ದಿಗ್ಗಜ ಸ್ಪಿನ್ ಬೌಲರ್ ದಾಖಲೆಯ ಸಮಕ್ಕೆ ನಿಂತ ಅಶ್ವಿನ್: ಏನದು ದಾಖಲೆ
ಟೀಮ್ ಇಂಡಿಯಾ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಟೆಸ್ಟ್ ಮುಗಿದಿದ್ದು, ಆತಿಥೇಯ ತಂಡ ಏಳು ವಿಕೆಟ್‌ಗಳಿಂದ ಪಂದ್ಯ ಗೆದ್ದಿದೆ. ಅಲ್ಲದೆ ತವರಿನಲ್ಲಿ ನಡೆದ ಎರಡು ಪಂದ್ಯಗಳ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಅವರು ದಾಖಲೆ ನಿರ್ಮಿಸಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ರವಿಚಂದ್ರನ್ ಅಶ್ವಿನ್, ಮೊದಲ ಟೆಸ್ಟ್ ಪಂದ್ಯ ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಅಲ್ಲದೆ ಎರಡನೇ ಇನಿಂಗ್ಸ್‌ನಲ್ಲಿ ಆರು ವಿಕೆಟ್ ಪಡೆದು ಗೆಲುವಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು. ಎರಡನೇ ಟೆಸ್ಟ್‌ನಲ್ಲೂ ಅಶ್ವಿನ್ ಅಬ್ಬರಿಸಿದ್ದಾರೆ. ಮೊದಲ ಇನಿಂಗ್ಸ್‌ನಲ್ಲಿ 2 ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 3 ವಿಕೆಟ್ ಕಬಳಿಸಿರುವ ಅಶ್ವಿನ್ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. ಎರಡನೇ ಟೆಸ್ಟ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್‌ಗೆ ಪಂದ್ಯ ಶ್ರೇಷ್ಠ ಗರಿ ಸಂದಿದೆ.

ಮುರಳಿಧರನ್ ದಾಖಲೆಯ ಸಮಕ್ಕೆ ಅಶ್ವಿನ್
ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರು ಈ ಸರಣಿಯಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸರಣಿ ಶ್ರೇಷ್ಠ ಆಟಗಾರರ ಪ್ರಶಸ್ತಿಯನ್ನು ಪಡೆದ ಶ್ರೀಲಂಕಾದ ದಿಗ್ಗಜ ಮುತ್ತಯ್ಯ ಮುರಳಿಧರನ್ ಅವರ ದಾಖಲೆಯ ಸಮಕ್ಕೆ ನಿಂತಿದ್ದಾರೆ. ಮುತ್ತಯ್ಯ ಮುರಳಿಧರನ್ 133 ಟೆಸ್ಟ್ ಪಂದ್ಯಗಳಲ್ಲಿ 11 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಅಶ್ವಿನ್ ಈ ದಾಖಲೆಯನ್ನು 103 ಟೆಸ್ಟ್‌ಗಳಲ್ಲಿ ಸಾಧಿಸಿದ್ದಾರೆ.
ಟೆಸ್ಟ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ಹೆಗ್ಗಳಿಕೆ ಸಹ ಅಶ್ವಿನ್ ಅವರದ್ದಾಗಿದೆ. ಇವರ ನಂತರದ ಸ್ಥಾನದಲ್ಲಿ ವಿರೇಂದ್ರ ಸೆಹ್ವಾಗ್ ಹಾಗೂ ಸಚಿನ್ ತೆಂಡೂಲ್ಕರ್ ಇದ್ದು ಇಬ್ಬರೂ ತಲಾ ಐದು ಬಾರಿ ಈ ಸಾಧನೆ ಮಾಡಿದ್ದಾರೆ. ಉಳಿದಂತೆ ಕಪಿಲ್ ದೇವ್, ಹರ್ಭಜನ್ ಸಿಂಗ್, ಅನಿಲ್ ಕುಂಬ್ಳೆ ತಲಾ ನಾಲ್ಕು ಬಾರಿ ಈ ಸಾಧನೆ ಮಾಡಿದ್ದಾರೆ.

ಎರಡನೇ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು
ಭಾರತ ಹಾಗೂ ಬಾಂಗ್ಲಾದೇಶದ ನಡುವಣ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಬಾಂಗ್ಲಾದೇಶ ತಂಡವನ್ನು ಏಳು ವಿಕೆಟ್‌ಗಳಿಂದ ಮಣಿಸಿ ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಈ ಮೂಲಮ ಟೀಮ್ ಇಂಡಿಯಾ ತವರಿನಲ್ಲಿ 18ನೇ ಸರಣಿ ಗೆಲುವಿನ ನಗೆ ಬೀರಿದೆ. ಟೂರ್ನಿಯಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್‌ಗಳು ಸ್ಥಿರ ಪ್ರದರ್ಶನ ನೀಡಿದ್ದಾರೆ. ಭಾರತ, ಬಾಂಗ್ಲಾ ವಿರುದ್ಧ ಟಿ20 ಪಂದ್ಯಗಳ ಸರಣಿಯನ್ನು ಆಡಲಿದ್ದು, ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಅಕ್ಟೋಬರ್ 16ರಿಂದ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications