100ನೇ ಟೆಸ್ಟ್‌ನಲ್ಲಿ ಅಶ್ವಿನ್ ಐತಿಹಾಸಿಕ ಸಾಧನೆ: ದಾಖಲೆಯ ಪುಟ ಸೇರಿದ ಸ್ಪಿನ್ ಬೌಲರ್
ಟೀಮ್ ಇಂಡಿಯಾದ ಕೇರಂ ಸ್ಪೇಷಲಿಸ್ಟ್ ಆರ್.ಅಶ್ವಿನ್ ಪಾಲಿಗೆ ಧರ್ಮಶಾಲಾ ಟೆಸ್ಟ್ ಮಹತ್ವದಾಗಿದೆ. ಈ ಪಂದ್ಯ ಸ್ಪಿನ್ ಮಾಂತ್ರಿಕನ ವೃತ್ತಿ ಜೀವನದ ನೂರನೇ ಟೆಸ್ಟ್. ಸ್ಮರಣೀಯ ಪಂದ್ಯವನ್ನು ಅವಿಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಸ್ಪಿನ್ ಬೌಲರ್ ಚಿತ್ತ ನೆಟ್ಟಿದ್ದಾರೆ. ಮೊದಲ ಇನಿಂಗ್ಸ್‌ನ ಆರಂಭದಲ್ಲಿ ವಿಕೆಟ್ ಪಡೆಯುವಲ್ಲಿ ಹಿಂದೆ ಬಿದ್ದರೂ ನಂತರ ಅಬ್ಬರಿಸಿದರು.
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮೊದಲ ದಿನದ ಆಟದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಟಾಸ್ ಸೋತ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಮೊದಲ ಇನ್ನಿಂಗ್ಸ್ ನಲ್ಲಿ 218 ರನ್ ಗಳಿಗೆ ಕಟ್ಟಿ ಹಾಕಿತು.

ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿದೆ. ಇದಕ್ಕೂ ಮುನ್ನ 100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಆರ್ ಅಶ್ವಿನ್ ಅದ್ಭುತ ಬೌಲಿಂಗ್ ಮಾಡಿದರು. ಅಶ್ವಿನ್ ಈ ಮೂಲಕ ತಮ್ಮ ನೂರನೇ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ದಾಪು ಗಾಲು ಇಟ್ಟಿದ್ದಾರೆ.
ಅಶ್ವಿನ್‌ಗೆ ನಾಲ್ಕು ವಿಕೆಟ್
ಆರ್ ಅಶ್ವಿನ್ ಭಾರತ ಪರ 100 ಟೆಸ್ಟ್ ಪಂದ್ಯಗಳನ್ನು ಆಡಿದ 14ನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ವಿಶೇಷ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದರು. ಆರ್ ಅಶ್ವಿನ್ ಇಂಗ್ಲೆಂಡ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 11.4 ಓವರ್‌ಗಳನ್ನು ಎಸೆದು 51 ರನ್‌ಗಳನ್ನು ನೀಡಿ 4 ವಿಕೆಟ್‌ಗಳನ್ನು ಪಡೆದರು.
ಟೀಮ್ ಇಂಡಿಯಾದ ಕೇರಂ ಸ್ಪೇಷಲಿಸ್ಟ್ ಆರ್ ಅಶ್ವಿನ್ ಬೆನ್ ಫಾಕ್ಸ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್ ಮತ್ತು ಜೇಮ್ಸ್ ಆಂಡರ್ಸನ್ ಅವರಿಗೆ ಪೆವಿಲಿಯನ್ ಹಾದಿ ತೋರಿಸಿದರು.

ಅಶ್ವಿನ್ ವಿಶೇಷ ದಾಖಲೆ
ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆರ್ ಅಶ್ವಿನ್ ವಿಶೇಷ ದಾಖಲೆಗೆ ಭಾಜನರಾಗಿದ್ದಾರೆ.
100ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿ ಅಂಶಗಳನ್ನು ಸಾಧಿಸಿದ ಭಾರತದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಈ ಹಿಂದೆ ಕಪಿಲ್ ದೇವ್ ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದರು. ಕಪಿಲ್ ದೇವ್ ತಮ್ಮ 100ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 69 ರನ್‌ಗಳಿಗೆ 4 ವಿಕೆಟ್ ಪಡೆದಿದ್ದರು.
ಕುಲದೀಪ್ ಪಂಚ್
ಕುಲದೀಪ್ ಯಾದವ್ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅತ್ಯಂತ ಯಶಸ್ವಿ ಬೌಲರ್. ಕುಲದೀಪ್ ಯಾದವ್ 15 ಓವರ್‌ಗಳಲ್ಲಿ 72 ರನ್ ನೀಡಿ 5 ವಿಕೆಟ್ ಪಡೆದರು. ಕುಲದೀಪ್ ಯಾದವ್ ಅವರು ಜಾಕ್ ಕ್ರೌಲಿ, ಬೆನ್ ಡಕೆಟ್, ಓಲಿ ಪೋಪ್, ಜಾನಿ ಬೈರ್‌ಸ್ಟೋವ್ ಮತ್ತು ಬೆನ್ ಸ್ಟೋಕ್ಸ್ ಅವರಂತಹ ಸ್ಟಾರ್ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದರು. ಅವರು ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದಿದ್ದು ಅವರ ವೃತ್ತಿಜೀವನದಲ್ಲಿ ಇದು ನಾಲ್ಕನೇ ಬಾರಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications