'ಆತ ಕೊಹ್ಲಿ, ರೋಹಿತ್‌ಗಿಂತ ಕಡಿಮೆಯೇನಲ್ಲ'; ಟೀಮ್ ಇಂಡಿಯಾದ ಆ ಆಟಗಾರನನ್ನು ಹೊಗಳಿದ ನೆಹ್ರಾ

ಸದ್ಯ ಬಿಸಿಸಿಐ ಭಾರತ ತಂಡವನ್ನು 2 ತಂಡಗಳನ್ನಾಗಿ ವಿಂಗಡಣೆ ಮಾಡಿ ಕೊಹ್ಲಿ ನೇತೃತ್ವದ ತಂಡವನ್ನು ಇಂಗ್ಲೆಂಡ್ ಪ್ರವಾಸಕ್ಕೆ ಕಳುಹಿಸಿದೆ ಹಾಗೂ ಶಿಖರ್ ಧವನ್ ನೇತೃತ್ವದ ಯುವ ತಂಡವನ್ನು ಶ್ರೀಲಂಕಾ ಪ್ರವಾಸಕ್ಕೆ ಕಳುಹಿಸಿದೆ. ಹೀಗೆ ಏಕಕಾಲಕ್ಕೆ ಎರಡೆರಡು ಪ್ರವಾಸಗಳನ್ನು ಕೈಗೊಳ್ಳಬಹುದಾದಂತಹ ದೊಡ್ಡ ಮಟ್ಟದ ಆಟಗಾರರ ಸಂಖ್ಯೆಯನ್ನು ಹೊಂದಿರುವ ಬಲಿಷ್ಠ ತಂಡ ಭಾರತವಾಗಿದೆ.
ಹೀಗೆ 2 ತಂಡಗಳನ್ನು ವಿಂಗಡಣೆ ಮಾಡಿದ್ದರಿಂದ ಯುವ ಆಟಗಾರರಿಗೆ ಮತ್ತು ತಂಡದಲ್ಲಿ ಅವಕಾಶ ಸಿಗದೆ ಮೂಲೆ ಗುಂಪಾಗಿದ್ದ ಕೆಲ ಆಟಗಾರರಿಗೆ ಹೆಚ್ಚು ಅವಕಾಶಗಳು ದೊರೆತಂತಾಗಿದೆ. ಅದರಲ್ಲಿಯೂ ಪ್ರಮುಖವಾಗಿ ಸೂರ್ಯಕುಮಾರ್ ಯಾದವ್‌ಗೆ ತುಸು ಹೆಚ್ಚೇ ಅನುಕೂಲ ಆಯಿತು ಎಂದು ಹೇಳಬಹುದು. ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೂ ಮುನ್ನ ಅವಕಾಶಗಳು ಸಿಗದೆ ಮೂಲೆಗುಂಪಾಗಿದ್ದ ಸೂರ್ಯಕುಮಾರ್ ಯಾದವ್ ಇತ್ತೀಚಿನ ದಿನಗಳಲ್ಲಿ ಸಾಲು ಸಾಲು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಅವಕಾಶಗಳನ್ನು ಪಡೆದುಕೊಳ್ಳುವುದು ಮಾತ್ರವಲ್ಲದೆ ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಮಿಂಚುತ್ತಿದ್ದಾರೆ ಕೂಡ.
ಈ ಕುರಿತು ಇದೀಗ ಭಾರತದ ಮಾಜಿ ಕ್ರಿಕೆಟಿಗ ಆಶಿಶ್ ನೆಹ್ರಾ ಕೂಡ ಮಾತನಾಡಿದ್ದು ಸೂರ್ಯಕುಮಾರ್ ಯಾದವ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಮತ್ತು ಪ್ರಸ್ತುತ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಆಟವನ್ನು ಕಂಡು ಆಶೀಶ್ ನೆಹ್ರಾ ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್ ರೀತಿ ಸೂರ್ಯಕುಮಾರ್ ಯಾದವ್ ಕೂಡ ಒಬ್ಬ ಅತ್ಯದ್ಭುತ ಆಟಗಾರ ಎಂದು ಆಶೀಶ್ ನೆಹ್ರಾ ಈ ಕೆಳಕಂಡಂತೆ ಶ್ಲಾಘಿಸಿದ್ದಾರೆ.

