ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಶಸ್ ಟೆಸ್ಟ್: ಅನುಭವಿ ವೇಗಿ ಜೇಮ್ಸ್ ಆಂಡರ್ಸನ್‌ಗೆ ಬ್ರಿಸ್ಬೇನ್ ಟೆಸ್ಟ್‌ನಿಂದ ವಿಶ್ರಾಂತಿ

Ashes test: Veteran pacer James Anderson rested for the Brisbane Test says England management

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಬಹು ನಿರೀಕ್ಷಿತ ಆಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಬುಧವಾರದಿಂದ ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆಂಡರ್ಸನ್ ಅವರನ್ನು ಆಡಿಸದಿರಲು ಇಂಗ್ಲೆಂಡ್ ತಂಡದ ಮ್ಯಾನೇಜ್‌ಮೆಂಟ್ ನಿರ್ಧಾರ ಮಾಡಿದೆ. ಈ ಬಗ್ಗೆ ಸ್ಪಷ್ಟನೆಯನ್ನು ಇಂಗ್ಲೆಂಡ್ ಕ್ರಿಕೆಟ್ ತಂಡದ ಮ್ಯಾನೇಜ್‌ಮೆಂಟ್ ನೀಡಿದ್ದು ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಸಂಪೂರ್ಣವಾಗಿ ಫಿಟ್ ಆಗಿದ್ದು ಅವರಿಗೆ ಮೊದಲ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿಸಿದೆ.

ಜೇಮ್ಸ್ ಆಂಡರ್ಸನ್ ಅವರು ಗಾಯಗೊಂಡಿದ್ದು ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬು ವದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ವತಃ ಮಂಡಳಿ ಸ್ಪಷ್ಟನೆಯನ್ನು ನೀಡಿದ್ದು ಆಂಡರ್ಸನ್ ಯಾವುದೇ ಗಾಯಕ್ಕೆ ತುತ್ತಾಗಿ ತಂಡದಿಂದ ಹೊರಬಿದ್ದಿಲ್ಲ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಮಾಹಿತಿ ನೀಡಿದೆ. "ಜಿಮ್ಮಿ ಆಡಲು ಸಮರ್ಥರಾಗಿದ್ದಾರೆ. ಯಾವುದೇ ಗಾಯಗಳು ಕೂಡ ಇಲ್ಲ. ಮುಂದಿನ ಆರು ವಾರಗಳಲ್ಲಿ ಐದು ಟೆಸ್ಟ್ ಪಂದ್ಯಗಳು ನಡೆಯುವ ಕಾರಣದಿಂದಾಗಿ ನಾವು ಅಡೆಲೇಡ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಯೋಜನೆ ರೂಪಿಸಿದ್ದೇವೆ" ಎಂದು ಮ್ಯಾನೇಜ್‌ಮೆಂಟ್ ಸ್ಪಷ್ಟನೆ ನೀಡಿದೆ.

ವಿದೇಶಿ ಪಿಚ್‌ಗಳಲ್ಲಿ ಅಕ್ಷರ್ ಪಟೇಲ್ ಮಿಂಚಬಲ್ಲರೇ? ಡೇನಿಯಲ್ ವೆಟ್ಟೋರಿ ಪ್ರಶ್ನೆ!ವಿದೇಶಿ ಪಿಚ್‌ಗಳಲ್ಲಿ ಅಕ್ಷರ್ ಪಟೇಲ್ ಮಿಂಚಬಲ್ಲರೇ? ಡೇನಿಯಲ್ ವೆಟ್ಟೋರಿ ಪ್ರಶ್ನೆ!

ಗಾಯಗೊಂಡಿದ್ದಾರಾ ಆಂಡರ್ಸನ್: ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ಪತ್ರಿಕೆ ಈ ಬಗ್ಗೆ ವರದಿ ಮಾಡಿದ್ದು ಮಂಡಿರಜ್ಜು ಗಾಯಕ್ಕೆ ತುತ್ತಾಗಿರುವ ಜೇಮ್ಸ್ ಆಂಡರ್ಸನ್ ಪಂದ್ಯದಿಂದ ಹೊರಬಿದ್ದಿದ್ದಾರೆ ಎಂದು ವರದಿ ಮಾಡಿತ್ತು. 2019ರ ಆಶಸ್ ವೇಳೆಯೂ ಆಂಡರ್ಸನ್ ಇದೇ ಸಮಸ್ಯೆಗೆ ತುತ್ತಾಗಿದ್ದರು.

ಗಾಬಾ ಟೆಸ್ಟ್ ಗೆಲುವಿನ ಮೇಲೆ ಇಂಗ್ಲೆಂಡ್ ಕಣ್ಣು: ಗಾಬಾ ಕ್ರಿಕೆಟ್ ಮೈದಾನದಲ್ಲಿ ಗೆಲುವು ಇಂಗ್ಲೆಂಡ್ ತಂಡಕ್ಕೆ ಸುದೀರ್ಘ ಕಾಲದಿಂದ ಕನಸಾಗಿಯೇ ಉಳಿದುಕೊಂಡಿದೆ. ಗಾಬಾದಲ್ಲಿ ಇಂಗ್ಲೆಂಡ್ ತಂಡ ಕೊನೆಯ ಬಾರಿ ಟೆಸ್ಟ್ ಗೆಲುವು ಸಾಧಿಸಿದಾದ ಈಗ ಇಂಗ್ಲೆಂಡ್ ತಂಡದಲ್ಲಿರುವ ಆಟಗಾರ ಪೈಕಿ ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಮಾತ್ರವೇ ಜನಿಸಿದ್ದರು. ಸುದೀರ್ಘ ಕಾಲದಿಂದ ಗಾಬಾದಲ್ಲಿ ಆಸ್ಟ್ರೇಲಿಯಾ ತನ್ನ ಸಂಪೂರ್ಣ ಪಾರುಪತ್ಯವನ್ನು ಸಾಧಿಸುತ್ತಾ ಬಂದಿದೆ. 1986ರಲ್ಲಿ ಕೊನೆಯ ಬಾರಿಗೆ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಗಾಬಾದಲ್ಲಿ ಆಸ್ಟ್ರೇಲಿಯಾ ಸೋಲು ಕಂಡಿತ್ತು. ಹೀಗಾಗಿ ಬುಧವಾರದಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯ ಮೇಲೆ ಇಂಗ್ಲೆಂಡ್ ಗೆಲುವಿಗಾಗಿ ಹಾತೊರೆಯುತ್ತಿದೆ.

ಇನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಗಾಬಾ ಅಂಗಳದಲ್ಲಿ ಸೋಲಿಸುವ ಮೂಲಕ ಈ ಮೈದಾನದಲ್ಲಿ ಕಳೆದ 32 ವರ್ಷಗಳಿಂದ ಅಜೇಯವಾಗಿ ಉಳಿದಿದ್ದ ಆಸ್ಟ್ರೇಲಿಯಾಗೆ ಸೋಲಿನ ರುಚಿ ತೋರಿಸಿತ್ತು. ಈ ಮೂಲಕ ಐತಿಹಾಸಿಕ ಗೆಲುವು ಸಾಧಿಸಿ ಟ್ರೋಫಿಯನ್ನು ಕೂಡ ವಶಕ್ಕೆ ಪಡೆದುಕೊಂಡಿತ್ತು. ಇದರಿಂದ ಸ್ಪೂರ್ತಿಗೊಂಡಿರುವ ಇಂಗ್ಲೆಂಡ್ ತಂಡ ಆಸಿಸ್ ಪಡೆಗೆ ಸೋಲುಣಿಸುವ ವಿಶ್ವಾಸದಲ್ಲಿದೆ.

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್, ಏಕದಿನ ಸರಣಿ: ಪರಿಷ್ಕೃತ ವೇಳಾಪಟ್ಟಿ ಪ್ರಕಟಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್, ಏಕದಿನ ಸರಣಿ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಆಸ್ಟ್ರೇಲಿಯಾ ಸಂಪೂರ್ಣ ಸ್ಕ್ವಾಡ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಹ್ಯಾರಿಸ್, ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮೈಕೆಲ್ ನೆಸರ್, ಕ್ಯಾಮೆರಾನ್ ಗ್ರೀನ್, ಜ್ಯೆ ರಿಚರ್ಡ್‌ಸನ್, ಜೋಶ್ ಹ್ಯಾಜಲ್‌ವುಡ್, ನಾಥನ್ ಲಿಯಾನ್, ಮಿಚೆಲ್ ಸ್ಟಾರ್ಕ್ , ಮಿಚೆಲ್ ಸ್ವೆಪ್ಸನ್.

ಇಂಗ್ಲೆಂಡ್ ಸಂಪೂರ್ಣ ಸ್ಕ್ವಾಡ್: ಜೋ ರೂಟ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಝಾಕ್ ಕ್ರಾಲಿ, ಹಸೀಬ್ ಹಮೀದ್, ಡೇನಿಯಲ್ ಲಾರೆನ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಕ್ರೇಗ್ ಓವರ್‌ಟನ್, ಕ್ರಿಸ್ ವೋಕ್ಸ್, ರೋರಿ ಬರ್ನ್ಸ್, ಆಲಿ ಪೋಪ್, ಜೇಮ್ಸ್ ಆಂಡರ್ಸನ್, ಡೊಮಿನಿಕ್ ಬೆಸ್ , ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್

ವಿರಾಟ್ ಕೊಹ್ಲಿ ಅಭಿಮಾನಿಗಳ ಒತ್ತಾಯದ ಮೇರೆಗೆ ಕುಣಿದದ್ದು ಹೀಗೆ | Oneindia Kannada

Story first published: Tuesday, December 7, 2021, 19:09 [IST]
Other articles published on Dec 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X