Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಶಸ್ ಟೆಸ್ಟ್ ಸರಣಿ: ಅಂತಿಮ ಮೂರು ಪಂದ್ಯಗಳಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

Ashes Test series: Australia announced unchanged squad for last 3 test match

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನಲ್ಲಿ ಅಹರ್ನಿಶಿಯಾಗಿ ನಡೆದಿದ್ದು ಸೋಮವಾರ ಈ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ಭಾರೀ ಅಂತರದಿಂದ ಗೆದ್ದುಕೊಂಡಿದೆ. ಈ ಸಂದರ್ಭದಲ್ಲಿಯೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಯ್ಕೆ ಮಂಡಳಿ ಈ ಸರಣಿಯ ಅಂತಿಮ ಮೂರು ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದೆ.

ಮೆಲ್ಬೋರ್ನ್, ಸಿಡ್ನಿ ಹಾಗೂ ಹೋಬಾರ್ಟ್‌ನಲ್ಲಿ ನಡೆಯಲಿರುವ ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಈಗ ಇರುವ 15 ಆಟಗಾರರ ಬಳಗವನ್ನೇ ಉಳಿಸಿಕೊಳ್ಳಲಾಗಿದೆ. ಅಡಿಲೇಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಜೋಶ್ ಹ್ಯಾಜಲ್‌ವುಡ್ ಈ ಮುಂದಿನ ಪಂದ್ಯಗಳಲ್ಲಿ ಭಾಗಿಯಾಗಲಿದ್ದಾರೆ.

ಸರಣಿಯಲ್ಲಿ ಆಸ್ಟ್ರೇಲಿಯಾ ಮೇಲುಗೈ: ಇನ್ನು ಮೊದಲ ಪಂದ್ಯದಲ್ಲಿ ಭರ್ಜರಿ 9 ವಿಕೆಟ್‌ಗಳ ಅಂತರದಿಂದ ಗೆದ್ದಿರುವ ಆಸ್ಟ್ರೇಲಿಯಾ ತಂಡ ಸಾಕಷ್ಟು ಹುಮ್ಮಸ್ಸಿನೊಂದಿಗೆ ಎರಡನೇ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಅಡಿಲೇಡ್‌ನಲ್ಲಿ ಅಹರ್ನಿಶಿಯಾಗಿ ನಡೆಯುತ್ತಿರುವ ಈ ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ಆರಂಭದ ದಿನದಿಂದಲೂ ಭಾರೀ ಮೇಲುಗೈ ಸಾಧಿಸಿ ಗೆಲುವಿನ ಸನಿಹಕ್ಕೆ ತಲುಪಿದೆ. ಆದರೆ ಅಂತಿಮ ದಿನದಾಟದಲ್ಲಿ ಇಂಗ್ಲೆಂಡ್ ದಾಂಡಿಗರು ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಪಣತೊಟ್ಟು ಭಾರೀ ಪ್ರಯತ್ನವನ್ನು ನಡೆಸಿದರು. ಅದರಲ್ಲೂ ಜೋಸ್ ಬಟ್ಲರ್ ಇಂಗ್ಲೆಂಡ್ ತಂಡ ಸೋಲಿನಿಂದ ತಪ್ಪಿಸಿಕೊಳ್ಳಲು ಕ್ರೀಸ್‌ನಲ್ಲಿ ನೆಲಕಚ್ಚಿ ನಿಂತು ಆಸಿಸ್ ಬೌಲರ್‌ಗಳನ್ನು ಬೇವರಿಸಿಳಿಸಿದರು. ಆದರೆ ಈ ಪ್ರಯತ್ನದಲ್ಲಿ ಅದು ವಿಫಲವಾಗಿದ್ದು ಆಸ್ಟ್ರೇಲಿಯಾ ವಿರುದ್ಧ 275 ರನ್‌ಗಳ ಅಂತರದಿಂದ ಭಾರೀ ಸೋಲು ಕಂಡಿದೆ.

ಆಸಿಸ್ ತಂಡದ ವಿರುದ್ಧ ಗೆಲುವು ಸಾಧಿಸುವ ಲೆಕ್ಕಾಚಾರದಲ್ಲಿದ್ದ ಇಂಗ್ಲೆಂಡ್: ಇನ್ನು ಈ ಬಾರಿಯ ಆಶಸ್ ಸರಣಿಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡ ಭಾರೀ ಆತ್ಮವಿಶ್ವಾಸದೊಂದಿಗೆ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿತ್ತು. ಆಸ್ಟ್ರೇಲಿಯಾ ತಂಡವನ್ನು ಈ ಹಿಂದೆ ಭಾರತ ಅದರದ್ದೇ ನೆಲದಲ್ಲಿ ಮಣಿಸಿದ ಬಳಿಕ ಇಂಗ್ಲೆಂಡ್ ತಂಡಕ್ಕೂ ಅಂತಾದ್ದೇ ಸಾಧನೆ ಮಾಡಬಹುದು ಎಂಬ ಆತ್ಮ ವಿಶ್ವಾಸ ಮೂಡಿತ್ತು. ಆದರೆ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್‌ನ ಈ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದೆ. ಮೊದಲ ಎರಡು ಪಂದ್ಯುದಲ್ಲಿ ಇಂಗ್ಲೆಂಡ್ ಯಾವುದೇ ರೀತಿಯಲ್ಲಿಯೂ ಪ್ರತಿರೋಧವೊಡ್ಡಲು ವಿಫಲವಾಗಿದೆ.

5-0 ಅಂತರದ ಗೆಲುವಿನ ಮೇಲೆ ಆಸಿಸ್ ಕಣ್ಣು: ಇನ್ನು ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಹೀಗಾಗಿ ಈಗ ಆಸ್ಟ್ರೇಲಿಯಾ ಕಣ್ಣು ಆಶ್ ಟ್ರೋಫಿ ಗೆಲ್ಲುವುದರ ಜೊತೆಗೆ ಇಂಗ್ಲೆಂಡ್‌ಗೆ ವೈಟ್‌ವಾಶ್ ಮಾಡುವ ಲೆಕ್ಕಾಚಾರದಲ್ಲಿದೆ. ಅಂತಿಮ ಮೂರು ಪಂದ್ಯದಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ 5-0 ಅಂತರದಿಂದ ಗೆಲುವು ಸಾಧಿಸಬೇಕು ಎಂಬ ಲೆಕ್ಕಾಚಾರವನ್ನು ಮಾಡಿಕೊಳ್ಳುತ್ತಿದೆ.

ಅಂತಿಮ ಮೂರು ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ಸದಸ್ಯರು: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮೈಕೆಲ್ ನೆಸರ್, ಝೈ ರಿಚರ್ಡ್‌ಸನ್, ಸ್ಟೀವ್ ಸ್ಮಿತ್ (ಉಪ ನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

Story first published: Tuesday, December 21, 2021, 10:31 [IST]
Other articles published on Dec 21, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+