Asia Cup 2022: ಟೀಮ್ ಇಂಡಿಯಾಗೂ ಮುನ್ನ ಸೂಪರ್ 4 ಸುತ್ತಿಗೆ ಪ್ರವೇಶಿಸಲಿದೆ ಈ ತಂಡ!

ಸದ್ಯ ಯುಎಇಯಲ್ಲಿ ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿಯ ಪಂದ್ಯಗಳು ಜರುಗುತ್ತಿವೆ. ಪ್ರಸ್ತುತ ಗ್ರೂಪ್ ಹಂತದ ಪಂದ್ಯಗಳು ನಡೆಯುತ್ತಿದ್ದು, ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅಫ್ಘಾನಿಸ್ತಾನ ಭರ್ಜರಿ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಜಯ ಸಾಧಿಸಿತು.
ಈ ಮೂಲಕ ಎ ಗುಂಪಿನ ಅಂಕಪಟ್ಟಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಅಗ್ರ ಸ್ಥಾನದಲ್ಲಿದ್ದರೆ, ಬಿ ಗುಂಪಿನ ಅಂಕಪಟ್ಟಿಯಲ್ಲಿ ಮೊಹಮ್ಮದ್ ನಬಿ ನಾಯಕತ್ವದ ಅಫ್ಘಾನಿಸ್ತಾನ ಅಗ್ರಸ್ಥಾನದಲ್ಲಿದೆ. ಇನ್ನು ಎ ಗುಂಪಿನ ಹಾಂಗ್ ಕಾಂಗ್ ಹಾಗೂ ಬಿ ಗುಂಪಿನ ಬಾಂಗ್ಲಾದೇಶ ತಂಡಗಳು ಇನ್ನೂ ಸಹ ಪಂದ್ಯವನ್ನು ಆಡಬೇಕಿದೆ. ಆಡಿರುವ ಪಂದ್ಯಗಳಲ್ಲಿ ಸೋತಿರುವ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಗ್ರೂಪ್ ಹಂತದ ಪಂದ್ಯಗಳು ಮುಕ್ತಾಯವಾದ ನಂತರ ನಡೆಯಲಿರುವ ಸೂಪರ್ 4 ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳಬೇಕೆಂದರೆ ತಮ್ಮ ಮುಂದಿನ ಪಂದ್ಯಗಳಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಾಗಿದ್ದು, ತಮ್ಮ ಚೊಚ್ಚಲ ಪಂದ್ಯಗಳಲ್ಲಿ ಜಯ ಸಾಧಿಸಿರುವ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಸೂಪರ್ 4 ಸುತ್ತಿನ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡಿವೆ.
ಸೆಪ್ಟೆಂಬರ್ 2ರಂದು ನಡೆಯಲಿರುವ ಪಾಕಿಸ್ತಾನ ಮತ್ತು ಹಾಂಗ್ ಕಾಂಗ್ ತಂಡಗಳ ನಡುವಿನ ಪಂದ್ಯದ ಮೂಲಕ ಈ ಬಾರಿಯ ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯಗಳು ಮುಕ್ತಾಯವಾಗಲಿದ್ದು, ಉಭಯ ಗುಂಪುಗಳಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಳ್ಳುವ ತಂಡಗಳು ಸೂಪರ್ 4 ಸುತ್ತಿಗೆ ಆಯ್ಕೆಯಾಗಲಿದ್ದು, ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಗಳನ್ನು ಪಡೆದುಕೊಳ್ಳಲಿರುವ 2 ತಂಡಗಳು ಟೂರ್ನಿಯಿಂದ ಹೊರ ಬೀಳಲಿವೆ. ಸದ್ಯ ಪಾಕ್ ವಿರುದ್ಧ ಗೆದ್ದಿರುವ ಟೀಮ್ ಇಂಡಿಯಾ ಸೂಪರ್ 4 ಸುತ್ತಿಗೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದ್ದು ಭಾರತಕ್ಕೂ ಮುನ್ನ ಮತ್ತೊಂದು ತಂಡ ಸೂಪರ್ 4 ಸುತ್ತಿಗೆ ಲಗ್ಗೆ ಇಡುವ ಸಾಧ್ಯತೆಗಳು ಹೆಚ್ಚಿವೆ.

ಭಾರತಕ್ಕೂ ಮುನ್ನ ಸೂಪರ್ 4 ಸುತ್ತಿಗೆ ಅಫ್ಘಾನಿಸ್ತಾನ?
ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದ್ದ ಮೊಹಮ್ಮದ್ ನಬಿ ನಾಯಕತ್ವದ ಅಫ್ಘಾನಿಸ್ತಾನ ಇಂದು ( ಆಗಸ್ಟ್ 30 ) ತನ್ನ ಗುಂಪಿನ ಮತ್ತೊಂದು ತಂಡವಾದ ಬಾಂಗ್ಲಾದೇಶದ ವಿರುದ್ಧ ಸೆಣಸಾಟ ನಡೆಸಲಿದೆ. ಬಾಂಗ್ಲಾದೇಶ ತಂಡಕ್ಕಿಂತ ಅಫ್ಘಾನಿಸ್ತಾನ ಬಲಿಷ್ಠ ತಂಡವಾಗಿ ಕಾಣಲ್ಪಡುತ್ತಿದ್ದು, ಈ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಅಫ್ಘಾನಿಸ್ತಾನ ಮಣಿಸಿದರೆ ಅಧಿಕೃತವಾಗಿ ಸೂಪರ್ 4 ಸುತ್ತಿಗೆ ಪ್ರವೇಶವನ್ನು ಪಡೆದುಕೊಳ್ಳಲಿದೆ. ಈ ಮೂಲಕ ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಸೂಪರ್ 4 ಸುತ್ತಿಗೆ ಪ್ರವೇಶ ಪಡೆದುಕೊಳ್ಳುವ ಪ್ರಥಮ ತಂಡ ಎಂಬ ಖ್ಯಾತಿಗೆ ಅಫ್ಘಾನಿಸ್ತಾನ ಪಾತ್ರವಾಗಲಿದೆ. ಒಂದುವೇಳೆ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಬಾಂಗ್ಲಾದೇಶದ ವಿರುದ್ಧ ಸೋತರೆ ಸೆಪ್ಟೆಂಬರ್ 1ರಂದು ನಡೆಯಲಿರುವ ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಡುವಿನ ಪಂದ್ಯದ ಫಲಿತಾಂಶ ಅಫ್ಘಾನಿಸ್ತಾನದ ಸೂಪರ್ 4 ಪ್ರವೇಶವನ್ನು ನಿರ್ಧರಿಸಲಿದೆ.

ಗ್ರೂಪ್ ಹಂತದ ಉಳಿದ ಪಂದ್ಯಗಳ ವೇಳಾಪಟ್ಟಿ
30 ಆಗಸ್ಟ್: ಬಾಂಗ್ಲಾದೇಶ vs ಅಫ್ಘಾನಿಸ್ತಾನ (ದುಬೈ)
31 ಆಗಸ್ಟ್: ಭಾರತ vs ಹಾಂಗ್‌ಕಾಂಗ್ (ದುಬೈ)
1 ಸೆಪ್ಟೆಂಬರ್: ಶ್ರೀಲಂಕಾ vs ಬಾಂಗ್ಲಾದೇಶ (ದುಬೈ)
2 ಸೆಪ್ಟೆಂಬರ್: ಪಾಕಿಸ್ತಾನ vs ಹಾಂಗ್‌ಕಾಂಗ್ (ಶಾರ್ಜಾ)

ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಸ್ಕ್ವಾಡ್
ಅಫ್ಘಾನಿಸ್ತಾನ: ಮೊಹಮ್ಮದ್ ನಬಿ (ನಾಯಕ), ನಜಿಬುಲ್ಲಾ ಝದ್ರಾನ್, ಅಫ್ಸರ್ ಝಜೈ, ಅಜ್ಮತುಲ್ಲಾ ಒಮರ್ಝೈ, ಫರೀದ್ ಅಹ್ಮದ್ ಮಲಿಕ್, ಫಝಲ್ಹಕ್ ಫಾರೂಕಿ, ಹಸ್ಮತುಲ್ಲಾ ಶಾಹಿದಿ, ಹಜರತುಲ್ಲಾ ಝಜೈ, ಇಬ್ರಾಹಿಂ ಝದ್ರಾನ್, ಕರೀಮ್ ಜನತ್, ಮುಜೀಬ್ ನವ್ರನ್, ಮುಜೀಬ್ ನವ್ರನ್, ಮುಜೀಬ್, ನವ್ರನ್, ಮುಜೀಬ್, ನವ್ರನ್, ರಹಮಾನುಲ್ಲಾ ಗುರ್ಬಾಜ್, ರಶೀದ್ ಖಾನ್, ಸಮೀವುಲ್ಲಾ ಶಿನ್ವಾರಿ.
ಮೀಸಲು ಆಟಗಾರರು: ನಿಜತ್ ಮಸೂದ್, ಖೈಸ್ ಅಹ್ಮದ್, ಶರಫುದ್ದೀನ್ ಅಶ್ರಫ್.
ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಅನಾಮುಲ್ ಹಕ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೇನ್, ಮಹ್ಮುದುಲ್ಲಾ, ಮಹೇದಿ ಹಸನ್, ಮೊಹಮ್ಮದ್ ಸೈಫುದ್ದೀನ್, ಮುಸ್ತಾಫಿಜುರ್ ರೆಹಮಾನ್, ನಸುಮ್ ಅಹ್ಮದ್, ಸಬ್ಬಿರ್ ರೆಹಮಾನ್, ಮೆಹಿದಿ ಹಸನ್ ಪರ್ಜ್ ಮಿರಾಜ್, ತಸ್ಬಾನ್ ಮಿರಾಜ್, ಇ. , ಮೊಹಮ್ಮದ್ ನಯಿಮ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications