್ಲಿಯೂ ಆಸ್ಟ್ರೇಲಿಯಾ ಆಟಗಾರರನ್ನು ಕಟ್ಟಿಹಾಕುವ ಕೆಲಸ ನಡೆಯದೇ ಇದ್ದದ್ದೇ ಇಂಗ್ಲೆಂಡ್ ಸೋಲಿಗೆ ಪ್ರಮುಖ ಕಾರಣವೆನ್ನಬಹುದು.

Story first published: Tuesday, December 21, 2021, 10:29 [IST]
Other articles published on Dec 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X