ವಿರಾಟ್ ಕೊಹ್ಲಿ ರೋಹಿತ್ ಶರ್ಮ ಮತ್ತು ಪಂತ್‌ಗಿಂತ ಸೂರ್ಯಕುಮಾರ್ ಯಾದವ್ ಕಡಿಮೆಯೇನಲ್ಲ ವಿರಾಟ್ ಕೊಹ್ಲಿ ರೋಹಿತ್ ಶರ್ಮ ಮತ್ತು ಪಂತ್‌ಗಿಂತ ಸೂರ್ಯಕುಮಾರ್ ಯಾದವ್ ಕಡಿಮೆಯೇನಲ್ಲ
ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಮಿಂಚುತ್ತಿದ್ದಾರೆ ಮತ್ತು ಐಪಿಎಲ್ ಟೂರ್ನಿಗಳಲ್ಲಿಯೂ ಅವರ ಆಟವನ್ನು ನಾವು ಕಂಡಿದ್ದೇವೆ, ಆತನನ್ನು ಯಾವುದೇ ಕ್ರಮಾಂಕದಲ್ಲಿ ಆಡಲು ಕಳುಹಿಸಿದರೂ ಸಹ ಹಿಂದೇಟು ಹಾಕದೆ ಲೀಲಾಜಾಲವಾಗಿ ಬ್ಯಾಟ್ ಬೀಸುವಂತಹ ಕೌಶಲ್ಯವನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಬ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯಗಿಂತ ಸೂರ್ಯಕುಮಾರ್ ಯಾದವ್ ಯಾವುದರಲ್ಲೂ ಕಡಿಮೆ ಇಲ್ಲ ಎಂದು ಆಶಿಶ್ ನೆಹ್ರಾ ತಿಳಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಯಾದವ್ ಮಿಂಚು
ಶಿಖರ್ ಧವನ್ ನೇತೃತ್ವದ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿಕೊಂಡಿತು. ಈ ಸರಣಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದವರ ಪೈಕಿ ಸೂರ್ಯಕುಮಾರ್ ಯಾದವ್ ಕೂಡ ಒಬ್ಬರು. ಹೀಗಾಗಿಯೇ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ 124 ರನ್ ಸಿಡಿಸಿ ಮಿಂಚಿದರು. ಹಾಗೂ ಭಾನುವಾರದಂದು ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ 34 ಎಸೆತಗಳಲ್ಲಿ 50 ರನ್ ಬಾರಿಸಿ ಸೂರ್ಯಕುಮಾರ್ ಯಾದವ್ ಮಿಂಚಿದ್ದಾರೆ.

ಲಂಕಾ ಪ್ರವಾಸ ಮುಗಿದ ಬೆನ್ನಲ್ಲೇ ಇಂಗ್ಲೆಂಡ್‌ಗೆ ಹಾರಲಿರುವ ಯಾದವ್
ಈ ಹಿಂದೆ ಅವಕಾಶಗಳಿಲ್ಲ ಎಂದು ಕೊರಗುತ್ತಿದ್ದ ಸೂರ್ಯಕುಮಾರ್ ಯಾದವ್ ಈಗ ಬಹು ಬೇಡಿಕೆ ಇರುವಂತಹ ಆಟಗಾರನಾಗಿ ನಿಂತಿದ್ದಾರೆ. ಸದ್ಯ ಶ್ರೀಲಂಕಾ ಪ್ರವಾಸದಲ್ಲಿರುವ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧದ ಸರಣಿಗಳು ಮುಗಿದ ನಂತರ ತಂಡದ ಮತ್ತೋರ್ವ ಆಟಗಾರ ಪೃಥ್ವಿ ಶಾ ಜೊತೆ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಲಿದ್ದು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications